AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಗೇಮ್ಸ್ ಕ್ರಿಕೆಟ್ ಸೆಮಿಫೈನಲ್‌; ಭಾರತಕ್ಕೆ ಬಾಂಗ್ಲಾ ಎದುರಾಳಿ

ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್‌ನಲ್ಲಿ ಭಾರತ ತಂಡ ಜಪಾನ್ ವಿರುದ್ಧ ಗೆದ್ದು ಸೆಮಿಫೈನಲ್‌ಗೆ ಪ್ರವೇಶಿಸಿದೆ. ಈಗ ಬಾಂಗ್ಲಾದೇಶದ ವಿರುದ್ಧ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 10:30 ಕ್ಕೆ ಸೆಮಿಫೈನಲ್ ಪಂದ್ಯ ನಡೆಯಲಿದೆ. ಸೋನಿ ಸ್ಪೋರ್ಟ್ಸ್ 3 ಮತ್ತು ಸೋನಿ LIV ನಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಕಳೆದ ಏಷ್ಯಾಕಪ್ ಸೆಮಿಫೈನಲ್‌ನಲ್ಲಿ ಭಾರತ ಬಾಂಗ್ಲಾದೇಶವನ್ನು ಸೋಲಿಸಿತ್ತು. ಭಾರತ ಗೆಲುವಿನ ಲಯ ಮುಂದುವರಿಸಲು, ಬಾಂಗ್ಲಾದೇಶ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ.

ಏಷ್ಯನ್ ಗೇಮ್ಸ್ ಕ್ರಿಕೆಟ್ ಸೆಮಿಫೈನಲ್‌; ಭಾರತಕ್ಕೆ ಬಾಂಗ್ಲಾ ಎದುರಾಳಿ
ಭಾರತ Vs ಬಾಂಗ್ಲಾದೇಶ
ಪೃಥ್ವಿಶಂಕರ
|

Updated on: Sep 19, 2026 | 10:51 PM

Share

ಏಷ್ಯನ್ ಗೇಮ್ಸ್​ನಲ್ಲಿ ಹಾಲಿ ಚಾಂಪಿಯನ್ ಭಾರತ ಮಹಿಳಾ ಕ್ರಿಕೆಟ್ ತಂಡ ಶುಭಾರಂಭ ಮಾಡಿದೆ. ಜಪಾನ್ ವಿರುದ್ಧ ನಡೆದ ಕ್ವಾರ್ಟರ್ ಫೈನಲ್ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿದ್ದ ಟೀಂ ಇಂಡಿಯಾ ಸೆಮಿಫೈನಲ್‌ಗೇರಿತ್ತು. ಇದೀಗ ಭಾನುವಾರ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲು ಸಜ್ಜಾಗಿದೆ. ಮತ್ತೊಂದೆಡೆ ಬಾಂಗ್ಲಾದೇಶ, ಚೀನಾ ವಿರುದ್ಧದ ಕ್ವಾರ್ಟರ್ ಫೈನಲ್ ಪಂದ್ಯ ರದ್ದಾದ ಕಾರಣದಿಂದಾಗಿ ಐಸಿಸಿ ರ್ಯಾಂಕಿಂಗ್ ಆಧಾರದ ಮೇಲೆ ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಕಳೆದ ವಾರ ನಡೆದ ಏಷ್ಯಾಕಪ್‌ ಸೆಮಿಫೈನಲ್​ನಲ್ಲಿ ಭಾರತ ಇದೇ ಬಾಂಗ್ಲಾದೇಶವನ್ನು ಎದುರಿಸಿತ್ತು. ಆ ಪಂದ್ಯವನ್ನು 40 ರನ್‌ಗಳಿಂದ ಗೆದ್ದುಕೊಂಡಿತ್ತು. ಹೀಗಾಗಿ ಟೀಂ ಇಂಡಿಯಾ ಅದೇ ಲಯವನ್ನು ಮುಂದುವರೆಸಲು ಪ್ರಯತ್ನಿಸಿದರೆ, ಇತ್ತ ಬಾಂಗ್ಲಾದೇಶ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ.

ಭಾರತ-ಬಾಂಗ್ಲಾದೇಶ ಏಷ್ಯನ್ ಗೇಮ್ಸ್ ಸೆಮಿಫೈನಲ್‌ ಪಂದ್ಯ ಯಾವಾಗ ನಡೆಯಲಿದೆ?

ಭಾರತ-ಬಾಂಗ್ಲಾದೇಶ ಏಷ್ಯನ್ ಗೇಮ್ಸ್ ಸೆಮಿಫೈನಲ್‌ ಪಂದ್ಯ ಸೆಪ್ಟೆಂಬರ್ 20 ರಂದು ನಡೆಯಲಿದೆ.

ಭಾರತ-ಬಾಂಗ್ಲಾದೇಶ ಏಷ್ಯನ್ ಗೇಮ್ಸ್ ಸೆಮಿಫೈನಲ್‌ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ-ಬಾಂಗ್ಲಾದೇಶ ಏಷ್ಯನ್ ಗೇಮ್ಸ್ ಸೆಮಿಫೈನಲ್‌ ಪಂದ್ಯ ಜಪಾನ್‌ನ ನಿಶಿನ್‌ನಲ್ಲಿರುವ ಕೊರೋಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ನಡೆಯಲಿದೆ.

ಭಾರತ-ಬಾಂಗ್ಲಾದೇಶ ಏಷ್ಯನ್ ಗೇಮ್ಸ್ ಸೆಮಿಫೈನಲ್‌ ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ-ಬಾಂಗ್ಲಾದೇಶ ಏಷ್ಯನ್ ಗೇಮ್ಸ್ ಸೆಮಿಫೈನಲ್‌ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 10:30 ಕ್ಕೆ ಆರಂಭವಾಗಲಿದೆ.

ಭಾರತ-ಬಾಂಗ್ಲಾದೇಶ ಏಷ್ಯನ್ ಗೇಮ್ಸ್ ಸೆಮಿಫೈನಲ್‌ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ-ಬಾಂಗ್ಲಾದೇಶ ಏಷ್ಯನ್ ಗೇಮ್ಸ್ ಸೆಮಿಫೈನಲ್‌ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ 3 ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಈ ಪಂದ್ಯಗಳ ನೇರ ಪ್ರಸಾರವು ಸೋನಿ LIV ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

ಏಷ್ಯನ್ ಗೇಮ್ಸ್​ಗೆ ಅದ್ಧೂರಿ ಚಾಲನೆ; ಭಾರತದ ಧ್ವಜದಾರಿಗಳಾದ ಮನು, ಪವನ್

ಉಭಯ ತಂಡಗಳು

ಭಾರತ ಮಹಿಳಾ ತಂಡ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಗುಣಲನ್ ಕಮಲಿನಿ, ಹರ್ಮನ್‌ಪ್ರೀತ್ ಕೌರ್(ನಾಯಕಿ), ಭಾರತಿ ಫುಲ್ಮಾಲಿ, ರಿಚಾ ಘೋಷ್(ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಶ್ರೇಯಾಂಕಾ ಪಾಟೀಲ್, ಶ್ರೀ ಚರಣಿ, ಕ್ರಾಂತಿ ಗೌಡ್, ನಂದನಿ ಶರ್ಮಾ, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ರಾಧಾ ಯಾದವ್.

ಬಾಂಗ್ಲಾದೇಶ ಮಹಿಳಾ ತಂಡ: ದಿಲಾರಾ ಅಖ್ತರ್, ಜುವೈರಿಯಾ ಫೆರ್ದೌಸ್, ಸೋಭಾನಾ ಮೊಸ್ತರಿ, ನಿಗರ್ ಸುಲ್ತಾನಾ(ನಾಯಕಿ), ಶೋರ್ನಾ ಅಖ್ತರ್, ಶರ್ಮಿನ್ ಅಖ್ತರ್, ಫಾಹಿಮಾ ಖಾತುನ್, ರಬೇಯಾ ಖಾನ್, ನಹಿದಾ ಅಕ್ಟರ್, ಸುಲ್ತಾನಾ ಖಾತುನ್, ಮಾರುಫಾ ಅಖ್ತರ್, ರಿತು ಮೋನಿ, ಸರ್ಮಿನ್ ಸುಲ್ತಾನಾ, ಶಂಜಿದಾ ಅಖ್ತರ್ ಮೇಘಲಾ, ಫರಿಹಾ ತ್ರಿಶ್ನಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ