AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಭಾರತ- ಜಿಂಬಾಬ್ವೆ ಫೈಟ್​ಗೆ ಮಳೆ ಅಡ್ಡಿ? ಪಂದ್ಯ ರದ್ದಾದರೆ ಭಾರತದ ಕನಸು ಭಗ್ನ

India vs Zimbabwe T20 World Cup Super 8: ಟಿ20 ವಿಶ್ವಕಪ್ ಸೂಪರ್ 8 ಹಂತದಲ್ಲಿ ಭಾರತ ಮತ್ತು ಜಿಂಬಾಬ್ವೆ ನಡುವೆ 'ಮಾಡು ಇಲ್ಲವೇ ಮಡಿ' ಪಂದ್ಯ ನಡೆಯಲಿದೆ. ಚೆನ್ನೈನಲ್ಲಿ ಈ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ ಎರಡೂ ತಂಡಗಳಿಗಿದೆ. ಮಳೆ ಬಂದರೆ ಭಾರತ ಸೆಮಿಫೈನಲ್ ರೇಸ್‌ನಿಂದ ಹೊರಬೀಳುವ ಸಾಧ್ಯತೆ ಹೆಚ್ಚು. ಚೆನ್ನೈ ಪಿಚ್ ಸ್ಪಿನ್ನರ್‌ಗಳಿಗೆ ಸವಾಲಾಗಿದ್ದು, ಭಾರತದ ಮೇಲೆ ಹೆಚ್ಚಿನ ಒತ್ತಡವಿದೆ. ಎರಡೂ ತಂಡಗಳು ಸೆಮಿಫೈನಲ್‌ಗೆ ತಲುಪಲು ಈ ಪಂದ್ಯ ನಿರ್ಣಾಯಕ.

IND vs ZIM: ಭಾರತ- ಜಿಂಬಾಬ್ವೆ ಫೈಟ್​ಗೆ ಮಳೆ ಅಡ್ಡಿ? ಪಂದ್ಯ ರದ್ದಾದರೆ ಭಾರತದ ಕನಸು ಭಗ್ನ
Ind Vs Zim Weather
ಪೃಥ್ವಿಶಂಕರ
|

Updated on: Feb 25, 2026 | 9:21 PM

Share

ಭಾರತ ಹಾಗೂ ಜಿಂಬಾಬ್ವೆ (India vs Zimbabwe) ಎರಡೂ ತಂಡಗಳು ಟಿ20 ವಿಶ್ವಕಪ್​ನ (T20 World Cup) ಗುಂಪು ಹಂತದಲ್ಲಿ ಅಜೇಯರಾಗಿ ಉಳಿದು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದಿದ್ದವು. ಆದರೆ ಈ ಎರಡೂ ತಂಡಗಳು ಸೂಪರ್ 8 ಸುತ್ತಿನಲ್ಲಿ ಗೆಲುವಿನ ಆರಂಭವನ್ನು ಪಡೆಯುವಲ್ಲಿ ವಿಫಲವಾಗಿವೆ. ಆದ್ದರಿಂದ ಈಗ ಎರಡೂ ತಂಡಗಳಿಗೆ ಪರಸ್ಪರ ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯ ಚೆನ್ನೈನಲ್ಲಿ ನಡೆಯುತ್ತಿರುವುದರಿಂದ ಟೀಂ ಇಂಡಿಯಾಗೆ ತವರಿನ ಲಾಭ ಸಿಗಬಹುದು. ಆದಾಗ್ಯೂ ಟೀಂ ಇಂಡಿಯಾ ಈ ಪಂದ್ಯದಲ್ಲಿ ಮೈಮರೆತರೆ ಸೋಲು ಕಟ್ಟಿಟ್ಟ ಬುತ್ತಿ. ಏಕೆಂದರೆ, ಗುಂಪು ಹಂತದಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳಿಗೆ ಜಿಂಬಾಬ್ವೆ ಆಘಾತ ನೀಡಿದೆ. ಆದ್ದರಿಂದ, ಜಿಂಬಾಬ್ವೆಗೆ ಹೋಲಿಸಿದರೆ, ಈ ಪಂದ್ಯದಲ್ಲಿ ಭಾರತ ಹೆಚ್ಚಿನ ಒತ್ತಡದೊಂದಿಗೆ ಕಣಕ್ಕಿಳಿಯಲಿದೆ.

ಚೆನ್ನೈ ಹವಾಮಾನ ಹೇಗಿರಲಿದೆ?

ಎರಡೂ ತಂಡಗಳ ನಡುವಿನ ಪಂದ್ಯವು ಫೆಬ್ರವರಿ 26 ರ ಗುರುವಾರ ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೆಮಿಫೈನಲ್ ರೇಸ್‌ನಲ್ಲಿ ಉಳಿಯಬೇಕಾದರೆ ಎರಡೂ ತಂಡಗಳು ಗೆಲ್ಲುವುದು ಕಡ್ಡಾಯವಾಗಿದೆ. ಆದ್ದರಿಂದ, ಎರಡೂ ತಂಡಗಳು ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯಲಿವೆ. ಆದರೆ ಈ ಪಂದ್ಯ ಮಳೆಯಿಂದಾಗಿ ರದ್ದಾದರೆ ಏನಾಗಲಿದೆ?. ಇದಕ್ಕೆ ಉತ್ತರ, ಮಳೆ ಅಥವಾ ಇನ್ನಾವುದೇ ಕಾರಣದಿಂದಾಗಿ ಈ ಪಂದ್ಯ ನಡೆಯದಿದ್ದರೆ, ಟೀಂ ಇಂಡಿಯಾ ಬಹುತೇಕ ಟೂರ್ನಿಯಿಂದ ಹೊರಬೀಳಲಿದೆ.

ಪಂದ್ಯ ರದ್ದಾದರೆ, ಎರಡೂ ತಂಡಗಳು ತಲಾ 1 ಅಂಕಗಳನ್ನು ಪಡೆಯುತ್ತವೆ. ಅಲ್ಲದೆ, ಭಾರತ ಮತ್ತು ಜಿಂಬಾಬ್ವೆ ಎರಡೂ ತಂಡಗಳು ಸೂಪರ್ 8 ಸುತ್ತಿನಲ್ಲಿ ತಮ್ಮ ಮೊದಲ ಪಂದ್ಯವನ್ನು ದೊಡ್ಡ ಅಂತರದಿಂದ ಸೋತಿವೆ. ಆದ್ದರಿಂದ, ಸೆಮಿಫೈನಲ್ ತಲುಪಲು ಎರಡೂ ತಂಡಗಳು ಉಳಿದ ಪಂದ್ಯಗಳನ್ನು ದೊಡ್ಡ ಅಂತರದಿಂದ ಗೆಲ್ಲಬೇಕು. ಮಳೆ ಅದಕ್ಕೆ ಅಡ್ಡಿಪಡಿಸಿದರೆ, ಬ್ಯಾಕಪ್ ಖಚಿತ. ಹವಾಮಾನ ಮುನ್ಸೂಚಕ ಅಕ್ಯೂವೆದರ್ ಪ್ರಕಾರ, ಗುರುವಾರ ಚೆನ್ನೈನಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ. ಹೀಗಾಗಿ ಅಭಿಮಾನಿಗಳು ಯಾವುದೇ ಆತಂಕವಿಲ್ಲದೆ ಪೂರ್ಣ ಪಂದ್ಯವನ್ನು ವೀಕ್ಷಿಸಬಹುದು.

IND vs ZIM: ಭಾರತ- ಜಿಂಬಾಬ್ವೆ ನಡುವಿನ ನಿರ್ಣಾಯಕ ಪಂದ್ಯ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ?

ಸ್ಪಿನ್ನರ್‌ಗಳ ಸವಾಲು

ಚೆನ್ನೈ ಪಿಚ್‌ನಲ್ಲಿ ಆರಂಭದಲ್ಲಿ ಬ್ಯಾಟಿಂಗ್ ಮಾಡುವುದು ಸುಲಭ. ಆದರೆ ಬ್ಯಾಟ್ಸ್‌ಮನ್‌ಗಳು ಸ್ಪಿನ್ನರ್‌ಗಳನ್ನು ಹೇಗೆ ನಿಭಾಯಿಸುತ್ತಾರೆ? ಎಂಬುದರ ಮೇಲೆ ಟಾರ್ಗೆಟ್ ನಿರ್ಧಾರವಾಗುತ್ತದೆ. 2026 ರ ಟಿ20 ವಿಶ್ವಕಪ್‌ನಲ್ಲಿ ಇಲ್ಲಿ ಇಲ್ಲಿಯವರೆಗೆ ಆರು ಪಂದ್ಯಗಳು ನಡೆದಿದ್ದು, ಬ್ಯಾಟ್ಸ್‌ಮನ್‌ಗಳು ಸ್ಪಷ್ಟವಾಗಿ ಪ್ರಾಬಲ್ಯ ಸಾಧಿಸಿದ್ದಾರೆ, ಸ್ಪಿನ್ನರ್‌ಗಳು ಮತ್ತು ವೇಗದ ಬೌಲರ್‌ಗಳು ವಿಕೆಟ್ ಪಡೆಯುವುದು ಕಷ್ಟಕರವಾಗಿದೆ. ಟಿ 20 ವಿಶ್ವಕಪ್‌ನಲ್ಲಿ ಇಲ್ಲಿ ಮೊದಲು ಬ್ಯಾಟಿಂಗ್ ಮಾಡುವವರ ಸರಾಸರಿ ಸ್ಕೋರ್ 180 ರಿಂದ 200 ರನ್‌ಗಳವರೆಗೆ ಇದೆ. ಆದ್ದರಿಂದ, ಮೊದಲು ಬ್ಯಾಟಿಂಗ್ ಮಾಡುವ ತಂಡವು 200 ಕ್ಕಿಂತ ಹೆಚ್ಚು ಸ್ಕೋರ್‌ಗೆ ಗುರಿಯಿಡಬೇಕು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ
ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ
ವಿಡಿಯೋ: ಆಂಬ್ಯುಲೆನ್ಸ್‌ನಲ್ಲೇ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!
ವಿಡಿಯೋ: ಆಂಬ್ಯುಲೆನ್ಸ್‌ನಲ್ಲೇ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!
ಯುಗಾದಿ ವರ್ಷ ಭವಿಷ್ಯ;ಗ್ರಹಗಳ ಸಂಚಾರ ಮತ್ತು ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ;ಗ್ರಹಗಳ ಸಂಚಾರ ಮತ್ತು ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ