ಭಾರತ- ವಿಂಡೀಸ್ ಕೊನೆಯ ಟಿ20 ಪಂದ್ಯ ಮಳೆಯಿಂದ ರದ್ದು; ಸರಣಿ 2-2 ರ ಡ್ರಾದಲ್ಲಿ ಅಂತ್ಯ

ಭಾರತ vs ವೆಸ್ಟ್ ಇಂಡೀಸ್ ನಡುವಿನ 5ನೇ ಮತ್ತು ಅಂತಿಮ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಈ ಕಾರಣದಿಂದಾಗಿ ಸರಣಿ 2-2ಕ್ಕೆ ಡ್ರಾದಲ್ಲಿ ಅಂತ್ಯಗೊಂಡಿತು. ಮಳೆಯಿಂದಾಗಿ 9 ಓವರ್‌ಗಳಿಗೆ ಇಳಿಸಲಾದ ಪಂದ್ಯದಲ್ಲಿ ಇಶಾನ್ ಕಿಶನ್ ಕೇವಲ 10 ಎಸೆತಗಳಲ್ಲಿ 30 ರನ್ ಗಳಿಸಿ ಸ್ಫೋಟಕ ಆರಂಭ ನೀಡಿದರು. ಭಾರತ 7.4 ಓವರ್‌ಗಳಲ್ಲಿ 118/5 ಗಳಿಸಿತ್ತು. ಮಳೆ ಜೋರಾದ್ದರಿಂದ ಪಂದ್ಯವನ್ನು ರದ್ದುಗೊಳಿಸುವ ಅನಿವಾರ್ಯತೆ ಸೃಷ್ಟಿಯಾಯಿತು.

ಭಾರತ- ವಿಂಡೀಸ್ ಕೊನೆಯ ಟಿ20 ಪಂದ್ಯ ಮಳೆಯಿಂದ ರದ್ದು; ಸರಣಿ 2-2 ರ ಡ್ರಾದಲ್ಲಿ ಅಂತ್ಯ
ಭಾರತ Vs ವೆಸ್ಟ್ ಇಂಡೀಸ್

Updated on: Oct 17, 2026 | 10:51 PM

ಭಾರತ ಮತ್ತು ವೆಸ್ಟ್ ಇಂಡೀಸ್ ತಂಡದಗಳ ನಡುವಿನ 5ನೇ ಮತ್ತು ಅಂತಿಮ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಈ ಪಂದ್ಯವು ಸಂಜೆ 7 ಗಂಟೆಗೆ ಆರಂಭವಾಗಬೇಕಿತ್ತು, ಆದರೆ ಮಳೆಯಿಂದಾಗಿ ವಿಳಂಬವಾಯಿತು. ಅಂತಿಮವಾಗಿ ರಾತ್ರಿ 9 ಗಂಟೆಗೆ ಆರಂಭವಾದ ಈ ಪಂದ್ಯವನ್ನು ತಲಾ 9 ಓವರ್‌ಗಳಿಗೆ ಇಳಿಸಲಾಯಿತು. ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮಳೆ ಅಡ್ಡಿಪಡಿಸುವುದಕ್ಕೂ ಮುನ್ನ 7.4 ಓವರ್‌ಗಳಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು 118 ರನ್ ಕಲೆಹಾಕಿತ್ತು. ಅದಾದ ಬಳಿಕ ಮಳೆ ಜೋರಾದ ಕಾರಣ ಪಂದ್ಯವನ್ನು ರದ್ದುಗೊಳಿಸಲು ತೀರ್ಮಾನಿಸಲಾಯಿತು. ಹೀಗಾಗಿ ಸರಣಿ 2-2 ರಿಂದ ಡ್ರಾದಲ್ಲಿ ಅಂತ್ಯಗೊಂಡಿತು.

ಕಿಶನ್ ಸ್ಫೋಟಕ ಬ್ಯಾಟಿಂಗ್

ಆದಾಗ್ಯೂ ಈ ಪಂದ್ಯದಲ್ಲಿ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಈ ಪಂದ್ಯ ತಲಾ ಒಂಬತ್ತು ಓವರ್‌ಗಳದ್ದಾಗಿದ್ದರಿಂದ ಪ್ರತಿ ಚೆಂಡನ್ನು ಬೌಂಡರಿಗೆ ಹೊಡೆಯಬೇಕಾಗಿತ್ತು. ಈ ಪ್ರಯತ್ನದಲ್ಲಿ, ಅಭಿಷೇಕ್ ಶರ್ಮಾ ಮೊದಲ ಓವರ್‌ನಲ್ಲಿ ಸಿಕ್ಸರ್ ಬಾರಿಸಿ ಔಟಾದರು. ಆ ನಂತರ ಬಂದ ಶಾನ್ ಕಿಶನ್ ಎರಡನೇ ಓವರ್‌ನಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ವೆಸ್ಟ್ ಇಂಡೀಸ್ ತಂಡವನ್ನು ಬೆರಗುಗೊಳಿಸಿದರು. ವೇಗದ ಬೌಲರ್ ರೊಮಾರಿಯೊ ಶೆಫರ್ಡ್ ಎಸೆದ ಓವರ್​ನಲ್ಲಿ ಇಶಾನ್ ಎರಡು ಸಿಕ್ಸರ್‌ಗಳು ಮತ್ತು ಎರಡು ಬೌಂಡರಿಗಳನ್ನು ಬಾರಿಸಿದರು. ನಂತರ ಮೂರನೇ ಓವರ್ ಅನ್ನು ಬೌಂಡರಿಯೊಂದಿಗೆ ಪ್ರಾರಂಭಿಸಿದ ಕಿಶನ್ ಅದೇ ಓವರ್​ನಲ್ಲಿ ವಿಕೆಟ್ ಕಳೆದುಕೊಂಡರು. ಹೀಗಾಗಿ ಅವರು ಕೇವಲ 10 ಎಸೆತಗಳಲ್ಲಿ ಎರಡು ಸಿಕ್ಸರ್ ಮತ್ತು ಮೂರು ಬೌಂಡರಿಗಳನ್ನು ಒಳಗೊಂಡಂತೆ 30 ರನ್ ಗಳಿಸಿದರು. ಈ ಸ್ಫೋಟಕ ಬ್ಯಾಟಿಂಗ್ ಪರಿಣಾಮವಾಗಿ ಟೀಂ ಇಂಡಿಯಾ ಕೇವಲ 2.5 ಓವರ್‌ಗಳಲ್ಲಿ ಅಥವಾ ಕೇವಲ 17 ಎಸೆತಗಳಲ್ಲಿ 50 ರನ್ ತಲುಪಿತು.

IND vs WI 5th T20 Cricket Highlights: ಮಳೆಯಿಂದಾಗಿ 5ನೇ ಟಿ20 ಪಂದ್ಯ ರದ್ದು

ಪಂದ್ಯಕ್ಕೆ ಮಳೆ ಅಡ್ಡಿ

ಕಿಶನ್ ವಿಕೆಟ್ ಬಳಿಕ ಬಂದ ತಿಲಕ್ ವರ್ಮಾಗೆ ದೊಡ್ಡ ಮೊತ್ತ ಕಲೆಹಾಕಲು ಸಾಧ್ಯವಾಗಲಿಲ್ಲ. ಇತ್ತ ನಾಯಕ ಶ್ರೇಯಸ್ ಅಯ್ಯರ್ 14 ಎಸೆತಗಳಲ್ಲಿ 22 ರನ್ ಬಾರಿಸಲಷ್ಟೇ ಶಕ್ತರಾದರು. ಆದರೆ ಶ್ರೇಯಸ್ ವಿಕೆಟ್ ಬಳಿಕ ಬಂದ ನಮನ್ ಧೀರ್ 6 ಎಸೆತಗಳಲ್ಲಿ 24 ರನ್ ಕಲೆಹಾಕುವ ಮೂಲಕ ತಂಡವನ್ನು 100 ರನ್​ಗಳ ಗಡಿ ದಾಟಿಸಿದರು. ಇತ್ತ ಉಪನಾಯಕ ತಿಲಕ್ ವರ್ಮಾ 6 ಎಸೆತಗಳಲ್ಲಿ 7 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ತಿಲಕ್ ವಿಕೆಟ್ ಪತನದೊಂದಿಗೆ ಮಳೆ ಜೋರಾಗಿ ಸುರಿಯಲಾರಂಭಿಸಿದ ಕಾರಣದಿಂದಾಗಿ ಆಟವನ್ನು ಸ್ಥಗಿತಗೊಳಿಸಲಾಯಿತು. ಅದಾದ ಬಳಿಕ ಪಂದ್ಯವನ್ನು ರದ್ದುಗೊಳಿಸುವ ತೀರ್ಮಾನಕ್ಕೆ ಅಂಪೈರ್​ಗಳು ಬಂದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us