AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND-W vs SL-W: ಸತತ 3ನೇ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಮನ್‌ಪ್ರೀತ್; ಭಾರತ ತಂಡದಲ್ಲಿ 2 ಬದಲಾವಣೆ

India Women vs Sri Lanka Women 3rd T20: ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ 3ನೇ ಟಿ20 ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಭಾರತ, ಈ ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳಲು ನೋಡುತ್ತಿದೆ. ಹರ್ಮನ್‌ಪ್ರೀತ್ ಕೌರ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದ್ದಾರೆ. ಉಭಯ ತಂಡಗಳ ಪ್ಲೇಯಿಂಗ್ 11 ರಲ್ಲಿ ಬದಲಾವಣೆಗಳಾಗಿವೆ. ಶ್ರೀಲಂಕಾ ಸರಣಿ ಉಳಿಸಿಕೊಳ್ಳುವ ಒತ್ತಡದಲ್ಲಿದೆ.

IND-W vs SL-W: ಸತತ 3ನೇ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಮನ್‌ಪ್ರೀತ್; ಭಾರತ ತಂಡದಲ್ಲಿ 2 ಬದಲಾವಣೆ
Harmanpreet
ಪೃಥ್ವಿಶಂಕರ
|

Updated on:Dec 26, 2025 | 6:47 PM

Share

ಭಾರತ ಮತ್ತು ಶ್ರೀಲಂಕಾ (India Women vs Sri Lanka Women) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. ಉಭಯ ತಂಡಗಳ ನಡುವಿನ ಈ ಸರಣಿಯಲ್ಲಿ ಆತಿಥೇಯ ಟೀಂ ಇಂಡಿಯಾ 2-0 ಅಂತರದ ಮುನ್ನಡೆ ಸಾಧಿಸಿದ್ದು, ಇದೀಗ ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಇನ್ನೇರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳಲು ನೋಡುತ್ತಿದೆ. ಇತ್ತ ಮೊದಲೆರಡು ಪಂದ್ಯಗಳಲ್ಲಿ ಏಕಪಕ್ಷೀಯ ಸೋಲು ಅನುಭವಿಸಿದ್ದ ಶ್ರೀಲಂಕಾ ತಂಡ, ಈ ಪಂದ್ಯವನ್ನು ಗೆದ್ದು ಸರಣಿಯನ್ನು ಜೀವಂತವಾಗಿರಿಸಲು ನೋಡುತ್ತಿದೆ.

ಟಾಸ್ ಗೆದ್ದ ಟೀಂ ಇಂಡಿಯಾ

ಏಕದಿನ ವಿಶ್ವಕಪ್​ಗೂ ಮುನ್ನ ಸತತ ಟಾಸ್ ಸೋತು, ಟಾಸ್ ಸೋಲುವುದನ್ನೇ ಕಾಯಕ ಮಾಡಿಕೊಂಡಿದ್ದ ಟೀಂ ಇಂಡಿಯಾ ನಾಯಕಿ ಹರ್ಮನ್​ಪ್ರೀತ್​ ಕೌರ್​ ಅವರ ಲಕ್ ಬದಲಾಗಿದೆ. ಶ್ರೀಲಂಕಾ ವಿರುದ್ಧದ ಈ ಸರಣಿಯ ಮೊದಲ 3 ಪಂದ್ಯಗಳಲ್ಲೂ ಹರ್ಮನ್ ಟಾಸ್ ಗೆದ್ದಿದ್ದಾರೆ. ಅಂದರೆ ಈ ಪಂದ್ಯದಲ್ಲೂ ಟಾಸ್ ಗೆದ್ದಿರುವ ಟೀಂ ಇಂಡಿಯ ನಾಯಕಿ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಲಂಕಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.

ತಂಡದಲ್ಲಿ 2 ಬದಲಾವಣೆ

ಟಾಸ್ ಗೆದ್ದ ಬಳಿಕ ಮಾತನಾಡಿದ ನಾಯಕಿ ಹರ್ಮನ್‌ಪ್ರೀತ್ ಕೌರ್ ಭಾರತದ ಪ್ಲೇಯಿಂಗ್ 11 ರಲ್ಲಿ ಎರಡು ಬದಲಾವಣೆಗಳನ್ನು ಮಾಡಿರುವುದಾಗಿ ತಿಳಿಸಿದ್ದಾರೆ. ಆ ಪ್ರಕಾರ, ಸ್ನೇಹ್ ರಾಣಾ ಮತ್ತು ಅರುಂಧತಿ ರೆಡ್ಡಿ ಬದಲಿಗೆ ರೇಣುಕಾ ಠಾಕೂರ್ ಮತ್ತು ದೀಪ್ತಿ ಶರ್ಮಾ ತಂಡಕ್ಕೆ ಮರಳಿದ್ದಾರೆ. ಏತನ್ಮಧ್ಯೆ, ಶ್ರೀಲಂಕಾದ ನಾಯಕಿ ಚಾಮರಿಅಟಾಪಟ್ಟು ಕೂಡ ಪ್ಲೇಯಿಂಗ್ 11 ರಲ್ಲಿ ಮೂರು ಬದಲಾವಣೆಗಳನ್ನು ಮಾಡಿರುವುದಾಗಿ ತಿಳಿಸಿದ್ದಾರೆ.

ಉಭಯ ತಂಡಗಳು

ಶ್ರೀಲಂಕಾ ತಂಡ: ಚಾಮರಿ ಅಟಾಪಟು (ನಾಯಕಿ), ಹಾಸಿನಿ ಪೆರೇರಾ, ಹರ್ಷಿತಾ ಸಮರವಿಕ್ರಮ, ಕವಿಶಾ ದಿಲ್ಹಾರಿ, ನೀಲಾಕ್ಷಿಕಾ ಸಿಲ್ವಾ, ಇಮೇಶಾ ದುಲಾನಿ, ಕೌಶಿನಿ ನುತ್ಯಂಗನಾ, ಮಲ್ಶಾ ಶೆಹಾನಿ, ಇನೋಕಾ ರಣವೀರ, ಮಲ್ಕಿ ಮಾದರ, ಮತ್ತು ನಿಮಾಶಾ ಮೀಪಗೆ.

ಭಾರತ ತಂಡ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್, ದೀಪ್ತಿ ಶರ್ಮಾ, ಅಮನ್‌ಜೋತ್ ಕೌರ್, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ರೇಣುಕಾ ಸಿಂಗ್ ಠಾಕೂರ್ ಮತ್ತು ಶ್ರೀ ಚರಣಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:41 pm, Fri, 26 December 25

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?