IND vs ZIM: ಟೀಂ ಇಂಡಿಯಾ ನಾಯಕತ್ವದಲ್ಲಿ ಬದಲಾವಣೆ; ಶಿಖರ್ ಧವನ್ ಬದಲು ಕನ್ನಡಿಗನಿಗೆ ನಾಯಕತ್ವ

IND vs ZIM: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ಹಾಗೂ ಉಪನಾಯಕ ಕೆಎಲ್ ರಾಹುಲ್ ತಂಡಕ್ಕೆ ಸೇರ್ಪಡೆಗೊಂಡಿದ್ದು, ಇದೀಗ ಅವರೇ ತಂಡದ ನಾಯಕತ್ವ ವಹಿಸಲಿದ್ದಾರೆ.

IND vs ZIM: ಟೀಂ ಇಂಡಿಯಾ ನಾಯಕತ್ವದಲ್ಲಿ ಬದಲಾವಣೆ; ಶಿಖರ್ ಧವನ್ ಬದಲು ಕನ್ನಡಿಗನಿಗೆ ನಾಯಕತ್ವ
Follow us
TV9 Web
| Updated By: ಪೃಥ್ವಿಶಂಕರ

Updated on:Aug 11, 2022 | 9:39 PM

ಜಿಂಬಾಬ್ವೆ ಪ್ರವಾಸಕ್ಕಾಗಿ ಭಾರತ ಕ್ರಿಕೆಟ್ ತಂಡದಲ್ಲಿ (Indian cricket team) ದೊಡ್ಡ ಬದಲಾವಣೆಯಾಗಿದೆ. ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್​ಮನ್ ಹಾಗೂ ಉಪನಾಯಕ ಕೆಎಲ್ ರಾಹುಲ್ (KL Rahul) ತಂಡಕ್ಕೆ ಸೇರ್ಪಡೆಗೊಂಡಿದ್ದು, ಇದೀಗ ಅವರೇ ತಂಡದ ನಾಯಕತ್ವ ವಹಿಸಲಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (BCCI) ಗುರುವಾರ, ಆಗಸ್ಟ್ 11 ರಂದು ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ವೈದ್ಯಕೀಯ ತಂಡವು ರಾಹುಲ್ ಆಡಲು ಫಿಟ್ ಎಂದು ಘೋಷಿಸಿದೆ. ಹೀಗಾಗಿ ದಿಗ್ಗಜ ಆರಂಭಿಕ ಆಟಗಾರನನ್ನು ಜಿಂಬಾಬ್ವೆಗೆ ಕಳುಹಿಸಲು ಮಂಡಳಿಯು ನಿರ್ಧರಿಸಿದೆ ಎಂದು ಹೇಳಿಕೊಂಡಿದೆ.

ಬಿಸಿಸಿಐ ಈ ಬಗ್ಗೆ ಟ್ವೀಟ್ ಮಾಡಿದ್ದು, ಬಿಸಿಸಿಐ ವೈದ್ಯಕೀಯ ತಂಡವು ಕೆಎಲ್ ರಾಹುಲ್ ಅವರನ್ನು ಪರೀಕ್ಷೆ ಮಾಡಿದ್ದು, ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಲು ರಾಹುಲ್ ಫಿಟ್ ಎಂದು ಘೋಷಿಸಿದೆ. ಹೀಗಾಗಿ ಆಯ್ಕೆ ಸಮಿತಿಯು ರಾಹುಲ್​ಗೆ ತಂಡದ ನಾಯಕತ್ವವಹಿಸಲಾಗಿದ್ದು, ಶಿಖರ್ ಧವನ್ ಅವರನ್ನು ಉಪನಾಯಕನನ್ನಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ
Image
Har Ghar Tiramga Anthem: ಹರ್ ಘರ್ ತಿರಂಗಾ ಸ್ಫೂರ್ತಿ ಗೀತೆಯಲ್ಲಿ ಕನ್ನಡ ಕಲರವ; ಮನೆ ಮನೆಗೂ ತ್ರಿವರ್ಣ ಎಂದ ರಾಹುಲ್
Image
ಟಿ20 ವಿಶ್ವಕಪ್​ಗೂ ಮುನ್ನ ಟೀಂ ಇಂಡಿಯಾದಲ್ಲಿ ಬದಲಾವಣೆ; ರಾಹುಲ್ ಬದಲು ಹಾರ್ದಿಕ್​ಗೆ ಉಪನಾಯಕತ್ವ ಪಟ್ಟ!
Image
IND vs WI: ವಿಂಡೀಸ್ ವಿರುದ್ಧ ಟಿ20 ಸರಣಿಗೆ ಕನ್ನಡಿಗ ರಾಹುಲ್ ಸ್ಥಾನಕ್ಕೆ ಸಂಜು ಸ್ಯಾಮ್ಸನ್​ ಎಂಟ್ರಿ

ಕೆಎಲ್ ರಾಹುಲ್ ಎರಡು ತಿಂಗಳಿಗೂ ಹೆಚ್ಚು ಕಾಲ ಕ್ರಿಕೆಟ್ ಮೈದಾನದಿಂದ ಹೊರಗುಳಿದಿದ್ದಾರೆ. ಮೇ ಅಂತ್ಯದಲ್ಲಿ ಐಪಿಎಲ್ ಮುಗಿದ ಬಳಿಕ ಅವರು ಯಾವುದೇ ಪಂದ್ಯವನ್ನು ಆಡಿಲ್ಲ. ಜೂನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಗೆ ಟೀಂ ಇಂಡಿಯಾವನ್ನು ರಾಹುಲ್ ಮುನ್ನಡೆಸಬೇಕಿತ್ತು. ಆದರೆ ಸರಣಿ ಪ್ರಾರಂಭವಾಗುವ ಮೊದಲು ರಾಹುಲ್​ಗೆ ಇಂಜುರಿಯಾಯಿತು. ಹೀಗಾಗಿ ಅದರ ಚಿಕಿತ್ಸೆಗಾಗಿ, ಅವರು ಜರ್ಮನಿಗೆ ತೆರಳಿ ಅಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರು. ಅಲ್ಲಿಂದ ಹಿಂತಿರುಗಿದ ರಾಹುಲ್, ವೆಸ್ಟ್ ಇಂಡೀಸ್ ಪ್ರವಾಸದಲ್ಲಿ T20 ಸರಣಿಗೆ ಹೋಗಬೇಕಾಯಿತು. ಆದಾಗ್ಯೂ, ಅದಕ್ಕೂ ಮೊದಲು ಅವರಿಗೆ ಕೊರೊನಾ ಸೋಂಕು ತಗುಲಿತು. ಹೀಗಾಗಿ ರಾಹುಲ್ ಈ ಸರಣಿಯಿಂದಲೂ ಹೋರಗುಳಿದಿದ್ದರು.

ರಾಹುಲ್ ಅವರ ಫಿಟ್‌ನೆಸ್ ಸಮಸ್ಯೆಯ ಹಿನ್ನೆಲೆಯಲ್ಲಿ ಮಂಡಳಿಯು ಜಿಂಬಾಬ್ವೆ ಪ್ರವಾಸಕ್ಕಾಗಿ ಶಿಖರ್ ಧವನ್‌ಗೆ ತಂಡದ ನಾಯಕತ್ವವನ್ನು ಹಸ್ತಾಂತರಿಸಿತ್ತು. ಆದರೆ, ಇದೀಗ ರಾಹುಲ್ ವಾಪಸಾತಿಯೊಂದಿಗೆ ಮತ್ತೊಮ್ಮೆ ತಂಡದ ಹಿಡಿತ ರಾಹುಲ್ ಕೈಗೆ ಬಂದಿದೆ. ರಾಹುಲ್ ಎಲ್ಲಾ ಮೂರು ಮಾದರಿಗಳಲ್ಲಿ ತಂಡದ ಉಪನಾಯಕರಾಗಿದ್ದಾರೆ. ರಾಹುಲ್ ಆಗಮನದಿಂದ ಯಾವುದೇ ಆಟಗಾರನ ಸ್ಥಾನ ತೆರವಾಗದಿದ್ದರೂ, ರುತುರಾಜ್ ಗಾಯಕ್ವಾಡ್​ರಂತಹ ಯುವ ಆರಂಭಿಕ ಆಟಗಾರ ಆಡುವ ಅವಕಾಶವನ್ನು ಕಳೆದುಕೊಳ್ಳಬೇಕಾಗಿದೆ. ಮೂರು ಪಂದ್ಯಗಳ ಸರಣಿ ಆಗಸ್ಟ್ 18 ರಿಂದ ಆರಂಭವಾಗಲಿದೆ.

ಜಿಂಬಾಬ್ವೆ ಸರಣಿಗೆ ಭಾರತ ತಂಡ

ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್.

Published On - 9:22 pm, Thu, 11 August 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ