AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND-W vs SL-W: ಟಾಸ್ ಗೆದ್ದ ಶ್ರೀಲಂಕಾ; ಟೀಂ ಇಂಡಿಯಾದಲ್ಲಿ 2 ಬದಲಾವಣೆ

IND-W vs SL-W 4th T20: ಭಾರತ-ಶ್ರೀಲಂಕಾ ಮಹಿಳಾ ಟಿ20 ಸರಣಿಯ 4ನೇ ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. 3-0 ಅಂತರದಲ್ಲಿ ಸರಣಿ ಗೆದ್ದ ಭಾರತಕ್ಕೆ ಇದು ಔಪಚಾರಿಕ ಪಂದ್ಯವಾದರೂ, ಮುಂಬರುವ ವಿಶ್ವಕಪ್ ದೃಷ್ಟಿಯಿಂದ ತಪ್ಪುಗಳನ್ನು ತಿದ್ದಿಕೊಳ್ಳಲು ಪ್ರಮುಖವಾಗಿದೆ. ಶ್ರೀಲಂಕಾ ಟಾಸ್ ಗೆದ್ದು ಭಾರತವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

IND-W vs SL-W: ಟಾಸ್ ಗೆದ್ದ ಶ್ರೀಲಂಕಾ; ಟೀಂ ಇಂಡಿಯಾದಲ್ಲಿ 2 ಬದಲಾವಣೆ
Ind W Vs Sl W
ಪೃಥ್ವಿಶಂಕರ
|

Updated on:Dec 28, 2025 | 6:55 PM

Share

ಭಾರತ ಮತ್ತು ಶ್ರೀಲಂಕಾ ( India vs Sri Lanka) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ತಿರುವನಂತಪುರದಲ್ಲಿ (Thiruvananthapuram) ನಡೆಯುತ್ತಿದೆ. ಹರ್ಮನ್‌ಪ್ರೀತ್ ಕೌರ್ (Harmanpreet Kaur) ನೇತೃತ್ವದ ಭಾರತ ತಂಡವು ಈಗಾಗಲೇ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದ್ದು, ಸರಣಿಯನ್ನು ಕೈವಶಮಾಡಿಕೊಂಡಿದೆ. ಹೀಗಾಗಿನ ಉಳಿದಿರುವ ಎರಡು ಪಂದ್ಯಗಳು ಭಾರತ ತಂಡಕ್ಕೆ ಕೇವಲ ಔಪಚಾರಿಕವಾಗಿವೆ. ಆದಾಗ್ಯೂ ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಟೀಂ ಇಂಡಿಯಾ ಯಾವ ಪಂದ್ಯವನ್ನು ನಿರ್ಲಕ್ಷಿಸುವಂತಿಲ್ಲ. ಆದ್ದರಿಂದ ಹರ್ಮನ್​ ಪಡೆ ಮೊದಲ ಮೂರು ಪಂದ್ಯಗಳಲ್ಲಿ ಮಾಡಿದ ಕೆಲವು ತಪ್ಪುಗಳನ್ನು ತಿದ್ದಿಕೊಳ್ಳಲು ಉಳಿದಿರುವ ಎರಡು ಪಂದ್ಯಗಳಲ್ಲಿ ಮಾಡಬೇಕಿದೆ.

ಟಾಸ್ ಗೆದ್ದ ಶ್ರೀಲಂಕಾ

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡವು ಆತಿಥೇಯರನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಈ ಸರಣಿಯಲ್ಲಿ ಲಂಕಾ ತಂಡ ಟಾಸ್ ಗೆದ್ದಿರುವುದು ಇದೇ ಮೊದಲು. ಮೊದಲ 3 ಪಂದ್ಯಗಳಲ್ಲಿ ಟಾಸ್ ಗೆದ್ದಿದ್ದ ಟೀಂ ಇಂಡಿಯಾ ಪಂದ್ಯವನ್ನು ಗೆದ್ದುಕೊಂಡಿತ್ತು. ಇದೀಗ ನಾಲ್ಕನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಂಕಾ ಭಾರತವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದೆ. ಹಾಗೆಯೇ ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಜೆಮಿಮಾ ರೊಡ್ರಿಗಸ್ ಹಾಗೂ ಕ್ರಾಂತಿ ಗೌಡ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಬದಲಿಗೆ ಹರ್ಲೀನ್ ಡಿಯೋಲ್ ಮತ್ತು ಅರುಂಧತಿ ರೆಡ್ಡಿ ತಂಡದಲ್ಲಿ ಆಡುತ್ತಿದ್ದಾರೆ.

ಉಭಯ ತಂಡಗಳು

ಭಾರತ ತಂಡ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಅಮಂಜೋತ್ ಕೌರ್, ವೈಷ್ಣವಿ ಶರ್ಮಾ, ಶ್ರೀ ಚರಣಿ, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ.

ಶ್ರೀಲಂಕಾ ತಂಡ: ಹಾಸಿನಿ ಪೆರೇರಾ, ಚಾಮರಿ ಅಟಾಪಟು (ನಾಯಕಿ), ಹರ್ಷಿತಾ ಸಮರವಿಕ್ರಮ, ಇಮೇಶಾ ದುಲಾನಿ, ನೀಲಾಕ್ಷಿಕಾ ಸಿಲ್ವಾ, ಕವಿಶಾ ದಿಲ್ಹಾರಿ, ಕೌಶಿನಿ ನುತ್ಯಂಗನಾ (ವಿಕೆಟ್ ಕೀಪರ್), ಮಲ್ಶಾ ಶೆಹಾನಿ, ನಿಮಾಶಾ ಮೀಪಗೆ, ಕಾವ್ಯಾ ಕವಿಂದಿ, ರಶ್ಮಿಕಾ ಸೆವ್ವಂಡಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:49 pm, Sun, 28 December 25

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ