AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND-W vs SL-W: ಶಫಾಲಿ ಸಿಡಿಲಬ್ಬರದ ಬ್ಯಾಟಿಂಗ್‌; ಟೀಂ ಇಂಡಿಯಾಗೆ ಸತತ 2ನೇ ಗೆಲುವು

India Women vs Sri Lanka Women 2nd T20: ವಿಶಾಖಪಟ್ಟಣಂನಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ 2ನೇ ಟಿ20 ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿ, ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಶಫಾಲಿ ವರ್ಮಾ ಅವರ ಸ್ಫೋಟಕ 69* ರನ್ ಹಾಗೂ ಬೌಲರ್‌ಗಳ ಉತ್ತಮ ಪ್ರದರ್ಶನದಿಂದ ಭಾರತ ಸುಲಭವಾಗಿ ಗುರಿ ತಲುಪಿತು.

IND-W vs SL-W: ಶಫಾಲಿ ಸಿಡಿಲಬ್ಬರದ ಬ್ಯಾಟಿಂಗ್‌; ಟೀಂ ಇಂಡಿಯಾಗೆ ಸತತ 2ನೇ ಗೆಲುವು
Ind W Vs Sl W
ಪೃಥ್ವಿಶಂಕರ
|

Updated on:Dec 23, 2025 | 10:00 PM

Share

ಭಾರತ ಮತ್ತು ಶ್ರೀಲಂಕಾ (India vs Sri Lanka) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ಆತಿಥೇಯ ಭಾರತ ತಂಡ ಈ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದು ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 129 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ, ಯುವ ಸ್ಫೋಟಕ ಬ್ಯಾಟರ್ ಶಫಾಲಿ ವರ್ಮಾ (Shafali Verma) ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಇನ್ನು 49 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.

ಲಂಕಾಗೆ ಸ್ಫೋಟಕ ಆರಂಭ

ಈ ಪಂದ್ಯದಲ್ಲೂ ಟಾಸ್ ಗೆದ್ದ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ನಾಯಕಿಯ ನಿರ್ಧಾರವನ್ನು ಸಮರ್ಥಿಸಿಕೊಂಡ ಬೌಲರ್‌ಗಳು ಶ್ರೀಲಂಕಾ ತಂಡ ಬೃಹತ್ ಮೊತ್ತ ಕಲೆಹಾಕದಂತೆ ತಡೆದರು. ಆದಾಗ್ಯೂ ಲಂಕಾ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟ ನಾಯಕಿ ಚಾಮರಿ ಅಟಪಟ್ಟು 31 ರನ್‌ಗಳ ಕೊಡುಗೆ ನೀಡಿದರು. ಚಾಮರಿ ಅಟಪಟ್ಟು ಇರುವವರೆಗೂ ಲಂಕಾ ತಂಡ ಸ್ಪರ್ಧಾತ್ಮಕ ಮೊತ್ತ ಕಲೆಹಾಕುವ ಸುಳಿವು ನೀಡಿತ್ತು. ಆದರೆ ಅವರು ಔಟಾದ ಬಳಿಕ ಎಂದಿನಂತೆ ತಂಡದ ಇನ್ನಿಂಗ್ಸ್ ಕುಸಿಯಿತು. ನಾಯಕಿ ಹೊರತುಪಡಿಸಿ, ಹರ್ಷಿತಾ ಸಮರವಿಕ್ರಮ 33 ರನ್‌ಗಳ ಕೊಡುಗೆ ನೀಡಿದರು. ಇವರನ್ನು ಹೊರತುಪಡಿಸಿ, ಬೇರೆ ಯಾವುದೇ ಬ್ಯಾಟ್ಸ್‌ಮನ್ 25 ರನ್‌ಗಳನ್ನು ತಲುಪಲು ಸಾಧ್ಯವಾಗಲಿಲ್ಲ.

ಭಾರತದ ಪರ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡ ಶ್ರೀ ಚರಣಿ ನಾಲ್ಕು ಓವರ್‌ಗಳಲ್ಲಿ ಕೇವಲ 23 ರನ್‌ಗಳನ್ನು ಬಿಟ್ಟುಕೊಟ್ಟು ಎರಡು ವಿಕೆಟ್‌ಗಳನ್ನು ಪಡೆದರು . ವೈಷ್ಣವಿ ಶರ್ಮಾ ಕೂಡ 32 ರನ್‌ಗಳಿಗೆ ಎರಡು ವಿಕೆಟ್‌ಗಳನ್ನು ಪಡೆದರು. ಉಳಿದಂತೆ ಕ್ರಾಂತಿ ಗೌರ್ ಮತ್ತು ಸ್ನೇಹ್ ರಾಣಾ ಕೂಡ ತಲಾ ಒಂದು ವಿಕೆಟ್ ಪಡೆದರು .

IND-W vs SL-W: ಟಾಸ್ ಗೆದ್ದ ಟೀಂ ಇಂಡಿಯಾ; ತಂಡದಲ್ಲಿ 1 ಬದಲಾವಣೆ

ಶಫಾಲಿ ಸಿಡಿಲಬ್ಬರದ ಅರ್ಧಶತಕ

129 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಶೆಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನ ಮೊದಲ ವಿಕೆಟ್‌ಗೆ 3.1 ಓವರ್‌ಗಳಲ್ಲಿ 29 ರನ್‌ಗಳ ಜೊತೆಯಾಟ ನಡೆಸಿದರು. ಆದಾಗ್ಯೂ ಸ್ಮೃತಿ ಮಂಧಾನ ಸತತ 2ನೇ ಪಂದ್ಯದಲ್ಲಿ ವಿಫಲರಾಗಿ 14 ರನ್​ಗಳಿಗೆ ಔಟಾದರು. ಆದರೆ ಶೆಫಾಲಿ ವರ್ಮಾ ಒಂದು ತುದಿಯಿಂದ ತಮ್ಮ ಸ್ಫೋಟಕ ಬ್ಯಾಟಿಂಗ್ ಅನ್ನು ಮುಂದುವರಿಸಿ ಕೇವಲ 34 ಎಸೆತಗಳಲ್ಲಿ ಅಜೇಯ 69 ರನ್ ಬಾರಿಸಿದರು . ಅವರ ಇನ್ನಿಂಗ್ಸ್​ನಲ್ಲಿ 11 ಬೌಂಡರಿಗಳು ಮತ್ತು ಒಂದು ಸಿಕ್ಸರ್ ಕೂಡ ಸೇರಿತ್ತು. ಶೆಫಾಲಿ ವರ್ಮಾ ಕೇವಲ 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, ಜೆಮಿಮಾ ರೊಡ್ರಿಗಸ್ ಕೂಡ 15 ಎಸೆತಗಳಲ್ಲಿ 26 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಪರಿಣಾಮವಾಗಿ, ಟೀಂ ಇಂಡಿಯಾ ಕೇವಲ 11.5 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ ಗುರಿ ಮುಟ್ಟಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 pm, Tue, 23 December 25

ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​