ಈ ಕ್ರಿಕೆಟ್ ಕ್ರೀಡಾಂಗಣದಲ್ಲಿ ಎರಡು ಅಭ್ಯಾಸ ಮೈದಾನಗಳು, ಅಕಾಡೆಮಿ, ಕ್ಲಬ್ ಹೌಸ್, ಹೋಟೆಲ್, ಕ್ರಿಕೆಟ್ ಅಕಾಡೆಮಿ, ಹಾಸ್ಟೆಲ್, ಜಿಮ್, ಪಾರ್ಕಿಂಗ್ ಸೌಲಭ್ಯ ಮತ್ತು ಉಳಿದ ಅಂತರರಾಷ್ಟ್ರೀಯ ಕ್ರೀಡಾಂಗಣದಂತಹ ಅಗತ್ಯ ಸೌಲಭ್ಯಗಳನ್ನು ಹೊಂದಿರುತ್ತದೆ. ಅಹಮದಾಬಾದ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಸರಣಿಯ ಮೊದಲು ಆರ್‌ಸಿಎ ಅಧ್ಯಕ್ಷ ವೈಭವ್ ಗೆಹ್ಲೋಟ್ ಅವರು ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ತೆರಳಿ, ಅಲ್ಲಿ ಅವರು ಬಿಸಿಸಿಐ ಕಾರ್ಯದರ್ಶಿ ಜೇ ಷಾ ಅವರನ್ನು ಭೇಟಿಯಾಗಿದ್ದರು. ನಂತರ ಅವರು ನರೇಂದ್ರ ಮೋದಿ ಕ್ರೀಡಾಂಗಣದ ಬಗ್ಗೆಯೂ ಮಾಹಿತಿ ಪಡೆದಿದ್ದರು.