IND-W vs SA-W: ಭಾರತ vs ಸೌತ್ ಆಫ್ರಿಕಾ ನಡುವಣ 2ನೇ ಪಂದ್ಯ ರದ್ದು

India Women vs South Africa Women: ಭಾರತ ಮತ್ತು ಸೌತ್ ಆಫ್ರಿಕಾ ಮಹಿಳಾ ತಂಡಗಳ ನಡುವಣ ಮೂರು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯವು ಜುಲೈ 9 ರಂದು ನಡೆಯಲಿದೆ. ಈ ಪಂದ್ಯವು ಉಭಯ ತಂಡಗಳ ಪಾಲಿಗೆ ಸರಣಿ ನಿರ್ಣಾಯಕ. ಏಕೆಂದರೆ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಗೆದ್ದರೆ, 2ನೇ ಪಂಂದ್ಯವು ರದ್ದಾಗಿದೆ. ಇದೀಗ ಕೊನೆಯ ಪಂದ್ಯವು ಸರಣಿ ನಿರ್ಣಾಯಕವಾಗಿ ಮಾರ್ಪಟ್ಟಿದೆ.

IND-W vs SA-W: ಭಾರತ vs ಸೌತ್ ಆಫ್ರಿಕಾ ನಡುವಣ 2ನೇ ಪಂದ್ಯ ರದ್ದು
IND vs SA
Follow us
ಝಾಹಿರ್ ಯೂಸುಫ್
|

Updated on:Jul 08, 2024 | 7:26 AM

ಭಾರತ ಮತ್ತು ಸೌತ್ ಆಫ್ರಿಕಾ ಮಹಿಳಾ ತಂಡಗಳ ನಡುವಣ 2ನೇ ಟಿ20 ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ ನಡೆಯಬೇಕಿದ್ದ ಈ ಪಂದ್ಯದ 2ನೇ ಇನಿಂಗ್ಸ್ ವೇಳೆ ಧಾರಾಕಾರ ಮಳೆಯಾಗಿತ್ತು. ಹೀಗಾಗಿ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ (Team India) ನಾಯಕಿ ಹರ್ಮನ್​ಪ್ರೀತ್ ಕೌರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ಪರ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು.

ಆರಂಭಿಕರಾದ ಲಾರಾ ವೊಲ್ವಾರ್ಡ್ಟ್ ಹಾಗೂ ತಜ್ಮಿನ್ ಬ್ರಿಟ್ಸ್ ಮೊದಲ ವಿಕೆಟ್​ಗೆ 43 ರನ್​ಗಳ ಜೊತೆಯಾಟವಾಡಿದರು. ಈ ವೇಳೆ ಪೂಜಾ ವಸ್ತ್ರಾಕರ್ ಎಸೆತದಲ್ಲಿ ಲಾರಾ (22) ಔಟಾದರು. ಮತ್ತೊಂದೆಡೆ ಉತ್ತಮ ಬ್ಯಾಟಿಂಗ್ ಮುಂದುವರೆಸಿದ ತಜ್ಮಿನ್ 39 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 52 ರನ್​ ಬಾರಿಸಿದರು.

ಇನ್ನು ಅನ್ನೆಕೆ ಬಾಷ್ 40 ರನ್​ಗಳ ಕೊಡುಗೆ ನೀಡಿದರೆ, ಮರಿಝನ್ನೆ ಕಪ್ 20 ರನ್​ ಬಾರಿಸಿದರು. ಈ ಮೂಲಕ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 177 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಲು ಸಿದ್ಧರಾಗಿದ್ದ ಟೀಮ್ ಇಂಡಿಯಾಗೆ ಬ್ಯಾಟಿಂಗ್ ಮಾಡಲು ವರುಣ ಅವಕಾಶವೇ ನೀಡಲಿಲ್ಲ. ಎರಡನೇ ಇನಿಂಗ್ಸ್ ಆರಂಭಕ್ಕೂ ಮುನ್ನವೇ ಸತತ ವರ್ಷಧಾರೆಯಾಗಿದ್ದ ಕಾರಣ ಮೈದಾನವು ಸಂಪೂರ್ಣ ಒದ್ದೆಯಾಗಿತ್ತು. ಹೀಗಾಗಿ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ.

ನಿರ್ಣಾಯಕ ಪಂದ್ಯ:

ಮೂರು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು 12 ರನ್​ಗಳಿಂದ ಜಯ ಸಾಧಿಸಿದೆ. ಇದೀಗ 2ನೇ ಪಂದ್ಯವು ರದ್ದಾಗಿರುವ ಕಾರಣ ಮೂರನೇ ಪಂದ್ಯವು ಸರಣಿ ನಿರ್ಣಾಯಕವಾಗಿದೆ. ಅಂದರೆ ಮಂಗಳವಾರ (ಜು.9) ನಡೆಯಲಿರುವ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಗೆದ್ದರೆ ಟ್ರೋಫಿ ಗೆಲ್ಲಬಹುದು. ಇತ್ತ ಸರಣಿಯನ್ನು ಸಮಬಲದಲ್ಲಿ ಅಂತ್ಯಗೊಳಿಸಲು ಭಾರತ ತಂಡವು ಈ ಪಂದ್ಯದಲ್ಲಿ ಜಯ ಸಾಧಿಸಬೇಕು. ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಭಾರತ ಮಹಿಳಾ ತಂಡ: ಸ್ಮೃತಿ ಮಂಧಾನ , ಶಫಾಲಿ ವರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರೋಡ್ರಿಗಸ್ , ದೀಪ್ತಿ ಶರ್ಮಾ , ಪೂಜಾ ವಸ್ತ್ರಾಕರ್ , ಶ್ರೇಯಾಂಕಾ ಪಾಟೀಲ್, ರಾಧಾ ಯಾದವ್, ರೇಣುಕಾ ಠಾಕೂರ್ ಸಿಂಗ್, ಸೈಕಾ ಇಶಾಕ್, ದಯಾಲನ್ ಹೇಮಲತಾ , ಅರುಂಧ ಹೇಮಲತಾ ರೆಡ್ಡಿ ಉಮಾ ಚೆಟ್ರಿ, ಪ್ರಿಯಾ ಪುನಿಯಾ, ಆಶಾ ಸೋಭಾನ.

ಇದನ್ನೂ ಓದಿ: T20 World Cup 2024: ಟೀಮ್ ಇಂಡಿಯಾದ ಮುಂದಿನ ಎದುರಾಳಿ ಯಾರು? ಇಲ್ಲಿದೆ ಪೂರ್ಣ ಮಾಹಿತಿ

ಸೌತ್ ಆಫ್ರಿಕಾ ಮಹಿಳಾ ತಂಡ: ಲಾರಾ ವೊಲ್ವಾರ್ಡ್ಟ್ (ನಾಯಕಿ), ತಜ್ಮಿನ್ ಬ್ರಿಟ್ಸ್, ಡೆಲ್ಮಿ ಟಕರ್, ಸುನೆ ಲೂಸ್, ಮಾರಿಝನ್ನೆ ಕಪ್, ನಾಡಿನ್ ಡಿ ಕ್ಲರ್ಕ್, ಎಲಿಜ್-ಮಾರಿ ಮಾರ್ಕ್ಸ್, ಸಿನಾಲೊ ಜಾಫ್ತಾ (ವಿಕೆಟ್ ಕೀಪರ್), ಅಯಾಬೊಂಗಾ ಖಾಕಾ, ಮಸಾಬಟಾ ಕ್ಲಾಸ್, ನಾನ್ಕುಲುಲೆಕೊ ಮ್ಲಾಬಾ, ಅನ್ನೆಕೆ ಬಾಷ್, ತುಮಿ ಸೆಖುಖುನೆ, ನಂದುಮಿಸೊ ಶಾಂಗಸೆ, ಅನ್ನೇರಿ ಡೆರ್ಕ್ಸೆನ್, ಮೈಕೆ ಡಿ ರಿಡ್ಡರ್.

Published On - 7:25 am, Mon, 8 July 24

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್