IND vs ZIM: ಸೇಡಿನ ಸಮರದಲ್ಲಿ 100 ರನ್‌ಗಳಿಂದ ಗೆದ್ದ ಟೀಂ ಇಂಡಿಯಾ..!
IND vs ZIM: ಜಿಂಬಾಬ್ವೆ ವಿರುದ್ಧ ಇಂದು ನಡೆದ ಎರಡನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಯಂಗ್ ಇಂಡಿಯಾ, ಆತಿಥೇಯ ತಂಡವನ್ನು 100 ರನ್‌ಗಳಿಂದ ಮಣಿಸಿದೆ. ನಿನ್ನೆ ಇದೇ ಮೈದಾನದಲ್ಲಿ ನಡೆದಿದ್ದ ಮೊದಲ ಟಿ20 ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿ ಸಾಕಷ್ಟು ಟೀಕೆಗಳಿಗೆ ಒಳಗಾಗಿತ್ತು. ಆದರೆ ಇಂದು ಭರ್ಜರಿ ಪುನರಾಗಮನ ಮಾಡಿರುವ ಟೀಂ ಇಂಡಿಯಾ ತನ್ನ ಚಾಂಪಿಯನ್ ಆಟವನ್ನು ಮತ್ತೊಮ್ಮೆ ಪ್ರದರ್ಶಿಸಿದೆ.
ಜಿಂಬಾಬ್ವೆ ವಿರುದ್ಧ ಇಂದು ನಡೆದ ಎರಡನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಯಂಗ್ ಇಂಡಿಯಾ, ಆತಿಥೇಯ ತಂಡವನ್ನು 100 ರನ್‌ಗಳಿಂದ ಮಣಿಸಿದೆ. ನಿನ್ನೆ ಇದೇ ಮೈದಾನದಲ್ಲಿ ನಡೆದಿದ್ದ ಮೊದಲ ಟಿ20 ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿ ಸಾಕಷ್ಟು ಟೀಕೆಗಳಿಗೆ ಒಳಗಾಗಿತ್ತು. ಆದರೆ ಇಂದು ಭರ್ಜರಿ ಪುನರಾಗಮನ ಮಾಡಿರುವ ಟೀಂ ಇಂಡಿಯಾ ತನ್ನ ಚಾಂಪಿಯನ್ ಆಟವನ್ನು ಮತ್ತೊಮ್ಮೆ ಪ್ರದರ್ಶಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 234 ರನ್ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಜಿಂಬಾಬ್ವೆ ತಂಡ ಆರಂಭದಿಂದಲೇ ಪೆವಿಲಿಯನ್ ಪರೇಡ್ ಆರಂಭಿಸಿ 18.4 ಓವರ್‌ಗಳಲ್ಲಿ 134 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಟೀಂ ಇಂಡಿಯಾ ಈ ಪಂದ್ಯದಲ್ಲಿ ಭರ್ಜರಿ ಕಮ್ ಬ್ಯಾಕ್ ಮಾಡಿ 100 ರನ್ ಗಳ ಭರ್ಜರಿ ಜಯ ಸಾಧಿಸಿತು.
ಅಭಿಷೇಕ್ ಶತಕ
ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ಶುಭ್ಮನ್ ಗಿಲ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಅದರಂತೆ ಭಾರತದ ಬ್ಯಾಟ್ಸ್‌ಮನ್‌ಗಳು ಅತ್ಯಂತ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿ 20 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 234 ರನ್ ಕಲೆಹಾಕಿದರು. ನಾಯಕ ಶುಭ್ಮನ್ ಗಿಲ್ ಕೇವಲ 2 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಆದರೆ ಇದು ಭಾರತದ ಬ್ಯಾಟಿಂಗ್ ಮೇಲೆ ಪರಿಣಾಮ ಬೀರಲಿಲ್ಲ. ಅಭಿಷೇಕ್ ಶರ್ಮಾ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದರು. ಅವರು 47 ಎಸೆತಗಳಲ್ಲಿ 100 ರನ್ ಗಳಿಸಿದರು. ಇದು ಅವರ ಅಂತರರಾಷ್ಟ್ರೀಯ ವೃತ್ತಿಜೀವನದ ಮೊದಲ ಶತಕವಾಗಿದ್ದು, ಈ ಸಿಡಿಲಬ್ಬರದ ಬ್ಯಾಟಿಂಗ್ನಲ್ಲಿ ಅವರು 7 ಬೌಂಡರಿ ಮತ್ತು 8 ಸಿಕ್ಸರ್‌ಗಳನ್ನು ಸಹ ಬಾರಿಸಿದರು.
Win in the 2nd T20I ✅
Strong bowling performance 👌
3️⃣ wickets each for @ksmukku4 and @Avesh_62️⃣ wickets for Ravi Bishnoi1️⃣ wicket for @Sundarwashi5
Scorecard ▶️ https://t.co/yO8XjNqmgW#TeamIndia | #ZIMvIND pic.twitter.com/YxQ2e5vtIU
— BCCI (@BCCI) July 7, 2024
ರಿಂಕು- ರುತುರಾಜ್ ಸ್ಫೋಟಕ ಬ್ಯಾಟಿಂಗ್
ಈ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಕೂಡ ಅದ್ಭುತ ಇನ್ನಿಂಗ್ಸ್ ಆಡಿದರು. ಅವರು 47 ಎಸೆತಗಳಲ್ಲಿ 77 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು. ಈ ಅದ್ಭುತ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಮತ್ತು 1 ಸಿಕ್ಸರ್ ಕೂಡ ಸೇರಿದ್ದವು. ಅದೇ ವೇಳೆಗೆ ಕಳೆದ ಪಂದ್ಯದಲ್ಲಿ ಖಾತೆ ತೆರೆಯದೇ ಔಟಾಗಿದ್ದ ರಿಂಕು ಸಿಂಗ್ ಕೂಡ ಸ್ಫೋಟಕ ಇನ್ನಿಂಗ್ಸ್ ಆಡಿದರು. ಅವರು 22 ಎಸೆತಗಳಲ್ಲಿ 2 ಬೌಂಡರಿ ಮತ್ತು 5 ಸಿಕ್ಸರ್‌ಗಳ ಸಹಾಯದಿಂದ ಅಜೇಯ 48 ರನ್ ಬಾರಿಸಿದರು.
ಮುಂದುವರೆದ ಬೌಲರ್ಗಳ ಪರಾಕ್ರಮ
ಈ ಪಂದ್ಯದಲ್ಲಿ ಬ್ಯಾಟ್ಸ್‌ಮನ್‌ಗಳ ನಂತರ ಬೌಲರ್‌ಗಳು ಕೂಡ ತಮ್ಮ ಕೈಚಳಕ ತೋರಿದರು. ಹೀಗಾಗಿ ಆರಂಭದಿಂದಲೂ ನಿಯಮಿತ ಅಂತರದಲ್ಲಿ ವಿಕೆಟ್ಗಳನ್ನು ಕಳೆದುಕೊಳ್ಳುತ್ತ ಸಾಗಿದ ಜಿಂಬಾಬ್ವೆ ತಂಡ 18.4 ಓವರ್‌ಗಳಲ್ಲಿ 134 ರನ್ ಗಳಿಸಿ ಆಲೌಟ್ ಆಯಿತು. ಈ ಪಂದ್ಯದಲ್ಲಿ ಅವೇಶ್ ಖಾನ್ ಮತ್ತು ಮುಖೇಶ್ ಕುಮಾರ್ ಭಾರತದ ಪರ ಗರಿಷ್ಠ ತಲಾ 3 ವಿಕೆಟ್ ಪಡೆದರು. ಮತ್ತೊಮ್ಮೆ ರನ್ಗಳಿಗೆ ಕಡಿವಾಣ ಹಾಕುವ ಕೆಲಸ ಮಾಡಿದ ರವಿ ಬಿಷ್ಣೋಯ್ 4 ಓವರ್‌ಗಳಲ್ಲಿ ಕೇವಲ 11 ರನ್ ನೀಡಿ 2 ವಿಕೆಟ್ ಪಡೆದರು. ಇವರಲ್ಲದೇ ವಾಷಿಂಗ್ಟನ್ ಸುಂದರ್ ಕೂಡ 1 ವಿಕೆಟ್ ಪಡೆದರು. ಇದರಿಂದಾಗಿ ಟೀಂ ಇಂಡಿಯಾ ಈ ಪಂದ್ಯವನ್ನು 100 ರನ್‌ಗಳಿಂದ ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ಉಭಯ ತಂಡಗಳ ನಡುವಿನ ಸರಣಿ ಇದೀಗ 1-1 ರಿಂದ ಸಮಬಲ ಸಾಧಿಸಿದೆ. ಇನ್ನು ಸರಣಿಯ ಮೂರನೇ ಪಂದ್ಯ ಜುಲೈ 10 ರಂದು ನಡೆಯಲಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:05 pm, Sun, 7 July 24