IND Vs ZIM 3rd ODI: ಕ್ಲೀನ್ ಸ್ವೀಪ್ ಮೇಲೆ ಭಾರತದ ಕಣ್ಣು; ಅಂತಿಮ ಹಣಾಹಣಿ ಬಗ್ಗೆ ಇಲ್ಲಿದೆ ಮಾಹಿತಿ
IND Vs ZIM 3rd ODI: ರಾಹುಲ್ ನಾಯಕತ್ವದಲ್ಲಿ ಭಾರತ ಮೊದಲ ಬಾರಿಗೆ ಸರಣಿ ಗೆದ್ದುಕೊಂಡಿದ್ದು, ಕ್ಲೀನ್ ಸ್ವೀಪ್ ಮೂಲಕ ಮೊದಲ ಗೆಲುವನ್ನು ದಾಖಲೆ ಪುಟಗಳಿಗೆ ಸೇರಿಸಲು ಪ್ರಯತ್ನಿಸುತ್ತಿದೆ.

ಜಿಂಬಾಬ್ವೆ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು ಭಾರತ ಗೆದ್ದುಕೊಂಡಿದ್ದು, ಇದೀಗ ಕೆಎಲ್ ರಾಹುಲ್ (KL Rahul) ನೇತೃತ್ವದ ತಂಡ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮೇಲೆ ಕಣ್ಣಿಟ್ಟಿದೆ. ಭಾರತ ಮೊದಲ ಪಂದ್ಯವನ್ನು 10 ವಿಕೆಟ್‌ಗಳಿಂದ ಮತ್ತು ಎರಡನೇ ಪಂದ್ಯವನ್ನು 5 ವಿಕೆಟ್‌ಗಳಿಂದ ಗೆದ್ದು ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ರಾಹುಲ್ ನಾಯಕತ್ವದಲ್ಲಿ ಭಾರತ ಮೊದಲ ಬಾರಿಗೆ ಸರಣಿ ಗೆದ್ದುಕೊಂಡಿದ್ದು, ಕ್ಲೀನ್ ಸ್ವೀಪ್ ಮೂಲಕ ಮೊದಲ ಗೆಲುವನ್ನು ದಾಖಲೆ ಪುಟಗಳಿಗೆ ಸೇರಿಸಲು ಪ್ರಯತ್ನಿಸುತ್ತಿದೆ. ಇಬ್ಬರ ನಡುವಿನ ಸರಣಿಯ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ಆಗಸ್ಟ್ 22 ರಂದು ನಡೆಯಲಿದೆ.
ಬೌಲರ್‌ಗಳ ಮೇಲೆ ಗಮನಹರಿಸಬೇಕಿದೆ
ಎರಡನೇ ಏಕದಿನ ಪಂದ್ಯದ ಕುರಿತು ಮಾತನಾಡುವುದಾದರೆ ಭಾರತ, ಆತಿಥೇಯರು ನೀಡಿದ್ದ 162 ರನ್‌ಗಳ ಗುರಿಯನ್ನು 146 ಎಸೆತಗಳಲ್ಲಿ 5 ವಿಕೆಟ್ ಕಳೆದುಕೊಂಡು ಸಾಧಿಸಿತು. ಆದರೆ, ಮೊದಲ ಏಕದಿನ ಪಂದ್ಯಕ್ಕೆ ಹೋಲಿಸಿದರೆ ಎರಡನೇ ಏಕದಿನ ಪಂದ್ಯದಲ್ಲಿ ಜಿಂಬಾಬ್ವೆ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದರು. ಭಾರತ ಸುಲಭವಾಗಿ ಗೆಲ್ಲಲು ಬಿಡಲಿಲ್ಲ. ಒಂದು ಹಂತದಲ್ಲಿ ಭಾರತ 97 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿತ್ತು. ಆದರೆ, ಇದಾದ ಬಳಿಕ ದೀಪಕ್ ಹೂಡಾ ಮತ್ತು ಸಂಜು ಸ್ಯಾಮ್ಸನ್ ಇನಿಂಗ್ಸ್ ಕಟ್ಟಿ ಭಾರತಕ್ಕೆ ಜಯ ತಂದುಕೊಟ್ಟರು.
ಭಾರತ ಮತ್ತು ಜಿಂಬಾಬ್ವೆ ನಡುವಿನ 3ನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರನೇ ಏಕದಿನ ಪಂದ್ಯ ಆಗಸ್ಟ್ 22 ರಂದು (ಸೋಮವಾರ) ನಡೆಯಲಿದೆ.
ಭಾರತ ಮತ್ತು ಜಿಂಬಾಬ್ವೆ ನಡುವಿನ 3 ನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಜಿಂಬಾಬ್ವೆ ನಡುವಿನ 3ನೇ ಏಕದಿನ ಪಂದ್ಯ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಲಿದೆ.
ಜಿಂಬಾಬ್ವೆ ಹಾಗೂ ಟೀಂ ಇಂಡಿಯಾ ನಡುವಿನ 3ನೇ ಏಕದಿನ ಪಂದ್ಯ ಯಾವಾಗ ಆರಂಭವಾಗಲಿದೆ?
ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರನೇ ಏಕದಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 12.45ಕ್ಕೆ ಆರಂಭವಾಗಲಿದೆ. ಟಾಸ್ 12:15 ಕ್ಕೆ ನಡೆಯಲಿದೆ.
ಜಿಂಬಾಬ್ವೆ ಮತ್ತು ಟೀಂ ಇಂಡಿಯಾ ನಡುವಿನ 3 ನೇ ODI ಪಂದ್ಯದ ನೇರ ಪ್ರಸಾರ ಯಾವ ಚಾನಲ್‌ನಲ್ಲಿ ನಡೆಯಲಿದೆ?
ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರನೇ ಪಂದ್ಯದ ನೇರ ಪ್ರಸಾರವನ್ನು ಅಭಿಮಾನಿಗಳು ವೀಕ್ಷಿಸಲು ಸಾಧ್ಯವಾಗುತ್ತದೆ.
ಭಾರತ-ಜಿಂಬಾಬ್ವೆ 3ನೇ ODI ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಆನ್‌ಲೈನ್‌ನಲ್ಲಿ ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಜಿಂಬಾಬ್ವೆ ನಡುವಿನ 3 ನೇ ODI ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು Sony ಲೈವ್ ಅಪ್ಲಿಕೇಶನ್‌ನಲ್ಲಿ ಮಾಡಲಾಗುತ್ತದೆ.
Published On - 7:01 pm, Sun, 21 August 22



