AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM 3rd ODI: ಗಿಲ್ ಭರ್ಜರಿ ಶತಕ: ಜಿಂಬಾಬ್ವೆಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ

IND vs ZIM 3rd ODI: 40 ರನ್​ಗಳಿಸಿ ಉತ್ತಮ ಬ್ಯಾಟಿಂಗ್ ಮುಂದುವರೆಸಿದ್ದ ಶಿಖರ್ ಧವನ್ ಅವರನ್ನೂ ಕೂಡ ಔಟ್ ಮಾಡುವ ಮೂಲಕ ಇವಾನ್ಸ್ ಜಿಂಬಾಬ್ವೆಗೆ 2ನೇ ಯಶಸ್ಸು ತಂದುಕೊಟ್ಟರು.

IND vs ZIM 3rd ODI: ಗಿಲ್ ಭರ್ಜರಿ ಶತಕ: ಜಿಂಬಾಬ್ವೆಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ
ಶುಭ್​ಮನ್ ಗಿಲ್
TV9 Web
| Edited By: |

Updated on:Aug 22, 2022 | 4:23 PM

Share

ಹರಾರೆಯ ಸ್ಪೋರ್ಟ್ಸ್​ ಮೈದಾನದಲ್ಲಿ ನಡೆಯುತ್ತಿರುವ ಜಿಂಬಾಬ್ವೆ ವಿರುದ್ದದ 3ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಆತಿಥೇಯರಿಗೆ 290 ರನ್​ಗಳ ಟಾರ್ಗೆಟ್ ನೀಡಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಶುಭ್​ಮನ್​ ಗಿಲ್ ಭರ್ಜರಿ ಶತಕ ಸಿಡಿಸುವ ಮೂಲಕ ಸ್ಪರ್ಧಾತ್ಮಕ ಪೇರಿಸಲು ನೆರವಾದರು. ಇದಕ್ಕೂ ಮುನ್ನ ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಹಾಗೂ ಶಿಖರ್ ಧವನ್ ಮೊದಲ ವಿಕೆಟ್​ಗೆ 63 ರನ್​​ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ ಬ್ರಾಡ್ ಇವಾನ್ಸ್ ಎಸೆತವನ್ನು ಗುರುತಿಸುವಲ್ಲಿ ಎಡವಿದ ರಾಹುಲ್ (30) ಕ್ಲೀನ್ ಬೌಲ್ಡ್ ಆಗುವ ಮೂಲಕ ನಿರಾಸೆ ಮೂಡಿಸಿದರು.

ಇನ್ನು 40 ರನ್​ಗಳಿಸಿ ಉತ್ತಮ ಬ್ಯಾಟಿಂಗ್ ಮುಂದುವರೆಸಿದ್ದ ಶಿಖರ್ ಧವನ್ ಅವರನ್ನೂ ಕೂಡ ಔಟ್ ಮಾಡುವ ಮೂಲಕ ಇವಾನ್ಸ್ ಜಿಂಬಾಬ್ವೆಗೆ 2ನೇ ಯಶಸ್ಸು ತಂದುಕೊಟ್ಟರು. 21 ಓವರ್​ನಲ್ಲಿ 84 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡಿದ್ದ ಟೀಮ್ ಇಂಡಿಯಾಗೆ ಈ ಹಂತದಲ್ಲಿ ಶುಭ್​ಮನ್ ಗಿಲ್ ಹಾಗೂ ಇಶಾನ್ ಕಿಶನ್ ಆಸರೆಯಾದರು.

3ನೇ ವಿಕೆಟ್​ಗೆ ಶತಕದ ಜೊತೆಯಾಟವಾಡಿದ ಶುಭ್​ಮನ್ ಗಿಲ್ ಹಾಗೂ ಕಿಶನ್ ಭರ್ಜರಿ ಬ್ಯಾಟಿಂಗ್ ನಡೆಸಿದರು. ಈ ವೇಳೆ 51 ಎಸೆತಗಳಲ್ಲಿ ಗಿಲ್ ಅರ್ಧಶತಕ ಬಾರಿಸಿದ ಬ್ಯಾಟ್ ಮೇಲೆಕ್ಕೆತ್ತಿದ್ದರು. ಅಷ್ಟೇ ಅಲ್ಲದೆ 40ನೇ ಓವರ್​ನಲ್ಲಿ ತಂಡದ ಮೊತ್ತವನ್ನು 200ರ ಗಡಿದಾಟಿಸಿದರು.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇನ್ನು 61 ಎಸೆತಗಳಲ್ಲಿ ಇಶಾನ್ ಕಿಶನ್ ಅರ್ಧಶತಕ ಪೂರೈಸಿ ಮಿಂಚಿದರು. ಆದರೆ ಹಾಫ್ ಸೆಂಚುರಿಯ ಬೆನ್ನಲ್ಲೇ ರನೌಟ್ ಆಗುವ ಮೂಲಕ ಕಿಶನ್ (50) ಹೊರನಡೆಯಬೇಕಾಯಿತು. ಆ ಬಳಿಕ ಬಂದ ದೀಪಕ್ ಹೂಡ ಕೇವಲ 1 ರನ್​ಗಳಿಸಿ ಇವಾನ್ಸ್ ಎಸೆತದಲ್ಲಿ ಬೌಲ್ಡ್ ಆಗಿ ನಿರ್ಗಮಿಸಿದರು. ಇನ್ನೊಂದೆಡೆ ಬಿರುಸಿನ ಆಟಕ್ಕೆ ಒತ್ತು ನೀಡಿದ್ದ ಶುಭ್​ಮನ್​ ಗಿಲ್ 82 ಎಸೆತಗಳಲ್ಲಿ 12 ಫೋರ್​ನೊಂದಿಗೆ ಚೊಚ್ಚಲ ಶತಕ ಪೂರೈಸಿ ಸಂಭ್ರಮಿಸಿದರು. ಇನ್ನು ಸಂಜು ಸ್ಯಾಮ್ಸನ್ 13 ಎಸೆತಗಳಲ್ಲಿ 15 ರನ್ ಬಾರಿಸಿ ಇನಿಂಗ್ಸ್ ಅಂತ್ಯಗೊಳಿಸಿದರೆ, ಅಕ್ಷರ್ ಪಟೇಲ್ 1 ರನ್​ ಬಾರಿಸಿ ವಿಕೆಟ್ ಒಪ್ಪಿಸಿದರು.

ಇದಾಗ್ಯೂ ಒಂದೆಡೆ ಗಟ್ಟಿಯಾಗಿ ನೆಲೆಯೂರಿದ್ದ ಶುಭ್​ಮನ್ ಗಿಲ್ 97 ಎಸೆತಗಳಲ್ಲಿ 130 ರನ್​ ಬಾರಿಸಿದರು. ಈ ಭರ್ಜರಿ ಇನಿಂಗ್ಸ್​ನಲ್ಲಿ 15 ಫೋರ್ ಹಾಗೂ 1 ಸಿಕ್ಸ್ ಒಳಗೊಂಡಿತ್ತು. ಇನ್ನು 50ನೇ ಓವರ್​ನಲ್ಲಿ ಬ್ರಾಡ್ ಇವಾನ್ಸ್​ಗೆ ವಿಕೆಟ್ ಒಪ್ಪಿಸುವ ಮೂಲಕ ಶುಭ್​ಮನ್​ ಗಿಲ್ ತಮ್ಮ ಚೊಚ್ಚಲ ಶತಕದ ಇನಿಂಗ್ಸ್ ಅಂತ್ಯಗೊಳಿಸಿದರು. ಈ ಶತಕದ ನೆರವಿನಿಂದ ಟೀಮ್ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 289 ರನ್​ ಕಲೆಹಾಕಿದೆ. ಈ ಮೂಲಕ ಜಿಂಬಾಬ್ವೆಗೆ ಗೆಲ್ಲಲು 290 ರನ್​ಗಳ ಕಠಿಣ ಗುರಿ ನೀಡಿದೆ.

ಭಾರತ ಪ್ಲೇಯಿಂಗ್ ಇಲೆವೆನ್: ಶಿಖರ್ ಧವನ್ , ಕೆಎಲ್ ರಾಹುಲ್ (ನಾಯಕ) , ಶುಭಮನ್ ಗಿಲ್ , ಇಶಾನ್ ಕಿಶನ್ , ದೀಪಕ್ ಹೂಡಾ , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಅಕ್ಷರ್ ಪಟೇಲ್ , ಶಾರ್ದೂಲ್ ಠಾಕೂರ್ , ದೀಪಕ್ ಚಾಹರ್ , ಕುಲದೀಪ್ ಯಾದವ್ , ಅವೇಶ್ ಖಾನ್

ಜಿಂಬಾಬ್ವೆ ಪ್ಲೇಯಿಂಗ್ ಇಲೆವೆನ್: ತಕುದ್ಜ್ವಾನಾಶೆ ಕೈಟಾನೊ, ಇನೋಸೆಂಟ್ ಕೈಯಾ, ಟೋನಿ ಮುನ್ಯೊಂಗಾ, ರೆಗಿಸ್ ಚಕಬ್ವಾ(ನಾಯಕ), ಸಿಕಂದರ್ ರಜಾ, ಸೀನ್ ವಿಲಿಯಮ್ಸ್, ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯಾಯುಚಿ, ರಿಚರ್ಡ್ ನಾಗರವಾ

Published On - 4:23 pm, Mon, 22 August 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​