IND vs ZIM: ಜಿಂಬಾಬ್ವೆ ಚಾಣಾಕ್ಷ್ಯ ಆಟಕ್ಕೆ ತಲೆಬಾಗಿದ ಟಿ20 ಚಾಂಪಿಯನ್ ಟೀಂ ಇಂಡಿಯಾ..!

IND vs ZIM: ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಯುವ ಪಡೆ 13 ರನ್​ಗಳ ಹೀನಾಯ ಸೋಲು ಅನುಭವಿಸಿದೆ. ಜಿಂಬಾಬ್ವೆ ನೀಡಿದ 116 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 20ನೇ ಓವರ್​ನ 5ನೇ ಎಸೆತದಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 102 ರನ್​ಗಳಿಸಲಷ್ಟೇ ಶಕ್ತವಾಯಿತು.

IND vs ZIM: ಜಿಂಬಾಬ್ವೆ ಚಾಣಾಕ್ಷ್ಯ ಆಟಕ್ಕೆ ತಲೆಬಾಗಿದ ಟಿ20 ಚಾಂಪಿಯನ್ ಟೀಂ ಇಂಡಿಯಾ..!
ಜಿಂಬಾಬ್ವೆ ತಂಡ
Follow us
ಪೃಥ್ವಿಶಂಕರ
|

Updated on:Jul 06, 2024 | 8:33 PM

ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಯುವ ಪಡೆ 13 ರನ್​ಗಳ ಹೀನಾಯ ಸೋಲು ಅನುಭವಿಸಿದೆ. ಜಿಂಬಾಬ್ವೆ ನೀಡಿದ 116 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 20ನೇ ಓವರ್​ನ 5ನೇ ಎಸೆತದಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 102 ರನ್​ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಆತಿಥೇಯ ಜಿಂಬಾಬ್ವೆ 5 ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಸೋಲಿಗೆ ಐಪಿಎಲ್ ಸ್ಟಾರ್​ಗಳ ಅತಿಯಾದ ಆತ್ಮವಿಶ್ವಾಸವೇ ಪ್ರಮುಖ ಕಾರಣ ಎಂದರೆ ತಪ್ಪಾಗಲಾರದು. ತವರು ಪಿಚ್​ನಲ್ಲಿ ಜಿಂಬಾಬ್ವೆ ತಂಡದ ಬೌಲಿಂಗ್ ದಾಳಿಯನ್ನು ಕಡೆಗಣಿಸಿದ ಭಾರತದ ಬ್ಯಾಟರ್​​ಗಳು ಬಂದಬಂದವರೇ ಬಿಗ್ ಶಾಟ್ ಆಡಲು ಯತ್ನಿಸಿ ಸುಲಭವಾಗಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಕೊನೆಯಲ್ಲಿ ವಾಷಿಂಗ್ಟನ್ ಸುಂದರ್ ಹಾಗೂ ಆವೇಶ್ ಖಾನ್ ಗೆಲುವಿಗಾಗಿ ಹೋರಾಟ ನೀಡದಿದ್ದರೆ, ಶುಭ್​ಮನ್ ಗಿಲ್ ಪಡೆ ಇನ್ನು ಹೀನಾಯವಾಗಿ ಸೋಲುತಿತ್ತು.

115 ರನ್ ಕಲೆಹಾಕಿದ ಜಿಂಬಾಬ್ವೆ

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಬೌಲರ್‌ಗಳು ಕೂಡ ಉತ್ತಮ ಪ್ರದರ್ಶನ ನೀಡಿ ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡರು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಲಷ್ಟೇ ಶಕ್ತವಾಯಿತು. ಜಿಂಬಾಬ್ವೆ ಪರ ಕ್ಲೈವ್ ಮದಾಂಡೆ ಅಜೇಯ 29 ರನ್ ಗಳಿಸಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಕೊಡುಗೆ ನೀಡಿದರು. ಉಳಿದಂತೆ ಡಿಯೋನ್ ಮೈಯರ್ಸ್ 23 ರನ್ ಕೊಡುಗೆ ನೀಡಿದರೆ, ಬ್ರಿಯಾನ್ ಜಾನ್ ಬೆನೆಟ್ ಕೂಡ 15 ಎಸೆತಗಳಲ್ಲಿ 22 ರನ್ ಬಾರಿಸಿದರು. ಮತ್ತೊಂದೆಡೆ ರವಿ ಬಿಷ್ಣೋಯ್ ಟೀಂ ಇಂಡಿಯಾ ಪರ ಗರಿಷ್ಠ 4 ವಿಕೆಟ್ ಪಡೆದರೆ, ವಾಷಿಂಗ್ಟನ್ ಸುಂದರ್ 2 ವಿಕೆಟ್ ಹಾಗೂ ಮುಖೇಶ್ ಕುಮಾರ್, ಅವೇಶ್ ಖಾನ್ ತಲಾ 1 ವಿಕೆಟ್ ಪಡೆದರು.

ಟೀಂ ಇಂಡಿಯಾದ ಬ್ಯಾಟಿಂಗ್ ವಿಫಲ

ಈ ಗುರಿಗೆ ಉತ್ತರವಾಗಿ ಟೀಂ ಇಂಡಿಯಾದ ಬ್ಯಾಟಿಂಗ್ ಆರಂಭದಿಂದಲೇ ಕಳಪೆಯಾಗಿತ್ತು. ಪವರ್ ಪ್ಲೇನಲ್ಲಿಯೇ ಟೀಂ ಇಂಡಿಯಾ 4 ವಿಕೆಟ್ ಕಳೆದುಕೊಂಡಿತು. ಹೀಗಾಗಿ ತಂಡದ ಈ ಆರಂಭಿಕ ಆಘಾತದಿಂದ ಯಾವುದೇ ಬ್ಯಾಟ್ಸ್‌ಮನ್ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದರಿಂದಾಗಿ 116 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ತಂಡ ಕೇವಲ 102 ರನ್ ಗಳಿಸಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ ಪರ ನಾಯಕ ಶುಭ್​ಮನ್ ಗಿಲ್ ಗರಿಷ್ಠ 31 ರನ್ ಬಾರಿಸಿದರು. ಕೊನೆಯಲ್ಲಿ ವಾಷಿಂಗ್ಟನ್ ಸುಂದರ್ 27 ರನ್ ಹಾಗೂ ಆವೇಶ್ ಖಾನ್ 16 ರನ್ ಬಾರಿಸಿ ತಂಡವನ್ನು ಮುಜುರದ ಸೋಲಿನಿಂದ ಪಾರು ಮಾಡಿದರು. ಇವರ ಹೊರತಾಗಿ ತಂಡದ ಯಾವುದೇ ಬ್ಯಾಟ್ಸ್‌ಮನ್​ಗೆ ಎರಡಂಕಿ ಮುಟ್ಟಲು ಸಾಧ್ಯವಾಗಲಿಲ್ಲ. ಈ ಕಳಪೆ ಪ್ರದರ್ಶನದಿಂದಾಗಿ ಟೀಂ ಇಂಡಿಯಾ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಜಿಂಬಾಬ್ವೆ ವಿರುದ್ಧ ಮೂರನೇ ಸೋಲು ಅನುಭವಿಸಿತು.

ಮೊದಲ ಪಂದ್ಯದಲ್ಲೇ ಕಳಪೆ ಆಟ

ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ, ಧ್ರುವ್ ಜುರೆಲ್ ಮತ್ತು ರಿಯಾನ್ ಪರಾಗ್ ಅವರು ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದರು. ಆದರೆ ಯಾವ ಬ್ಯಾಟ್ಸ್‌ಮನ್‌ಗೂ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯಲು ಸಾಧ್ಯವಾಗಲಿಲ್ಲ. ಅಭಿಷೇಕ್ ಶರ್ಮಾ 4 ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ವಿಕೆಟ್ ಕಳೆದುಕೊಂಡರು. ಇದಾದ ಬಳಿಕ ರಿಯಾನ್ ಪರಾಗ್ ಕೂಡ ತಮ್ಮ ಚೊಚ್ಚಲ ಪಂದ್ಯದಲ್ಲಿ ವಿಶೇಷ ಸಾಧನೆ ಮಾಡಲು ಸಾಧ್ಯವಾಗಲಿಲ್ಲ. ಈ ಪಂದ್ಯದಲ್ಲಿ ರಿಯಾನ್ ಪರಾಗ್ 3 ಎಸೆತಗಳಲ್ಲಿ ಕೇವಲ 2 ರನ್ ಗಳಿಸಿ ಔಟಾದರು. ಧ್ರುವ್ ಜುರೆಲ್ ಕೂಡ 14 ಎಸೆತಗಳನ್ನು ಎದುರಿಸಿ 1 ಬೌಂಡರಿ ಸಹಾಯದಿಂದ ಕೇವಲ 6 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 pm, Sat, 6 July 24

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ