
ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಂ ಇಂಡಿಯಾ (Team India) ಟಿ20 ವಿಶ್ವಕಪ್ (T20 World Cup) ಸೆಮಿಫೈನಲ್ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಭಾನುವಾರ ಮೈದಾನಕ್ಕೆ ಇಳಿಯಲಿದೆ. ಮೆಲ್ಬೋರ್ನ್ ಮೈದಾನದಲ್ಲಿ ಜಿಂಬಾಬ್ವೆ, ಭಾರತದ ಸವಾಲನ್ನು ಎದುರಿಸಲಿದ್ದು, ಪಂದ್ಯವನ್ನು ದೊಡ್ಡ ಅಂತರದಲ್ಲಿ ಗೆಲ್ಲಲು ಟೀಂ ಇಂಡಿಯಾ ಪ್ರಯತ್ನಿಸಲಿದೆ. ಇದರಿಂದಾಗಿ ದಿನದ ಎರಡನೇ ಪಂದ್ಯದಲ್ಲಿ ಯಾವುದೇ ಪಲಿತಾಂಶ ಹೊರಬಿದ್ದರು ಟೀಮ್ ಇಂಡಿಯಾ ನಿಶ್ಷಿಂತೆಯಿಂದ ಸೆಮಿಫೈನಲ್ ತಲುಪಲಿದೆ. ವಾಸ್ತವವಾಗಿ ಭಾರತ ಗುಂಪು 2 ರಲ್ಲಿ 6 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ 5 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನ 4 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.
ಸೆಮಿಫೈನಲ್‌ನಿಂದ ಪಾಕಿಸ್ತಾನ ಇನ್ನೂ ಸಂಪೂರ್ಣವಾಗಿ ಹೊರಬೀಳದಿರುವುದರಿಂದ ನಾಳಿನ ಪಂದ್ಯಗಳು ಬಲುರೋಚಕವಾಗಿವೆ. ಭಾನುವಾರ ಮೂರೂ ತಂಡಗಳು ಮೈದಾನಕ್ಕಿಳಿಯಲಿದ್ದು, ದಿನದ ಮೊದಲ ಪಂದ್ಯ ದಕ್ಷಿಣ ಆಫ್ರಿಕಾ ಮತ್ತು ನೆದರ್ಲೆಂಡ್ಸ್ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆದ್ದರೆ ಅದು ಸುಲಭವಾಗಿ ಸೆಮಿಫೈನಲ್ ತಲುಪಲಿದೆ. ದಿನದ ಎರಡನೇ ಪಂದ್ಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವೆ ನಡೆಯಲಿದೆ. ಪಾಕಿಸ್ತಾನ ಕೂಡ ತನ್ನ ಪಂದ್ಯವನ್ನು ಗೆದ್ದರೆ, ಜಿಂಬಾಬ್ವೆ ವಿರುದ್ಧ ಭಾರತ ದೊಡ್ಡ ಗೆಲುವು ದಾಖಲಿಸುವುದು ಅನಿವಾರ್ಯವಾಗುತ್ತದೆ. ಏಕೆಂದರೆ ರನ್ ರೇಟ್‌ನಲ್ಲಿ ಭಾರತಕ್ಕಿಂತ ಪಾಕಿಸ್ತಾನ ಉತ್ತಮವಾಗಿದೆ.
ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಹೀಗಿದೆ
ಭಾರತ ಮತ್ತು ಜಿಂಬಾಬ್ವೆ ನಡುವಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಜಿಂಬಾಬ್ವೆ ನಡುವಿನ ಪಂದ್ಯವು ಭಾನುವಾರ, ನವೆಂಬರ್ 6 ರಂದು ನಡೆಯಲಿದೆ.
ಭಾರತ ಮತ್ತು ಜಿಂಬಾಬ್ವೆ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಜಿಂಬಾಬ್ವೆ ನಡುವಿನ ಟಿ20 ವಿಶ್ವಕಪ್ ಪಂದ್ಯವು ಮೆಲ್ಬೋರ್ನ್‌ನ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ ಮತ್ತು ಜಿಂಬಾಬ್ವೆ ನಡುವಿನ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?
ಭಾರತ ಮತ್ತು ಜಿಂಬಾಬ್ವೆ ನಡುವಿನ ಟಿ20 ವಿಶ್ವಕಪ್ ಪಂದ್ಯವು ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ 1 ಗಂಟೆಗೆ ನಡೆಯಲಿದೆ.
ಭಾರತ ಮತ್ತು ಜಿಂಬಾಬ್ವೆ ನಡುವಿನ ಪಂದ್ಯದ ನೇರ ಪ್ರಸಾರ ಯಾವ ಚಾನೆಲ್ನಲ್ಲಿ?
ಭಾರತ ಮತ್ತು ಜಿಂಬಾಬ್ವೆ ನಡುವಿನ ಪಂದ್ಯದ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನಲ್‌ಗಳಲ್ಲಿ ನಡೆಯಲಿದೆ.
ಭಾರತ ಮತ್ತು ಜಿಂಬಾಬ್ವೆ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹದು?
ಭಾರತ ಮತ್ತು ಜಿಂಬಾಬ್ವೆ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಇರುತ್ತದೆ. ಹಾಗೆಯೇ TV9Kannada.com ನಲ್ಲಿ ಈ ಪಂದ್ಯದ ಲೈವ್ ನವೀಕರಣಗಳನ್ನು ಸಹ ಓದಬಹುದು.