AUSW vs INDW, 1st T20I: ಭಾರತ- ಆಸ್ಟ್ರೇಲಿಯಾ ವನಿತಾ ತಂಡದ ಮೊದಲ ಟಿ20 ಪಂದ್ಯದ ಸಂಪೂರ್ಣ ಮಾಹಿತಿ ಹೀಗಿದೆ
AUSW vs INDW, 1st T20I: ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಗುರುವಾರದಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಗೆಲುವು ದಾಖಲಿಸುವ ಮೂಲಕ ಪ್ರವಾಸವನ್ನು ಉತ್ತಮವಾಗಿ ಆರಂಭಿಸಲು ಪ್ರಯತ್ನಿಸುತ್ತಿದೆ.
ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರ ವಾಪಸಾತಿಯಿಂದ ಉತ್ಸುಕರಾಗಿರುವ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಗುರುವಾರದಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಗೆಲುವು ದಾಖಲಿಸುವ ಮೂಲಕ ಪ್ರವಾಸವನ್ನು ಉತ್ತಮವಾಗಿ ಆರಂಭಿಸಲು ಪ್ರಯತ್ನಿಸುತ್ತಿದೆ. ಹೆಬ್ಬೆರಳಿನ ಗಾಯದಿಂದಾಗಿ ಹರ್ಮನ್‌ಪ್ರೀತ್ ಏಕದಿನ ಸರಣಿ ಮತ್ತು ಏಕೈಕ ಹಗಲು-ರಾತ್ರಿ ಟೆಸ್ಟ್ ಅನ್ನು ತಪ್ಪಿಸಿಕೊಂಡರು ಆದರೆ ಈಗ ಫಿಟ್ ಆಗಿದ್ದಾರೆ. ಇದು ಯುವ ಆಟಗಾರ್ತಿ ಶಫಾಲಿ ವರ್ಮಾ ಮತ್ತು ಸ್ಮೃತಿ ಮಂಧನಾ ಉತ್ತಮ ಫಾರ್ಮ್‌ನಲ್ಲಿರುವುದು ತಂಡದ ಬ್ಯಾಟಿಂಗ್ ಅನ್ನು ಬಲಪಡಿಸಿದೆ.
ಆಸ್ಟ್ರೇಲಿಯಾ ಪ್ರವಾಸದ ಕೊನೆಯ ಹಂತಕ್ಕೂ ಮುನ್ನ ಮಂಧನಾ ಆತ್ಮವಿಶ್ವಾಸದಿಂದ ಬೀಗುತ್ತಿದ್ದಾರೆ. ಅವರು ಕೆಲವು ದಿನಗಳ ಹಿಂದಷ್ಟೇ ತಮ್ಮ ಮೊದಲ ಟೆಸ್ಟ್ ಶತಕವನ್ನು ಗಳಿಸಿದ್ದರು. ಈ ಹಿರಿಯ ಬ್ಯಾಟರ್ ಅದೇ ಲಯವನ್ನು ಇಲ್ಲೂ ಕಾಯ್ದುಕೊಳ್ಳಲು ಪ್ರಯತ್ನಿಸಲಿದ್ದಾರೆ. ಆದರೂ ಎರಡು ಸ್ವರೂಪಗಳ ನಡುವೆ ಸಾಕಷ್ಟು ವ್ಯತ್ಯಾಸವಿದೆ. ಹರ್ಮನ್‌ಪ್ರೀತ್ ತಂಡಕ್ಕೆ ಮರಳಿರುವುದು ತಂಡಕ್ಕೆ ಒಳ್ಳೆಯ ಸಂಕೇತವಾಗಿದೆ ಆದರೆ ಎಲ್ಲರ ಕಣ್ಣುಗಳು ಯುವ ಆಟಗಾರ್ತಿ ಶೆಫಾಲಿ ಆಕ್ರಮಣಕಾರಿ ರೀತಿಯಲ್ಲಿ ಬ್ಯಾಟಿಂಗ್ ಮಾಡಲು ಹೆಸರುವಾಸಿಯಾಗಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಟಿ 20 ಪಂದ್ಯ ಯಾವಾಗ ನಡೆಯಲಿದೆ? ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ 20 ಪಂದ್ಯ ಅಕ್ಟೋಬರ್ 07 ರಂದು ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ 20 ಪಂದ್ಯ ಎಲ್ಲಿ ನಡೆಯಲಿದೆ? ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ 20 ಪಂದ್ಯ ಕ್ಯಾರೆರಾ ಕ್ವೀನ್ಸ್ಲ್ಯಾಂಡ್ನಲ್ಲಿ ನಡೆಯಲಿದೆ.
ಪಂದ್ಯದ ನೇರ ಪ್ರಸಾರ, ಸಮಯ ಯಾವ ಟಿವಿಯಲ್ಲಿ ವೀಕ್ಷಿಸಲು ಸಾಧ್ಯ? ಭಾರತ vs ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಪಂದ್ಯದ ನೇರ ಪ್ರಸಾರವು ಭಾರತೀಯ ಕಾಲಮಾನ ಮಧ್ಯಾಹ್ನ 02:10 ಕ್ಕೆ ಆರಂಭವಾಗುತ್ತದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯವನ್ನು ನೀವು ಯಾವ ಟಿವಿ ಚಾನೆಲ್‌ನಲ್ಲಿ ವೀಕ್ಷಿಸಬಹುದು? ಸೋನಿ ನೆಟ್‌ವರ್ಕ್‌ನ ವಿವಿಧ ಚಾನೆಲ್‌ಗಳಲ್ಲಿ ಭಾರತ vs ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯವನ್ನು ವೀಕ್ಷಿಸಬಹುದು.
ಭಾರತ vs ಆಸ್ಟ್ರೇಲಿಯಾ ಪಂದ್ಯದ ನೇರ ಪ್ರಸಾರ ಎಲ್ಲಿ? ಭಾರತ ಮತ್ತು ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯದ ನೇರ ಪ್ರಸಾರವನ್ನು ಸೋನಿಲೈವ್‌ನಲ್ಲಿ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು.