IND vs ZIM: ಭಾರತ-ಜಿಂಬಾಬ್ವೆ ಸರಣಿಯ ವೇಳಾಪಟ್ಟಿ, ಯಾವ ಚಾನೆಲ್ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ
IND vs ZIM Live Streaming: ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ. ಮುಂಬರುವ ಏಷ್ಯಾಕಪ್ ಹಿನ್ನೆಲೆಯಲ್ಲಿ ಭಾರತೀಯ ಆಟಗಾರರಿಗೆ ಈ ಸರಣಿಯು ತುಂಬಾ ಮಹತ್ವದ್ದಾಗಿದೆ.
ಭಾರತ-ಜಿಂಬಾಬ್ವೆ (India vs Zimbabwe 2022) ನಡುವಣ ಏಕದಿನ ಸರಣಿ ಗುರುವಾರದಿಂದ (ಆಗಸ್ಟ್ 18) ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 3 ಪಂದ್ಯಗಳನ್ನು ಆಡಲಾಗುತ್ತದೆ. ಇನ್ನು ಈ ಸರಣಿಯಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ ಸೇರಿದಂತೆ ಪ್ರಮುಖ ಆಟಗಾರರು ಹೊರಗುಳಿದಿದ್ದಾರೆ. ಹೀಗಾಗಿ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ. ಮುಂಬರುವ ಏಷ್ಯಾಕಪ್ ಹಿನ್ನೆಲೆಯಲ್ಲಿ ಭಾರತೀಯ ಆಟಗಾರರಿಗೆ ಈ ಸರಣಿಯು ತುಂಬಾ ಮಹತ್ವದ್ದಾಗಿದೆ.
ಈ ಸರಣಿಯ ವೇಳಾಪಟ್ಟಿ ಹೀಗಿದೆ:
- ಮೊದಲ ಏಕದಿನ ಪಂದ್ಯ- ಆಗಸ್ಟ್ 18, 2022 – 12:45 PM (IST)
- 2ನೇ ಏಕದಿನ ಪಂದ್ಯ- ಆಗಸ್ಟ್ 20, 2022 – 12:45 PM (IST)
- 3ನೇ ಏಕದಿನ ಪಂದ್ಯ- ಆಗಸ್ಟ್ 22, 2022 – 12:45 PM (IST)
ಈ ಎಲ್ಲಾ ಪಂದ್ಯಗಳು ಹರಾರೆಯ ಸ್ಪೋರ್ಟ್ಸ್ ಕ್ಲಬ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಯಾವ ಚಾನೆಲ್ನಲ್ಲಿ ನೇರಪ್ರಸಾರ? ಭಾರತ ಮತ್ತು ಜಿಂಬಾಬ್ವೆ ನಡುವಿನ ಮೊದಲ ಏಕದಿನ ಪಂದ್ಯವನ್ನು ಸೋನಿ ಚಾನೆಲ್ (Sony Sports Network) ಲೈವ್ ಟೆಲಿಕಾಸ್ಟ್ ಮಾಡಲಿದೆ. ಹಾಗೆಯೇ ಸೋನಿ ಲೈವ್ ಆ್ಯಪ್ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ. ಜಿಂಬಾಬ್ವೆಯಲ್ಲಿ ಸೂಪರ್‌ಸ್ಪೋರ್ಟ್ ಟಿವಿಯಲ್ಲಿ ನೇರ ಪ್ರಸಾರವಾಗಲಿದೆ.
Getting into the groove ahead of the first #ZIMvIND ODI ? ? #TeamIndia pic.twitter.com/QFUQVdUZLQ
— BCCI (@BCCI) August 16, 2022
ಈ ಸರಣಿಗೆ ಆಯ್ಕೆಯಾದ ಟೀಮ್ ಇಂಡಿಯಾ ಹೀಗಿದೆ: ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್ (ಉಪ ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ , ದೀಪಕ್ ಚಹಾರ್, ಶಹಬಾಜ್ ಅಹ್ಮದ್.
ಜಿಂಬಾಬ್ವೆ ತಂಡ ಹೀಗಿದೆ: ರೆಗಿಸ್ ಚಕಬ್ವಾ (ನಾಯಕ), ತನಕಾ ಚಿವಾಂಗಾ, ಬ್ರಾಡ್ಲಿ ಇವಾನ್ಸ್, ಲ್ಯೂಕ್ ಜೊಂಗ್ವೆ, ರಿಯಾನ್ ಬರ್ಲ್, ಇನೊಸೆಂಟ್ ಕೈಯಾ, ಕೈಟಾನೊ ತಕುಡ್ಜ್ವಾನಾಶೆ, ಕ್ಲೈವ್ ಮದಂಡೆ, ವೆಸ್ಲಿ ಮಾಧೆವೆರೆ, ತಡಿವಾನಾಶೆ ಮರುಮಣಿ, ಜಾನ್ ಮಸಾರಾ, ಟೋನಿ ಮುನ್ಯೊಂಗಾರ್ವಾ, ರಿಚರ್ಡ್ ನ್ಗಾರ್ವಾ, ಸಿಕಂದರ್ ರಾಜಾ, ಮಿಲ್ಟನ್ ಶುಂಬಾ, ಡೊನಾಲ್ಡ್ ತಿರಿಪಾನೊ