AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ನ್ಯೂಝಿಲೆಂಡ್ ತಂಡಕ್ಕೆ ಬಿಗ್ ಶಾಕ್: 2ನೇ ಪಂದ್ಯದಿಂದ ಸ್ಟಾರ್ ಆಟಗಾರ ಔಟ್

India vs New Zealand 2nd Test: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಅದ್ಭುತ ಪ್ರದರ್ಶನ ನೀಡಿದೆ. ಈ ಅದ್ಭುತ ಪ್ರದರ್ಶನದೊಂದಿಗೆ ಕಿವೀಸ್ ಪಡೆ ಭಾರತದಲ್ಲಿ 36 ವರ್ಷಗಳ ಬಳಿಕ ಟೆಸ್ಟ್ ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದೀಗ ಉಭಯ ತಂಡಗಳು ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದ್ದಾರೆ.

IND vs NZ: ನ್ಯೂಝಿಲೆಂಡ್ ತಂಡಕ್ಕೆ ಬಿಗ್ ಶಾಕ್: 2ನೇ ಪಂದ್ಯದಿಂದ ಸ್ಟಾರ್ ಆಟಗಾರ ಔಟ್
New Zealand
ಝಾಹಿರ್ ಯೂಸುಫ್
|

Updated on: Oct 22, 2024 | 9:05 AM

Share

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ದ್ವಿತೀಯ ಟೆಸ್ಟ್ ಪಂದ್ಯಕ್ಕೂ ಕೇನ್ ವಿಲಿಯಮ್ಸನ್ ಅಲಭ್ಯರಾಗಲಿದ್ದಾರೆ. ತೊಡೆಸಂದು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಪುಣೆಯಲ್ಲಿ ಜರುಗಲಿರುವ 2ನೇ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಅಕ್ಟೋಬರ್ 24 ರಿಂದ ಶುರುವಾಗಲಿದೆ. ಈ ಪಂದ್ಯವು ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿದೆ. ಇದೀಗ ಈ ಪಂದ್ಯಕ್ಕೆ ವಿಲಿಯಮ್ಸನ್ ಅಲಭ್ಯರಾಗಿರುವ ಕಾರಣ ವಿಲ್ ಯಂಗ್ ತಂಡದಲ್ಲೇ ಮುಂದುವರೆಯಲಿದ್ದಾರೆ.

ನಿರ್ಣಾಯಕ ಪಂದ್ಯ:

ಪುಣೆಯಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯವು ಭಾರತ ತಂಡದ ಪಾಲಿಗೆ ನಿರ್ಣಾಯಕ. ಏಕೆಂದರೆ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ತಂಡ 8 ವಿಕೆಟ್​ಗಳ ಜಯ ಸಾಧಿಸಿದೆ. ಇದೀಗ ದ್ವಿತೀಯ ಟೆಸ್ಟ್ ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು.

ಅತ್ತ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಟೀಮ್ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕು. ಅಥವಾ ಸರಣಿ ಸೋಲನ್ನು ತಪ್ಪಿಸಿಕೊಳ್ಳಬೇಕಿದ್ದರೆ 2ನೇ ಪಂದ್ಯದಲ್ಲಿ ಕನಿಷ್ಠ ಡ್ರಾ ಸಾಧಿಸಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಒಂದಾರ್ಥದಲ್ಲಿ ಟೀಮ್ ಇಂಡಿಯಾ ಪಾಲಿಗೆ ಪುಣೆ ಟೆಸ್ಟ್ ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು.

ಇತಿಹಾಸ ಸೃಷ್ಟಿಸಲು ಅವಕಾಶ:

ನ್ಯೂಝಿಲೆಂಡ್ ತಂಡವು ಈವರೆಗೆ ಭಾರತ ತಂಡದಲ್ಲಿ ಸರಣಿ ಗೆದ್ದಿಲ್ಲ. ಅದರಲ್ಲೂ ಭಾರತದಲ್ಲಿ ಇದುವರೆಗೆ ಗೆದ್ದಿರುವುದು ಕೇವಲ ಮೂರು ಟೆಸ್ಟ್ ಪಂದ್ಯಗಳನ್ನು ಮಾತ್ರ. ಇದೀಗ 36 ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್ ಪಂದ್ಯ ಗೆದ್ದಿರುವ ನ್ಯೂಝಿಲೆಂಡ್​ಗೆ ಇತಿಹಾಸ ನಿರ್ಮಿಸಲು ಉತ್ತಮ ಅವಕಾಶವಿದೆ.

ಇದಕ್ಕಾಗಿ 2ನೇ ಅಥವಾ 3ನೇ ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಿದರೆ ಸಾಕು. ಅಥವಾ ಎರಡೂ ಪಂದ್ಯಗಳನ್ನು ಡ್ರಾನಲ್ಲಿ ಅಂತ್ಯಗೊಳಿಸಿದರೂ ನ್ಯೂಝಿಲೆಂಡ್ ತಂಡವು 1-0 ಅಂತರದಿಂದ ಸರಣಿ ಗೆಲ್ಲಬಹುದು. ಹೀಗಾಗಿಯೇ ಟೀಮ್ ಇಂಡಿಯಾ ಪಾಲಿಗೆ ಮುಂದಿನ ಎರಡೂ ಮ್ಯಾಚ್​ಗಳು ತುಂಬಾ ಮಹತ್ವದ್ದು.

ಇದನ್ನೂ ಓದಿ: RCB ಉಳಿಸಿಕೊಂಡ ಆರು ಆಟಗಾರರು ಯಾರೆಲ್ಲಾ ಗೊತ್ತಾ?

ನ್ಯೂಝಿಲೆಂಡ್ ಟೆಸ್ಟ್ ತಂಡ: ಟಾಮ್ ಲ್ಯಾಥಮ್ (ನಾಯಕ), ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ವಿಲ್ ಓ’ರೂರ್ಕ್, ಅಜಾಝ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ,  ಜೇಕೊಬ್ ಡಫಿ, ವಿಲ್ ಯಂಗ್, ಮೈಕೆಲ್ ಬ್ರೇಸ್‌ವೆಲ್, ಇಶ್ ಸೋಧಿ, ಕೇನ್ ವಿಲಿಯಮ್ಸನ್ (ಅಲಭ್ಯ).

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?