
ಭಾರತ ಮತ್ತು ಶ್ರೀಲಂಕಾ ( India vs Sri Lanka) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ತಿರುವನಂತಪುರದಲ್ಲಿ (Thiruvananthapuram) ನಡೆಯುತ್ತಿದೆ. ಹರ್ಮನ್ಪ್ರೀತ್ ಕೌರ್ (Harmanpreet Kaur) ನೇತೃತ್ವದ ಭಾರತ ತಂಡವು ಈಗಾಗಲೇ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದ್ದು, ಸರಣಿಯನ್ನು ಕೈವಶಮಾಡಿಕೊಂಡಿದೆ. ಹೀಗಾಗಿನ ಉಳಿದಿರುವ ಎರಡು ಪಂದ್ಯಗಳು ಭಾರತ ತಂಡಕ್ಕೆ ಕೇವಲ ಔಪಚಾರಿಕವಾಗಿವೆ. ಆದಾಗ್ಯೂ ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಟೀಂ ಇಂಡಿಯಾ ಯಾವ ಪಂದ್ಯವನ್ನು ನಿರ್ಲಕ್ಷಿಸುವಂತಿಲ್ಲ. ಆದ್ದರಿಂದ ಹರ್ಮನ್ ಪಡೆ ಮೊದಲ ಮೂರು ಪಂದ್ಯಗಳಲ್ಲಿ ಮಾಡಿದ ಕೆಲವು ತಪ್ಪುಗಳನ್ನು ತಿದ್ದಿಕೊಳ್ಳಲು ಉಳಿದಿರುವ ಎರಡು ಪಂದ್ಯಗಳಲ್ಲಿ ಮಾಡಬೇಕಿದೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡವು ಆತಿಥೇಯರನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಈ ಸರಣಿಯಲ್ಲಿ ಲಂಕಾ ತಂಡ ಟಾಸ್ ಗೆದ್ದಿರುವುದು ಇದೇ ಮೊದಲು. ಮೊದಲ 3 ಪಂದ್ಯಗಳಲ್ಲಿ ಟಾಸ್ ಗೆದ್ದಿದ್ದ ಟೀಂ ಇಂಡಿಯಾ ಪಂದ್ಯವನ್ನು ಗೆದ್ದುಕೊಂಡಿತ್ತು. ಇದೀಗ ನಾಲ್ಕನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಂಕಾ ಭಾರತವನ್ನು ಬ್ಯಾಟಿಂಗ್ಗೆ ಆಹ್ವಾನಿಸಿದೆ. ಹಾಗೆಯೇ ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಜೆಮಿಮಾ ರೊಡ್ರಿಗಸ್ ಹಾಗೂ ಕ್ರಾಂತಿ ಗೌಡ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಬದಲಿಗೆ ಹರ್ಲೀನ್ ಡಿಯೋಲ್ ಮತ್ತು ಅರುಂಧತಿ ರೆಡ್ಡಿ ತಂಡದಲ್ಲಿ ಆಡುತ್ತಿದ್ದಾರೆ.
ಭಾರತ ತಂಡ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಹರ್ಮನ್ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಅಮಂಜೋತ್ ಕೌರ್, ವೈಷ್ಣವಿ ಶರ್ಮಾ, ಶ್ರೀ ಚರಣಿ, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ.
ಶ್ರೀಲಂಕಾ ತಂಡ: ಹಾಸಿನಿ ಪೆರೇರಾ, ಚಾಮರಿ ಅಟಾಪಟು (ನಾಯಕಿ), ಹರ್ಷಿತಾ ಸಮರವಿಕ್ರಮ, ಇಮೇಶಾ ದುಲಾನಿ, ನೀಲಾಕ್ಷಿಕಾ ಸಿಲ್ವಾ, ಕವಿಶಾ ದಿಲ್ಹಾರಿ, ಕೌಶಿನಿ ನುತ್ಯಂಗನಾ (ವಿಕೆಟ್ ಕೀಪರ್), ಮಲ್ಶಾ ಶೆಹಾನಿ, ನಿಮಾಶಾ ಮೀಪಗೆ, ಕಾವ್ಯಾ ಕವಿಂದಿ, ರಶ್ಮಿಕಾ ಸೆವ್ವಂಡಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:49 pm, Sun, 28 December 25