
ಭಾರತ ಮತ್ತು ಶ್ರೀಲಂಕಾ (India Women vs Sri Lanka Women) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. ಉಭಯ ತಂಡಗಳ ನಡುವಿನ ಈ ಸರಣಿಯಲ್ಲಿ ಆತಿಥೇಯ ಟೀಂ ಇಂಡಿಯಾ 2-0 ಅಂತರದ ಮುನ್ನಡೆ ಸಾಧಿಸಿದ್ದು, ಇದೀಗ ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಇನ್ನೇರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳಲು ನೋಡುತ್ತಿದೆ. ಇತ್ತ ಮೊದಲೆರಡು ಪಂದ್ಯಗಳಲ್ಲಿ ಏಕಪಕ್ಷೀಯ ಸೋಲು ಅನುಭವಿಸಿದ್ದ ಶ್ರೀಲಂಕಾ ತಂಡ, ಈ ಪಂದ್ಯವನ್ನು ಗೆದ್ದು ಸರಣಿಯನ್ನು ಜೀವಂತವಾಗಿರಿಸಲು ನೋಡುತ್ತಿದೆ.
ಏಕದಿನ ವಿಶ್ವಕಪ್ಗೂ ಮುನ್ನ ಸತತ ಟಾಸ್ ಸೋತು, ಟಾಸ್ ಸೋಲುವುದನ್ನೇ ಕಾಯಕ ಮಾಡಿಕೊಂಡಿದ್ದ ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರ ಲಕ್ ಬದಲಾಗಿದೆ. ಶ್ರೀಲಂಕಾ ವಿರುದ್ಧದ ಈ ಸರಣಿಯ ಮೊದಲ 3 ಪಂದ್ಯಗಳಲ್ಲೂ ಹರ್ಮನ್ ಟಾಸ್ ಗೆದ್ದಿದ್ದಾರೆ. ಅಂದರೆ ಈ ಪಂದ್ಯದಲ್ಲೂ ಟಾಸ್ ಗೆದ್ದಿರುವ ಟೀಂ ಇಂಡಿಯ ನಾಯಕಿ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಲಂಕಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.
ಟಾಸ್ ಗೆದ್ದ ಬಳಿಕ ಮಾತನಾಡಿದ ನಾಯಕಿ ಹರ್ಮನ್‌ಪ್ರೀತ್ ಕೌರ್ ಭಾರತದ ಪ್ಲೇಯಿಂಗ್ 11 ರಲ್ಲಿ ಎರಡು ಬದಲಾವಣೆಗಳನ್ನು ಮಾಡಿರುವುದಾಗಿ ತಿಳಿಸಿದ್ದಾರೆ. ಆ ಪ್ರಕಾರ, ಸ್ನೇಹ್ ರಾಣಾ ಮತ್ತು ಅರುಂಧತಿ ರೆಡ್ಡಿ ಬದಲಿಗೆ ರೇಣುಕಾ ಠಾಕೂರ್ ಮತ್ತು ದೀಪ್ತಿ ಶರ್ಮಾ ತಂಡಕ್ಕೆ ಮರಳಿದ್ದಾರೆ. ಏತನ್ಮಧ್ಯೆ, ಶ್ರೀಲಂಕಾದ ನಾಯಕಿ ಚಾಮರಿಅಟಾಪಟ್ಟು ಕೂಡ ಪ್ಲೇಯಿಂಗ್ 11 ರಲ್ಲಿ ಮೂರು ಬದಲಾವಣೆಗಳನ್ನು ಮಾಡಿರುವುದಾಗಿ ತಿಳಿಸಿದ್ದಾರೆ.
🚨 Toss 🚨#TeamIndia have won the toss and elected to field first.
Updates ▶️ https://t.co/Vkn1t7b6Dm#INDvSL | @IDFCFIRSTBank pic.twitter.com/xiTrj5cMxX
— BCCI Women (@BCCIWomen) December 26, 2025
ಶ್ರೀಲಂಕಾ ತಂಡ: ಚಾಮರಿ ಅಟಾಪಟು (ನಾಯಕಿ), ಹಾಸಿನಿ ಪೆರೇರಾ, ಹರ್ಷಿತಾ ಸಮರವಿಕ್ರಮ, ಕವಿಶಾ ದಿಲ್ಹಾರಿ, ನೀಲಾಕ್ಷಿಕಾ ಸಿಲ್ವಾ, ಇಮೇಶಾ ದುಲಾನಿ, ಕೌಶಿನಿ ನುತ್ಯಂಗನಾ, ಮಲ್ಶಾ ಶೆಹಾನಿ, ಇನೋಕಾ ರಣವೀರ, ಮಲ್ಕಿ ಮಾದರ, ಮತ್ತು ನಿಮಾಶಾ ಮೀಪಗೆ.
ಭಾರತ ತಂಡ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್, ದೀಪ್ತಿ ಶರ್ಮಾ, ಅಮನ್‌ಜೋತ್ ಕೌರ್, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ರೇಣುಕಾ ಸಿಂಗ್ ಠಾಕೂರ್ ಮತ್ತು ಶ್ರೀ ಚರಣಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:41 pm, Fri, 26 December 25