IND vs ENG 1st Test: 3 ವಿಕೆಟ್ ಪತನ, ರಾಹುಲ್ ಅರ್ಧಶತಕ: ಭೋಜನ ವಿರಾಮದ ವೇಳೆಗೆ 222 ರನ್ ಗಳಿಸಿದ ಭಾರತ
India vs England 1st Test Day 2: ಮೊದಲ ದಿನದಾಟದ ಅಂತ್ಯಕ್ಕೆ ಭಾರತ 1 ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿತ್ತು. 127 ರನ್ಗಳ ಹಿನ್ನಡೆಯಲ್ಲಿತ್ತು. ಇಂದು ಎರಡನೇ ದಿನ 76 ರನ್ ಗಳಿಸಿದ್ದ ಯಶಸ್ವಿ ಜೈಸ್ವಾಲ್ ಮತ್ತು 14 ರನ್ ಗಳಿಸಿದ್ದ ಶುಭ್ಮನ್ ಗಿಲ್ ಬ್ಯಾಟಿಂಗ್ಗೆ ಬಂದರು. ಆದರೆ, ಇವರಿಬ್ಬರು ಹೆಚ್ಚುಹೊತ್ತು ಕ್ರೀಸ್ನಲ್ಲಿ ನಿಲ್ಲಲಿಲ್ಲ.
ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ (India vs England) ಉತ್ತಮ ಮೊತ್ತದತ್ತ ದಾಪುಗಾಲಿಡುತ್ತಿದೆ. ಇಂದಿನ ಮೊದಲ ಸೆಷನ್ನಲ್ಲಿ 2 ವಿಕೆಟ್ ಕಳೆದುಕೊಂಡಿದ್ದರೂ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಭರ್ಜರಿ ಆಗಿ ರನ್ ಕಲೆಹಾಕುತ್ತಿದ್ದಾರೆ. ಇದೀಗ ಭೋಜನ ವಿರಾಮದ ವೇಳೆಗೆ ಟೀಮ್ ಇಂಡಿಯಾ 50 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 222 ರನ್ ಕಲೆಹಾಕಿದೆ. 24 ರನ್ಗಳ ಹಿನ್ನಡೆಯಲ್ಲಿದೆ.
ಮೊದಲ ದಿನದಾಟದ ಅಂತ್ಯಕ್ಕೆ ಭಾರತ 1 ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿತ್ತು. 127 ರನ್ಗಳ ಹಿನ್ನಡೆಯಲ್ಲಿತ್ತು. ಇಂದು ಎರಡನೇ ದಿನ 76 ರನ್ ಗಳಿಸಿದ್ದ ಯಶಸ್ವಿ ಜೈಸ್ವಾಲ್ ಮತ್ತು 14 ರನ್ ಗಳಿಸಿದ್ದ ಶುಭ್ಮನ್ ಗಿಲ್ ಬ್ಯಾಟಿಂಗ್ಗೆ ಬಂದರು. ಆದರೆ, ಇವರಿಬ್ಬರು ಹೆಚ್ಚುಹೊತ್ತು ಕ್ರೀಸ್ನಲ್ಲಿ ನಿಲ್ಲಲಿಲ್ಲ. ಜೈಸ್ವಾಲ್ 74 ಎಸೆತಗಳಲ್ಲಿ 80 ರನ್ ಗಳಿಸಿ ಜೋರೂಟ್ಗೆ ಬೌಲಿಂಗ್ನಲ್ಲಿ ಔಟಾದರೆ, ಗಿಲ್ 66 ಎಸೆತಗಳಲ್ಲಿ 23 ರನ್ಗೆ ಬ್ಯಾಟ್ ಕೆಳಗಿಟ್ಟರು.
ICC Rankings: ಟಿ20 ರ್ಯಾಂಕಿಂಗ್ನಲ್ಲಿ ಬರೋಬ್ಬರಿ 39 ಸ್ಥಾನಗಳ ಮುಂಬಡ್ತಿ ಪಡೆದ ರಿಂಕು ಸಿಂಗ್..!
ನಂತರ ಜೊತೆಯಾದ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಎಚ್ಚರಿಕೆಯಿಂದ ಬ್ಯಾಟ್ ಬೀಸುತ್ತಿದ್ದಾರೆ. ಅರ್ಧಶತಕದ ಜೊತೆಯಾಟ ಆಡಿ ಈ ಜೋಡಿ ಮುನ್ನುಗ್ಗುತ್ತಿದೆ. ಊಟದ ವಿರಾಮ ವೇಳೆಗೆ ರಾಹುಲ್ 78 ಎಸೆತಗಳಲ್ಲಿ 6 ಫೋರ್ನೊಂದಿಗೆ 55 ರನ್ ಗಳಿಸಿದರೆ, ಅಯ್ಯರ್ 57 ಎಸೆತಗಳಲ್ಲಿ 34 ರನ್ ಗಳಿಸಿದ್ದಾರೆ. ಎರಡನೇ ದಿನದಾಟದ ಮೊದಲ ಸೆಷನ್ ಭಾರತದ ಪಾಲಾಗಿದೆ.
ಮೊದಲ ದಿನದಾಟ ಹೇಗಿತ್ತು?:
ಗುರುವಾರ ಟಾಸ್ ಗೆದ್ದು ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಝಾಕ್ ಕ್ರಾಲಿ (20 ರನ್) ಹಾಗೂ ಬೆನ್ ಡಕೆಟ್ (35 ರನ್) ಮೊದಲ ವಿಕೆಟ್ಗೆ 55 ರನ್ಗಳ ಜೊತೆಯಾಟ ನೀಡಿದರು. ನಂತರ ಬಂದ ಒಲಿ ಪೋಪ್ ಕೇವಲ 1 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದರೆ, ತಂಡದ ಮಾಜಿ ನಾಯಕ ಜೋ ರೂಟ್ 29 ರನ್ಗಳಿಗೆ ಪೆವಿಲಿಯನ್ ಸೇರಿಕೊಂಡರು. ಜಾನಿ ಬೈರ್ಸ್ಟೋ ಕೂಡ 37 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದರು. ಆದರೆ ನಾಯಕ ಬೆನ್ ಸ್ಟೋಕ್ಸ್ 6 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 70 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.
ಅಂತಿಮವಾಗಿ ಇಂಗ್ಲೆಂಡ್ 246 ರನ್ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ರವೀಂದ್ರ ಜಡೇಜಾ ಹಾಗೂ ಆರ್ ಅಶ್ವಿನ್ ತಲಾ 3 ವಿಕೆಟ್ ಪಡೆದರೆ, ಮತ್ತೊಬ್ಬ ಆಫ್ ಸ್ಪಿನ್ನರ್ ಅಕ್ಷರ್ ಪಟೇಲ್ ಹಾಗೂ ವೇಗಿ ಜಸ್ಪ್ರೀತ್ ಬುಮ್ರಾ ತಲಾ ವಿಕೆಟ್ ಪಡೆದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ