AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಜಿಂಬಾಬ್ವೆ ವಿರುದ್ಧ 23 ರನ್​ಗಳಿಂದ ಗೆದ್ದ ಟೀಂ ಇಂಡಿಯಾ

IND vs ZIM: ಜಿಂಬಾಬ್ವೆ ವಿರುದ್ಧ ಇಂದು ನಡೆದ ಮೂರನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಯಂಗ್ ಇಂಡಿಯಾ, ಆತಿಥೇಯ ತಂಡವನ್ನು 23 ರನ್​ಗಳಿಂದ ಮಣಿಸಿದೆ. ಇದೇ ಮೈದಾನದಲ್ಲಿ ನಡೆದಿದ್ದ ಎರಡನೇ ಟಿ20 ಪಂದ್ಯದಲ್ಲಿ 100 ರನ್​ಗಳಿಂದ ಗೆದ್ದಿದ್ದ ಟೀಂ ಇಂಡಿಯಾ ತನ್ನ ಚಾಂಪಿಯನ್ ಆಟವನ್ನು ಮತ್ತೊಮ್ಮೆ ಪ್ರದರ್ಶಿಸಿ ಸತತ ಎರಡನೇ ಪಂದ್ಯದಲ್ಲಿ ಗೆಲುವು ದಾಖಲಿಸಿದೆ.

IND vs ZIM: ಜಿಂಬಾಬ್ವೆ ವಿರುದ್ಧ 23 ರನ್​ಗಳಿಂದ ಗೆದ್ದ ಟೀಂ ಇಂಡಿಯಾ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Jul 10, 2024 | 8:11 PM

Share

ಜಿಂಬಾಬ್ವೆ ವಿರುದ್ಧ ಇಂದು ನಡೆದ ಮೂರನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಯಂಗ್ ಇಂಡಿಯಾ, ಆತಿಥೇಯ ತಂಡವನ್ನು 23 ರನ್​ಗಳಿಂದ ಮಣಿಸಿದೆ. ಇದೇ ಮೈದಾನದಲ್ಲಿ ನಡೆದಿದ್ದ ಎರಡನೇ ಟಿ20 ಪಂದ್ಯದಲ್ಲಿ 100 ರನ್​ಗಳಿಂದ ಗೆದ್ದಿದ್ದ ಟೀಂ ಇಂಡಿಯಾ ತನ್ನ ಚಾಂಪಿಯನ್ ಆಟವನ್ನು ಮತ್ತೊಮ್ಮೆ ಪ್ರದರ್ಶಿಸಿ ಸತತ ಎರಡನೇ ಪಂದ್ಯದಲ್ಲಿ ಗೆಲುವು ದಾಖಲಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 182 ರನ್ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಜಿಂಬಾಬ್ವೆ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 159 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಭಾರತ 2-1 ಅಂತರದ ಮುನ್ನಡೆ ಕಾಯ್ದುಕೊಂಡಿದೆ.

ಗಿಲ್- ಸುಂದರ್ ಗೆಲುವಿನ ರೂವಾರಿಗಳು

ಟೀಂ ಇಂಡಿಯಾದ ಗೆಲುವಿನ ಹೀರೋಗಳೆಂದರೆ ನಾಯಕ ಶುಭ್‌ಮನ್ ಗಿಲ್ ಮತ್ತು ಆಫ್ ಸ್ಪಿನ್ನರ್ ವಾಷಿಂಗ್ಟನ್ ಸುಂದರ್. ನಾಯಕನ ಇನ್ನಿಂಗ್ಸ್ ಆಡಿದ ಗಿಲ್ 49 ಎಸೆತಗಳಲ್ಲಿ 66 ರನ್ ಬಾರಿಸಿದರೆ, ವಾಷಿಂಗ್ಟನ್ ಸುಂದರ್ 4 ಓವರ್‌ಗಳಲ್ಲಿ ಕೇವಲ 15 ರನ್ ನೀಡಿ 3 ವಿಕೆಟ್ ಪಡೆದರು. ಈ ಇಬ್ಬರು ಆಟಗಾರರನ್ನು ಹೊರತುಪಡಿಸಿ, ರುತುರಾಜ್ ಗಾಯಕ್ವಾಡ್ 28 ಎಸೆತಗಳಲ್ಲಿ 49 ರನ್ ಗಳಿಸುವ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದರು.

ಹೋರಾಟ ನೀಡಿದ ಜಿಂಬಾಬ್ವೆ

ಜಿಂಬಾಬ್ವೆ ತಂಡ ಈ ಪಂದ್ಯದಲ್ಲಿ ಸೋಲು ಕಂಡರೂ ಕೊನೆಯವರೆಗೂ ಗೆಲುವಿಗಾಗಿ ಸೆಣಸಾಡಿತು. ಒಂದು ಸಮಯದಲ್ಲಿ ಜಿಂಬಾಬ್ವೆ ತಂಡದ ಅರ್ಧದಷ್ಟು ಆಟಗಾರರು ಕೇವಲ 7 ಓವರ್‌ಗಳು ಆಗುವಷ್ಟರಲ್ಲೇ ಪೆವಿಲಿಯನ್ ಸೇರಿಕೊಂಡಿದ್ದರು. ಆ ಸಮಯದಲ್ಲಿ ಸ್ಕೋರ್‌ಬೋರ್ಡ್‌ನಲ್ಲಿ ಕೇವಲ 39 ರನ್‌ಗಳಿದ್ದವು. ಆದರೆ ಇದಾದ ಬಳಿಕ ಡಿಯೋನ್ ಮೇಯರ್ಸ್ ಹಾಗೂ ವಿಕೆಟ್ ಕೀಪರ್ ಕ್ಲೈವ್ ಮದಾಂಡೆ ಅತ್ಯುತ್ತಮ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾಕ್ಕೆ ಉತ್ತಮ ಹೋರಾಟ ನೀಡಿದರು. ಮೇಯರ್ಸ್ 49 ಎಸೆತಗಳಲ್ಲಿ ಅಜೇಯ 65 ರನ್ ಗಳಿಸಿದರೆ, ಮದಂಡೆ 26 ಎಸೆತಗಳಲ್ಲಿ 37 ರನ್‌ಗಳ ಇನಿಂಗ್ಸ್‌ ಆಡಿದರು. ಆದರೆ, ಜಿಂಬಾಬ್ವೆ ಗೆಲುವಿಗೆ ಈ ಇನ್ನಿಂಗ್ಸ್ ಸಾಕಾಗಲಿಲ್ಲ.

ಮಿಂಚಿದ ಅಗ್ರ ಕ್ರಮಾಂಕ

ಆಡುವ ಹನ್ನೊಂದರ ಬಳಗದಲ್ಲಿ ನಾಲ್ಕು ಬದಲಾವಣೆಗಳನ್ನು ಮಾಡುವುದರ ಜೊತೆಗೆ, ಟೀಂ ಇಂಡಿಯಾ ಮೂರನೇ ಟಿ20 ಪಂದ್ಯಕ್ಕೆ ತನ್ನ ಆರಂಭಿಕ ಪಾಲುದಾರಿಕೆಯನ್ನು ಸಹ ಬದಲಾಯಿಸಿತು. ಯಶಸ್ವಿ ಜೈಸ್ವಾಲ್, ನಾಯಕ ಗಿಲ್ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಜೈಸ್ವಾಲ್ ಮತ್ತು ಗಿಲ್ 49 ಎಸೆತಗಳಲ್ಲಿ 67 ರನ್‌ಗಳ ಕಾಣಿಕೆ ನೀಡಿದರು. ಜೈಸ್ವಾಲ್ 27 ಎಸೆತಗಳಲ್ಲಿ 36 ರನ್ ಗಳಿಸಿ ಔಟಾದರು. ಆದರೆ, ಕಳೆದ ಪಂದ್ಯದ ಶತಕವೀರ ಅಭಿಷೇಕ್ ಶರ್ಮಾ 9 ಎಸೆತಗಳಲ್ಲಿ 10 ರನ್ ಗಳಿಸಲಷ್ಟೇ ಶಕ್ತರಾದರು. ಇದಾದ ಬಳಿಕ ರುತುರಾಜ್ ಗಾಯಕ್ವಾಡ್ ನಾಯಕ ಗಿಲ್ ಜೊತೆ ಅರ್ಧಶತಕದ ಜೊತೆಯಾಟ ನಡೆಸಿದರು. ಗಿಲ್ 49 ಎಸೆತಗಳಲ್ಲಿ 66 ರನ್ ಗಳಿಸಿ ಔಟಾದರೆ, ಗಾಯಕ್ವಾಡ್ ಕೇವಲ ಒಂದು ರನ್‌ನಿಂದ ಅರ್ಧಶತಕ ವಂಚಿತರಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Wed, 10 July 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ