AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ -ಜಿಂಬಾಬ್ವೆ ಅಂತಿಮ ಟಿ20 ಪಂದ್ಯ; ಸ್ಮೃತಿ ಪಡೆಗೆ ಕ್ಲೀನ್ ಸ್ವೀಪ್ ಗುರಿ

ಭಾರತ ಮಹಿಳಾ ತಂಡವು ಜಿಂಬಾಬ್ವೆ ವಿರುದ್ಧದ T20 ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಅಂತಿಮ 3ನೇ ಪಂದ್ಯದಲ್ಲಿ ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಸ್ಮೃತಿ ಮಂಧಾನ ಪಡೆ ಹೊಂದಿದೆ. ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಮುನ್ನ ಆಟಗಾರ್ತಿಯರು ಉತ್ತಮ ಲಯ ಕಂಡುಕೊಳ್ಳಲು ಈ ಪಂದ್ಯ ಸಹಕಾರಿ. ಅಲ್ಲದೆ, ಸರಣಿ ಗೆದ್ದಿರುವುದರಿಂದ ಹೊಸ ಆಟಗಾರ್ತಿಯರಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಅವಕಾಶ ಸಿಗುವ ಸಾಧ್ಯತೆ ಇದೆ.

ಭಾರತ -ಜಿಂಬಾಬ್ವೆ ಅಂತಿಮ ಟಿ20 ಪಂದ್ಯ; ಸ್ಮೃತಿ ಪಡೆಗೆ ಕ್ಲೀನ್ ಸ್ವೀಪ್ ಗುರಿ
ಭಾರತ Vs ಜಿಂಬಾಬ್ವೆ
ಪೃಥ್ವಿಶಂಕರ
|

Updated on:Oct 19, 2026 | 10:44 PM

Share

ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಏಕಪಕ್ಷೀಯ ಗೆಲುವು ದಾಖಲಿಸಿರುವ ಭಾರತ ಮಹಿಳಾ ತಂಡ ಈಗಾಗಲೇ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿದೆ. ಹೀಗಾಗಿ ಅಂತಿಮ ಟಿ20 ಪಂದ್ಯವನ್ನು ಗೆದ್ದುಕೊಂಡು ಸರಣಿ ಕ್ಲೀನ್ ಸ್ವೀಪ್ ಮಾಡುವ ಇರಾದೆಯಲ್ಲಿ ಸ್ಮೃತಿ ಮಂಧಾನ ಪಡೆ ಇದೆ. ಇನ್ನು ಹೊಸ ನಾಯಕಿ ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ತಂಡ ಉತ್ತಮ ಆರಂಭ ಪಡೆದಿದೆ. ಈ ಸರಣಿಯಲ್ಲಿ ಜಿಂಬಾಬ್ವೆ ತಂಡ ಇದುವರೆಗೆ ಹೆಚ್ಚಿನ ಪ್ರತಿರೋಧ ತೋರಿಸಲು ವಿಫಲವಾಗಿದೆ. ಆದರೆ, ವರ್ಷದ ಕೊನೆಯಲ್ಲಿ ಭಾರತ ಮಹಿಳಾ ತಂಡವು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡು ಎಲ್ಲಾ ಮಾದರಿಗಳ ಪಂದ್ಯಗಳನ್ನು ಆಡಲಿದೆ. ಆ ಪ್ರವಾಸಕ್ಕೂ ಮುನ್ನ ಆಟಗಾರ್ತಿಯರು ಉತ್ತಮ ಲಯವನ್ನು ಕಂಡುಕೊಳ್ಳುವುದು ಮುಖ್ಯವಾಗಿದೆ.

ಮೇಲೆ ಹೇಳಿದಂತೆ ಭಾರತ ತಂಡ ಈಗಾಗಲೇ ಸರಣಿಯನ್ನು ಗೆದ್ದಿರುವುದರಿಂದ, ಅಂತಿಮ ಪಂದ್ಯದಲ್ಲಿ ಹೊಸ ಆಟಗಾರ್ತಿಯರಿಗೆ ಅವಕಾಶ ನೀಡುವ ಸಾಧ್ಯತೆಯಿದೆ. ಜಿ. ಕಮಲಿನಿ, ಜಿಂತಿಮಣಿ ಕಲಿತಾ, ಮಿನ್ನು ಮಣಿ ಮತ್ತು ಪ್ರೇಮಾ ರಾವತ್ ಅವರು ಈ ಸರಣಿಯಲ್ಲಿ ಇನ್ನೂ ಆಡಲು ಅವಕಾಶ ಪಡೆದಿಲ್ಲ. ಅಂತಿಮ ಪಂದ್ಯದಲ್ಲಿ ಇವರಲ್ಲಿ ಕೆಲವರಿಗೆ ಅವಕಾಶ ಸಿಗಬಹುದು. ಇವರಲ್ಲಿ ಬಲಗೈ ವೇಗದ ಬೌಲರ್ ಜಿಂತಿಮಣಿ ಕಲಿತಾ ಅವರು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿಯೂ ಆಡಿದ್ದಾರೆ. ಆದರೆ, ಇನ್ನೂ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿಲ್ಲ. ಅಂತಿಮ ಪಂದ್ಯವು ಅವರಿಗೆ ಆ ಅವಕಾಶ ನೀಡಬಹುದು. ಉಳಿದಂತೆ ಪಂದ್ಯದ ವಿವರ ಹೀಗಿದೆ.

ಭಾರತ-ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ 3ನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ-ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ 3ನೇ ಟಿ20 ಪಂದ್ಯ ಅಕ್ಟೋಬರ್ 20 ರ ಮಂಗಳವಾರದಂದು ನಡೆಯಲಿದೆ.

ಭಾರತ-ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ 3ನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ-ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ 3ನೇ ಟಿ20 ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ-ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ 3ನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ-ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ 3ನೇ ಟಿ20 ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಭಾರತ-ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ 3ನೇ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ-ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ 3ನೇ ಟಿ20 ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ಮಹಿಳಾ ತಂಡ: ಸ್ಮೃತಿ ಮಂಧಾನ (ನಾಯಕಿ), ಶಫಾಲಿ ವರ್ಮಾ, ಅನುಷ್ಕಾ ಶರ್ಮಾ, ಹರ್ಮನ್‌ಪ್ರೀತ್ ಕೌರ್, ನಿಕ್ಕಿ ಪ್ರಸಾದ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ಶ್ರೀ ಚರಣಿ, ನಂದಿನಿ ಶರ್ಮಾ, ಕ್ರಾಂತಿ ಗೌಡ್, ಗುಣಲನ್ ಕಮಲಿನಿ, ಪ್ರೇಮಾ ರಾವತ್, ಜಿಂತಿಮಣಿ ಕಲಿತಾ, ಮಿನ್ನು ಮಣಿ.

ಜಿಂಬಾಬ್ವೆ ಮಹಿಳಾ ತಂಡ: ಶಾರ್ನೆ ಮೇಯರ್ಸ್, ಚಿಡ್ಜಾ ಧುರುರು (ವಿಕೆಟ್ ಕೀಪರ್), ಚಿಪೊ ಮುಗೇರಿ-ತಿರಿಪಾನೊ, ಮಾಡೆಸ್ಟರ್ ಮುಪಚಿಕ್ವಾ (ವಿಕೆಟ್ ಕೀಪರ್), ಜೋಸೆಫೀನ್ ನ್ಕೊಮೊ (ನಾಯಕಿ), ನೊಮ್ವೆಲೊ ಸಿಬಾಂಡಾ, ಲೊರಿನ್ ಫಿರಿ, ನ್ಯಾಶಾ ಗ್ವಾಂಝುರಾ, ಫ್ರಾನ್ಸಿಸ್ಕಾ ಚಿಪಾರೆ, ಕೆಲಿಸ್ ನ್ಧ್ಲೋವು, ಮಿಚೆಲ್ ಮಾವುಂಗೈ, ಒಲಿಂಡರ್ ಚಾರೆ, ಕುಡ್ಜೈ ಚಿಗೋರಾ, ಟೆಂಡೈ ಮಕುಶಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:38 pm, Mon, 19 October 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ದುರ್ಗಾ ಪೂಜೆ ವೇಳೆ ಕಣ್ಣೀರಿಟ್ಟ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ
ದುರ್ಗಾ ಪೂಜೆ ವೇಳೆ ಕಣ್ಣೀರಿಟ್ಟ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ
ಬಿಗ್ ಬಾಸ್ ಎಲಿಮಿನೇಷನ್ ಬಳಿಕ ಒಳ್ಳೆಯ ಸಿನಿಮಾ, ಸೀರಿಯಲ್ ನಿರೀಕ್ಷೆ: ಕಾವ್ಯಾ
ಬಿಗ್ ಬಾಸ್ ಎಲಿಮಿನೇಷನ್ ಬಳಿಕ ಒಳ್ಳೆಯ ಸಿನಿಮಾ, ಸೀರಿಯಲ್ ನಿರೀಕ್ಷೆ: ಕಾವ್ಯಾ
ಕಿತ್ತೂರು ಉತ್ಸವ ಸಂದರ್ಭದಲ್ಲೇ ರಾಣಿ ಚನ್ನಮ್ಮನ ಮೂರ್ತಿಗೆ ಹಾನಿ
ಕಿತ್ತೂರು ಉತ್ಸವ ಸಂದರ್ಭದಲ್ಲೇ ರಾಣಿ ಚನ್ನಮ್ಮನ ಮೂರ್ತಿಗೆ ಹಾನಿ
ಮಂಜನ ಆ ವರ್ತನೆಯಿಂದ ನನಗೆ ತುಂಬ ನೋವಾಯಿತು: ಬಿಗ್ ಬಾಸ್ ಕಾವ್ಯಾ ಗೌಡ
ಮಂಜನ ಆ ವರ್ತನೆಯಿಂದ ನನಗೆ ತುಂಬ ನೋವಾಯಿತು: ಬಿಗ್ ಬಾಸ್ ಕಾವ್ಯಾ ಗೌಡ
ಸಚಿವ ಶಿವಲಿಂಗೇಗೌಡರ ವಿರುದ್ಧ ಶಾಸಕ ಸ್ವರೂಪ್ ವಾಗ್ದಾಳಿ
ಸಚಿವ ಶಿವಲಿಂಗೇಗೌಡರ ವಿರುದ್ಧ ಶಾಸಕ ಸ್ವರೂಪ್ ವಾಗ್ದಾಳಿ
ನನ್ನ ಡಾಕ್ಟರ್​ ಸಿದ್ದರಾಮಯ್ಯ ಅಂತ ಕರೀಬೇಡಿ: ಮಾಜಿ ಸಿಎಂ ನಗೆ ಚಟಾಕಿ
ನನ್ನ ಡಾಕ್ಟರ್​ ಸಿದ್ದರಾಮಯ್ಯ ಅಂತ ಕರೀಬೇಡಿ: ಮಾಜಿ ಸಿಎಂ ನಗೆ ಚಟಾಕಿ
ಬೆಸ್ಟ್ ದಸರಾ ರೀಲ್ಸ್​​​​ಗೆ​​​ ಬಹುಮಾನ ಘೋಷಿಸಿದ ಸಿಎಂ: ಮಿಸ್ ಮಾಡ್ಕೋಬೇಡಿ
ಬೆಸ್ಟ್ ದಸರಾ ರೀಲ್ಸ್​​​​ಗೆ​​​ ಬಹುಮಾನ ಘೋಷಿಸಿದ ಸಿಎಂ: ಮಿಸ್ ಮಾಡ್ಕೋಬೇಡಿ
‘ಬಿಗ್ ಬಾಸ್ ಮನೆಯಲ್ಲಿ ನಮ್ಮ ಲೆಕ್ಕಾಚಾರ ನಡೆಯಲ್ಲ’: ಕಾವ್ಯಾ ಗೌಡ ಎಲಿಮಿನೇಟ್
‘ಬಿಗ್ ಬಾಸ್ ಮನೆಯಲ್ಲಿ ನಮ್ಮ ಲೆಕ್ಕಾಚಾರ ನಡೆಯಲ್ಲ’: ಕಾವ್ಯಾ ಗೌಡ ಎಲಿಮಿನೇಟ್
ಮುಗ್ಧ ಕಂದಮ್ಮಗಳ ದೊಡ್ಡ ಮನಸ್ಸಿಗೆ ಪ್ರಶಂಸೆ
ಮುಗ್ಧ ಕಂದಮ್ಮಗಳ ದೊಡ್ಡ ಮನಸ್ಸಿಗೆ ಪ್ರಶಂಸೆ
ಸ್ಟಿಂಗ್ ಆಪರೇಷನ್​ ಕೇಸ್ ತನಿಖೆಗೆ ಹಿಂಜರಿಯುವ ಪೊಲೀಸರನ್ನು ವಜಾ ಮಾಡ್ಬೇಕು
ಸ್ಟಿಂಗ್ ಆಪರೇಷನ್​ ಕೇಸ್ ತನಿಖೆಗೆ ಹಿಂಜರಿಯುವ ಪೊಲೀಸರನ್ನು ವಜಾ ಮಾಡ್ಬೇಕು