AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND-W vs SL-W: ಭಾರತ- ಲಂಕಾ ನಡುವೆ 2ನೇ ಟಿ20 ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ಆರಂಭ?

India Women vs Sri Lanka Women T20: ವಿಶಾಖಪಟ್ಟಣಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾವನ್ನು ಮಣಿಸಿರುವ ಭಾರತ ವನಿತಾ ತಂಡ, ಈಗ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಡಿಸೆಂಬರ್ 23 ರಂದು ನಡೆಯುವ ಈ ಪಂದ್ಯದಲ್ಲಿ ಸರಣಿ ಗೆಲುವಿನ ಗುರಿ ಹೊಂದಿದೆ. ಮೊದಲ ಪಂದ್ಯದಲ್ಲಿ ಜೆಮಿಮಾ ಉತ್ತಮ ಪ್ರದರ್ಶನ ನೀಡಿದರು. ಲಂಕಾ ತಂಡವು ಬಲವಾದ ತಿರುಗೇಟು ನೀಡಲು ಎದುರು ನೋಡುತ್ತಿದೆ.

IND-W vs SL-W: ಭಾರತ- ಲಂಕಾ ನಡುವೆ 2ನೇ ಟಿ20 ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ಆರಂಭ?
Ind W Vs Sl W
ಪೃಥ್ವಿಶಂಕರ
|

Updated on: Dec 22, 2025 | 10:43 PM

Share

ವಿಶಾಖಪಟ್ಟಣಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಏಕಪಕ್ಷೀಯವಾಗಿ ಮಣಿಸಿದ್ದ ಭಾರತ ವನಿತಾ ಪಡೆ (India Women vs Sri Lanka Women), ಇದೀಗ ಎರಡನೇ ಟಿ20 ಪಂದ್ಯವನ್ನಾಡಲು ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಡಿಸೆಂಬರ್ 23 ರಂದು ನಡೆಯಲಿದೆ. ಮೊದಲ ಪಂದ್ಯದಲ್ಲಿ ಭಾರತದ ದಾಳಿಗೆ ತತ್ತರಿಸಿದ್ದ ಶ್ರೀಲಂಕಾ ಕೇವಲ 126 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತದ ಪರ ಜೆಮಿಮಾ 44 ಎಸೆತಗಳಲ್ಲಿ 69 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಇದೀಗ ಎರಡನೇ ಪಂದ್ಯದಲ್ಲೂ ಟೀಂ ಇಂಡಿಯಾ ಇದೇ ಪ್ರದರ್ಶನವನ್ನು ನೀಡುವ ಇರಾದೆಯಲಿದ್ದರೆ, ಇತ್ತ ಶ್ರೀಲಂಕಾ ಮಹಿಳಾ ಕ್ರಿಕೆಟ್ ತಂಡವು ಬಲವಾದ ಪುನರಾಗಮನವನ್ನು ಎದುರು ನೋಡುತ್ತಿದೆ.

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡದ ನಡುವಿನ ಎರಡನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡದ ನಡುವಿನ ಎರಡನೇ ಟಿ20 ಪಂದ್ಯ ಡಿಸೆಂಬರ್ 23 ರಂದು ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡದ ನಡುವಿನ ಎರಡನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ವಿಶಾಖಪಟ್ಟಣಂನ ACA-VDCA ಕ್ರಿಕೆಟ್ ಕ್ರೀಡಾಂಗಣದಲ್ಲಿ ಎರಡನೇ ಟಿ20 ಪಂದ್ಯ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡದ ನಡುವಿನ ಎರಡನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ?

ಪಂದ್ಯವು ಭಾರತೀಯ ಕಾಲಮಾನ ಸಂಜೆ 7:00 ಗಂಟೆಗೆ ಪ್ರಾರಂಭವಾಗಲಿದ್ದು, ಟಾಸ್ ಭಾರತೀಯ ಕಾಲಮಾನ ಸಂಜೆ 6:30 ಕ್ಕೆ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡದ ನಡುವಿನ ಎರಡನೇ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡದ ಎರಡನೇ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು.ಹಾಗೆಯೇ ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ವೀಕ್ಷಿಸಬಹುದು.

IND vs SA: ಸತತ 19ನೇ ಟಿ20 ಸರಣಿ ಗೆದ್ದು 2025 ಕ್ಕೆ ವಿದಾಯ ಹೇಳಿದ ಟೀಂ ಇಂಡಿಯಾ

ಉಭಯ ತಂಡಗಳು

ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ದೀಪ್ತಿ ಶರ್ಮಾ, ಸ್ನೇಹ ರಾಣಾ, ಜೆಮಿಮಾ ರಾಡ್ರಿಗಸ್, ಶೆಫಾಲಿ ವರ್ಮಾ, ಹರ್ಲೀನ್ ಡಿಯೋಲ್, ಅಮನ್‌ಜೋತ್ ಕೌರ್, ಅರುಂಧತಿ ರೆಡ್ಡಿ, ಕ್ರಾಂತಿ ಗೌಡ್, ರೇಣುಕಾ ಸಿಂಗ್ ಠಾಕೂರ್, ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್), ಶ್ರೀ ಚರಣಿ, ವೈಷ್ಣವಿ ಶರ್ಮಾ.

ಶ್ರೀಲಂಕಾ ತಂಡ: ಚಾಮರಿ ಅಟಪಟ್ಟು (ನಾಯಕಿ), ಹಾಸಿನಿ ಪೆರೇರಾ, ವಿಶ್ಮಿ ಗುಣರತ್ನೆ, ಹರ್ಷಿತಾ ಸಮರವಿಕ್ರಮ, ನೀಲಾಕ್ಷಿಕಾ ಡಿ ಸಿಲ್ವಾ, ಕವಿಶಾ ದಿಲ್ಹಾರಿ, ಇಮೇಶಾ ದುಲಾನಿ, ಕೌಶಿನಿ ನುತ್ಯಾಂಗನಾ, ಮಲ್ಶಾ ಶೆಹಾನಿ, ಇನೋಕಾ ರಣವೀರ, ಶಶಿನಿ ಗಿಮ್ಹಾನಿ, ನಿಮೇಶ್ ಮದುಶಾನಿ, ಕಾವ್ಯಾ ಕವಿಂದಿ, ರಶ್ಮಿಕಾ ಸೆವ್ವಂದಿ, ಮಾಲ್ಕಿ ಮಾದರ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ