
ಭಾರತ ಹಾಗೂ ಶ್ರೀಲಂಕಾ (India Women vs Sri Lanka Women) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ 4ನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿವೆ. ಮುಂದಿನ ವರ್ಷ ನಡೆಯಲಿರುವ ಮಹಿಳಾ ಟಿ20 ವಿಶ್ವಕಪ್ ದೃಷ್ಟಿಯಿಂದ ಈ ಸರಣಿಯನ್ನು ಗಂಭೀರವಾಗಿ ಪರಿಗಣಿಸಿದ್ದ ಹರ್ಮನ್ ಪಡೆ ನಿರೀಕ್ಷಿತ ಪ್ರದರ್ಶನ ನೀಡಿ ಸರಣಿಯನ್ನು ವಶಪಡಿಸಿಕೊಂಡಿದೆ. ಈಗಾಗಲೇ ಆಡಿರುವ ಮೊದಲ ಮೂರು ಪಂದ್ಯಗಳಲ್ಲಿ ಮೂರನ್ನೂ ತಂಡ ಗೆದ್ದಿದೆ. ಮೊದಲ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಮತ್ತು ಎರಡನೇ ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಆ ನಂತರ ತಿರುವನಂತಪುರದಲ್ಲಿ ನಡೆದ ಮೂರನೇ ಪಂದ್ಯವನ್ನು ಭಾರತೀಯ ಮಹಿಳಾ ತಂಡ 8 ವಿಕೆಟ್‌ಗಳಿಂದ ಗೆದ್ದುಕೊಂಡಿದೆ. ಇದೀಗ 4ನೇ ಪಂದ್ಯದ ಮೇಲೂ ಹರ್ಮನ್ ಪಡೆ ಕಣ್ಣಿಟ್ಟಿದೆ.
ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ನಾಲ್ಕನೇ ಟಿ20 ಪಂದ್ಯ ಡಿಸೆಂಬರ್ 28 ರ ಭಾನುವಾರ ನಡೆಯಲಿದೆ.
ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡದ ನಡುವಿನ ನಾಲ್ಕನೇ ಟಿ20 ಪಂದ್ಯ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ನಾಲ್ಕನೇ ಟಿ20 ಪಂದ್ಯ ಸಂಜೆ 7:00 ಗಂಟೆಗೆ ಆರಂಭವಾಗಲಿದ್ದು, ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡದ ನಡುವಿನ ನಾಲ್ಕನೇ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು.
ಜಿಯೋ-ಹಾಟ್‌ಸ್ಟಾರ್ ಅಪ್ಲಿಕೇಶನ್ ಬಳಸಿ ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ನಾಲ್ಕನೇ ಟಿ20 ಪಂದ್ಯವನ್ನು ನಿಮ್ಮ ಮೊಬೈಲ್ ಫೋನ್‌ನಲ್ಲಿ ವೀಕ್ಷಿಸಬಹುದು.
ಭಾರತ ತಂಡ: ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಅಮಂಜೋತ್ ಕೌರ್, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ರೇಣುಕಾ ಸಿಂಗ್ ಠಾಕೂರ್, ಶ್ರೀ ಚರಣಿ, ಜಿ ಕಮಲಿನಿ, ಹರ್ಲೀನ್ ಡಿಯೋಲ್, ಅರುಂಧಾ ರೆಡ್ಡಿ, ಸ್ನೇಹ್ ರೆಡ್ಡಿ.
ಶ್ರೀಲಂಕಾ ತಂಡ: ಚಾಮರಿ ಅಟಪಟ್ಟು (ನಾಯಕಿ), ಹಾಸಿನಿ ಪೆರೇರಾ, ವಿಶ್ಮಿ ಗುಣರತ್ನೆ, ಹರ್ಷಿತಾ ಸಮರವಿಕ್ರಮ, ನೀಲಾಕ್ಷಿಕಾ ಡಿ ಸಿಲ್ವಾ, ಕವಿಶಾ ದಿಲ್ಹಾರಿ, ಇಮೇಶಾ ದುಲಾನಿ, ಕೌಶಿನಿ ನುತ್ಯಾಂಗನಾ, ಮಲ್ಶಾ ಶೆಹಾನಿ, ಇನೋಕಾ ರಣವೀರ, ಶಶಿನಿ ಗಿಮ್ಹಾನಿ, ನಿಮೇಶ್ ಮದುಶಾನಿ, ಕಾವ್ಯಾ ಕವಿಂದಿ, ರಶ್ಮಿಕಾ ಸೆವ್ವಂದಿ, ಮಾಲ್ಕಿ ಮಾದರ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ