AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND-W vs SL-W: ಲಂಕಾ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ; ಪ್ಲೇಯಿಂಗ್ 11 ಹೀಗಿದೆ

IND-W vs SL-W T20: ಭಾರತ ಹಾಗೂ ಶ್ರೀಲಂಕಾ ಮಹಿಳಾ ತಂಡಗಳ ನಡುವಿನ T20 ಸರಣಿ ಆರಂಭವಾಗಿದೆ. ಏಕದಿನ ವಿಶ್ವಕಪ್ ಗೆದ್ದ ನಂತರ ಭಾರತದ ಮೊದಲ ಪಂದ್ಯ ಇದಾಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಈ ಪಂದ್ಯದೊಂದಿಗೆ ಭಾರತ ಮುಂದಿನ T20 ವಿಶ್ವಕಪ್‌ಗೆ ಸಿದ್ಧತೆಗಳನ್ನು ಪ್ರಾರಂಭಿಸಿದೆ. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.

IND-W vs SL-W: ಲಂಕಾ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ; ಪ್ಲೇಯಿಂಗ್ 11 ಹೀಗಿದೆ
Ind W Vs Sl W
ಪೃಥ್ವಿಶಂಕರ
|

Updated on:Dec 21, 2025 | 6:52 PM

Share

ಭಾರತ ಹಾಗೂ ಶ್ರೀಲಂಕಾ ಮಹಿಳಾ ತಂಡಗಳು (India Women vs Sri Lanka Women) ನಡುವಿನ ಟಿ20 ಸರಣಿ ಇಂದಿನಿಂದ ಆರಂಭವಾಗಿದೆ. ಏಕದಿನ ವಿಶ್ವಕಪ್ ಪ್ರಶಸ್ತಿ ಗೆದ್ದ ನಂತರ ಭಾರತೀಯ ಮಹಿಳಾ ತಂಡ ಮೈದಾನಕ್ಕಿಳಿಯುತ್ತಿರುವುದು ಇದೇ ಮೊದಲು. ಹೀಗಾಗಿ ತಂಡದ ಪ್ರದರ್ಶನ ಹೇಗಿರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾದು ಕುಳಿತಿದ್ದಾರೆ. ಉಭಯ ತಂಡಗಳ ನಡುವಿನ ಈ ಮೊದಲ ಪಂದ್ಯ ವಿಶಾಖಪಟ್ಟಣಂನಲ್ಲಿರುವ ACA-VDCA ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದೊಂದಿಗೆ ಭಾರತೀಯ ಮಹಿಳಾ ತಂಡವು ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್‌ಗೆ (T20 World Cup 2026) ತನ್ನ ಔಪಚಾರಿಕವಾಗಿ ಸಿದ್ಧತೆಗಳನ್ನು ಪ್ರಾರಂಭಿಸಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.

ಟಾಸ್ ಗೆದ್ದ ಟೀಂ ಇಂಡಿಯಾ

ಮೇಲೆ ಹೇಳಿದಂತೆ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತೀಯ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಶ್ರೀಲಂಕಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಟೀಂ ಇಂಡಿಯಾ ಪರ ವೈಷ್ಣವಿ ಶರ್ಮಾ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ್ದು, ಶ್ರೀಲಂಕಾ ವಿರುದ್ಧ ಆಡಲಿದ್ದಾರೆ.

ಯಾರು ಈ ವೈಷ್ಣವಿ ಶರ್ಮಾ?

ಮಧ್ಯಪ್ರದೇಶದ ಮತ್ತೊಬ್ಬ ಪ್ರತಿಭಾನ್ವಿತ ಆಟಗಾರ್ತಿ 19 ವರ್ಷದ ವೈಷ್ಣವಿ ಶರ್ಮಾ ಶ್ರೀಲಂಕಾ ವಿರುದ್ಧ ಅಂತಾರಾಷ್ಟ್ರೀಯ ಟಿ20ಗೆ ಪಾದಾರ್ಪಣೆ ಮಾಡಿದ್ದಾರೆ. ಈ ವರ್ಷದ ಆರಂಭದಲ್ಲಿ ಭಾರತ ಅಂಡರ್-19 ಮಹಿಳಾ ವಿಶ್ವಕಪ್ ವಿಜೇತ ತಂಡದಲ್ಲಿದ್ದ ವೈಷ್ಣವಿ ಅದ್ಭುತ ಪ್ರದರ್ಶನ ನೀಡಿದ್ದರು. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಕೇವಲ 5 ರನ್‌ಗಳಿಗೆ 5 ವಿಕೆಟ್‌ಗಳನ್ನು ಪಡೆದು ಹ್ಯಾಟ್ರಿಕ್ ವಿಕೆಟ್ ಕೂಡ ಪಡೆದಿದ್ದರು. ಅಲ್ಲದೆ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ ಕೂಡ ಆಗಿದ್ದರು. ಅಂದಿನಿಂದ ಅವರು ದೇಶೀಯ ಕ್ರಿಕೆಟ್‌ನಲ್ಲಿ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರೆಸಿದ್ದಾರೆ. ಇನ್ನು ಸೀನಿಯರ್ ಮಹಿಳಾ ಟಿ20 ಟ್ರೋಫಿಯಲ್ಲಿ 9 ಇನ್ನಿಂಗ್ಸ್‌ಗಳನ್ನಾಡಿದ ವೈಷ್ಣವಿ 4.50 ಎಕಾನಮಿಯಲ್ಲಿ 21 ವಿಕೆಟ್‌ ಪಡೆಯುವ ಮೂಲಕ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಭಾರತ ತಂಡದ ಪ್ಲೇಯಿಂಗ್ 11: ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಅಮಂಜೋತ್ ಕೌರ್, ಅರುಂಧತಿ ರೆಡ್ಡಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಶ್ರೀ ಚರಣಿ.

ಶ್ರೀಲಂಕಾ ತಂಡ: ಚಾಮರಿ ಅಟಪಟ್ಟು (ನಾಯಕಿ), ಹಾಸಿನಿ ಪೆರೇರಾ, ಹರ್ಷಿತಾ ಸಮರವಿಕ್ರಮ, ವಿಶ್ಮಿ ಗುಣರತ್ನೆ, ನೀಲಾಕ್ಷಿಕಾ ಸಿಲ್ವಾ, ಕೌಶಿನಿ ನುತ್ತಯಂಗನಾ (ವಿಕೆಟ್ ಕೀಪರ್), ಕವಿಶಾ ದಿಲ್ಹಾರಿ, ಮಲ್ಕಿ ಮುದಾರ, ಇನೋಕಾ ರಣವೀರ, ಕಾವ್ಯಾ ಕವಿಂದಿ, ಶಶಿನಿ ಗಿಮ್ಹಾನಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:40 pm, Sun, 21 December 25

Follow Us
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!