IND vs ZIM: ಭಾರತ ವಿರುದ್ಧದ ಟಿ20 ಸರಣಿಗೆ ಜಿಂಬಾಬ್ವೆ ತಂಡ ಪ್ರಕಟ; ಪಾಕ್ ಮೂಲದ ಆಟಗಾರನಿಗೆ ಸ್ಥಾನ

IND vs ZIM: ಟೀಂ ಇಂಡಿಯಾ ವಿರುದ್ಧ ಜುಲೈ 6 ರಿಂದ ಆರಂಭವಾಗಲಿರುವ ಐದು ಪಂದ್ಯಗಳ ಟಿ20 ಸರಣಿಗೆ ಜಿಂಬಾಬ್ವೆ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಉಭಯ ತಂಡಗಳ ನಡುವಿನ ಈ ಸರಣಿಯ ಎಲ್ಲಾ ಪಂದ್ಯಗಳು ಹರಾರೆಯಲ್ಲಿ ನಡೆಯಲಿವೆ. ಅನುಭವಿ ಆಲ್‌ರೌಂಡರ್ ಸಿಕಂದರ್ ರಜಾ ನೇತೃತ್ವದ ಯುವ ತಂಡವನ್ನು ಜಿಂಬಾಬ್ವೆ ಪ್ರಕಟಿಸಿದೆ.

IND vs ZIM: ಭಾರತ ವಿರುದ್ಧದ ಟಿ20 ಸರಣಿಗೆ ಜಿಂಬಾಬ್ವೆ ತಂಡ ಪ್ರಕಟ; ಪಾಕ್ ಮೂಲದ ಆಟಗಾರನಿಗೆ ಸ್ಥಾನ
ಜಿಂಬಾಬ್ವೆ ತಂಡ
Follow us
ಪೃಥ್ವಿಶಂಕರ
|

Updated on:Jul 01, 2024 | 8:27 PM

ಟೀಂ ಇಂಡಿಯಾ ವಿರುದ್ಧ ಜುಲೈ 6 ರಿಂದ ಆರಂಭವಾಗಲಿರುವ ಐದು ಪಂದ್ಯಗಳ ಟಿ20 ಸರಣಿಗೆ ಜಿಂಬಾಬ್ವೆ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಉಭಯ ತಂಡಗಳ ನಡುವಿನ ಈ ಸರಣಿಯ ಎಲ್ಲಾ ಪಂದ್ಯಗಳು ಹರಾರೆಯಲ್ಲಿ ನಡೆಯಲಿವೆ. ಅನುಭವಿ ಆಲ್‌ರೌಂಡರ್ ಸಿಕಂದರ್ ರಜಾ ನೇತೃತ್ವದ ಯುವ ತಂಡವನ್ನು ಜಿಂಬಾಬ್ವೆ ಪ್ರಕಟಿಸಿದೆ. ಕುತೂಹಲಕಾರಿಯಾಗಿ, ಪಾಕಿಸ್ತಾನ ಮೂಲದ 25 ವರ್ಷದ ಅಂತುಮ್ ನಖ್ವಿಯನ್ನು ಜಿಂಬಾಬ್ವೆ ತಂಡದಲ್ಲಿ ಆಯ್ಕೆ ಮಾಡಲಾಗಿದೆ. ಜಿಂಬಾಬ್ವೆ ತಂಡ ಇತ್ತೀಚೆಗೆ ಮುಕ್ತಾಯಗೊಂಡ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದ್ದು, ಇದೀಗ ಹೊಸ ಕೋಚ್ ಜಸ್ಟಿನ್ ಸಿಮನ್ಸ್ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡಲು ಪ್ರಯತ್ನಿಸಲಿದೆ.

ಯುವ ಆಟಗಾರರಿಗೆ ಅವಕಾಶ

ಇದು ಜಿಂಬಾಬ್ವೆಯ ಯುವ ತಂಡವಾಗಿದ್ದು, ತಂಡದಲ್ಲಿ ಆಯ್ಕೆಯಾಗಿರುವ ತಂಡದ ಭಾಗಶಃ ಆಟಗಾರರ ವಯಸ್ಸು ಕೇವಲ 27 ವರ್ಷ. 38 ವರ್ಷದ ಅಲೆಕ್ಸಾಂಡರ್ ಜಿಂಬಾಬ್ವೆ ಪರ 86 ಪಂದ್ಯಗಳನ್ನು ಆಡಿದ್ದು, ತಂಡದ ಅತ್ಯಂತ ಅನುಭವಿ ಆಟಗಾರ ಎನಿಸಿಕೊಂಡಿದ್ದಾರೆ. ಅವರ ನಂತರ 63 ಪಂದ್ಯಗಳನ್ನು ಆಡಿರುವ 29 ವರ್ಷದ ಜೊಂಗ್ವೆ ಲ್ಯೂಕ್ ಇದ್ದರೆ, ವೇಗದ ಬೌಲರ್‌ಗಳಾದ ರಿಚರ್ಡ್ ನ್ಗರ್ವಾ ಮತ್ತು ಬ್ಲೆಸಿಂಗ್ ಮುಜರಬಾನಿ ಕ್ರಮವಾಗಿ 52 ಮತ್ತು 51 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.

ಭಾರತ ವಿರುದ್ಧದ ಟಿ20 ಸರಣಿಗೆ ಜಿಂಬಾಬ್ವೆ ಕ್ರಿಕೆಟ್ ಪ್ರಕಟಿಸಿರುವ 17 ಮಂದಿಯ ತಂಡದಲ್ಲಿ ತೆಂಡೈ ಚಟಾರಾ, ಬ್ರಾಂಡನ್ ಮಾವುತಾ ಮತ್ತು ವೆಸ್ಲಿ ಮಾಧೆವೆರೆ ಆಯ್ಕೆಯಾಗಿದ್ದರೆ, ರಿಯಾನ್ ಬರ್ಲ್, ಜೋ ಲಾರ್ಡ್ ಗುಂಬಿ ಮತ್ತು ಅನ್ನಿಸ್ಲೆ ಆಂಡಾಲು, ಕ್ರೇಗ್ ಇರ್ವಿನ್ ಮತ್ತು ಸೀನ್ ವಿಲಿಯಮ್ಸ್ ಅವರ ಆಯ್ಕೆಯನ್ನು ಸಹ ಪರಿಗಣಿಸಲಾಗಿಲ್ಲ.

ಜಿಂಬಾಬ್ವೆ 17 ಸದಸ್ಯರ ತಂಡ: ಸಿಕಂದರ್ ರಜಾ (ನಾಯಕ), ಫರಾಜ್ ಅಕ್ರಂ, ಬ್ರಿಯಾನ್ ಬೆನೆಟ್, ಜೊನಾಥನ್ ಕ್ಯಾಂಪ್‌ಬೆಲ್, ಟೆಂಡೈ ಚಟಾರಾ, ಲ್ಯೂಕ್ ಜೊಂಗ್ವೆ, ಇನೋಸೆಂಟ್ ಕಿಯಾ, ಕ್ಲೈವ್ ಮದಂಡೆ, ವೆಸ್ಲಿ ಮಾಧೆವೈರ್, ತಡಿವಾನಾಶೆ ಮರುಮಣಿ, ವೆಲ್ಲಿಂಗ್‌ಟನ್ ಮಸಕಡ್ಜಾ, ಬ್ರ್ಯಾಂಡನ್ ಮಾವುಟಾ, ಬ್ಲೆಸ್ಸಿಂಗ್ ಮುಜರಬಾನಿ, ಡಿಯೋನ್ ಮೈಯರ್ಸ್, ರಿಚಾರ್ ಎನ್ ಮೈಯರ್ಸ್, ಮಿಲ್ಟನ್ ಶುಂಬಾ.

ಭಾರತ ತಂಡವೂ ಪ್ರಕಟ

ಜಿಂಬಾಬ್ವೆಗೂ ಮುನ್ನ ಭಾರತ ಕೂಡ ಶುಭಮನ್ ಗಿಲ್ ನೇತೃತ್ವದಲ್ಲಿ ಈ ಪ್ರವಾಸಕ್ಕೆ ತನ್ನ ತಂಡವನ್ನು ಪ್ರಕಟಿಸಿತ್ತು. ತಂಡದಲ್ಲಿ ಭಾಗಶಃ ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಭಾರತದ ನಿಯಮಿತ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಟಿ20 ವಿಶ್ವಕಪ್‌ನಲ್ಲಿ ಪ್ರಶಸ್ತಿ ಗೆದ್ದ ನಂತರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಇವರ ಹೊರತಾಗಿ ಅನುಭವಿ ಆಟಗಾರರಾದ ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್​ ಸೇರಿದಂತೆ ಇತರರಿಗೆ ವಿಶ್ರಾಂತಿ ನೀಡಲಾಗಿದೆ.

ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅವೇಶ್ ಖಾನ್, ಖಲೀಲ್ ಅಹ್ಮದ್, ತುಷಾರ್ ದೇಶ್ಪಾಂಡೆ, ರವಿ ಬಿಷ್ಣೋಯ್, ಮುಖೇಶ್ ಕುಮಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:27 pm, Mon, 1 July 24

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ