AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾವನ್ನು 162 ರನ್‌ಗಳಿಂದ ಮಣಿಸಿದ ದೇವದತ್ ಪಡಿಕ್ಕಲ್ ಪಡೆ

ಕನ್ನಡಿಗ ದೇವದತ್ ಪಡಿಕ್ಕಲ್ ನಾಯಕತ್ವದ ಭಾರತ ಎ ತಂಡವು ಆಸ್ಟ್ರೇಲಿಯಾ ಎ ವಿರುದ್ಧ 162 ರನ್‌ಗಳ ಭರ್ಜರಿ ಜಯ ಸಾಧಿಸಿ, ಅನಧಿಕೃತ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಗಳಿಸಿದೆ. ಕುಮಾರ್ ಕುಶಾಗ್ರ ಬ್ಯಾಟಿಂಗ್ ಮತ್ತು ಅನ್ಶುಲ್ ಕಾಂಬೋಜ್, ತುಷಾರ್ ದೇಶಪಾಂಡೆ, ಶಮ್ಸ್ ಮುಲಾನಿ, ತನುಷ್ ಕೋಟ್ಯಾನ್ ಅವರ ಅದ್ಭುತ ಬೌಲಿಂಗ್ ತಂಡದ ಗೆಲುವಿಗೆ ಕಾರಣವಾಯಿತು.

ಆಸ್ಟ್ರೇಲಿಯಾವನ್ನು 162 ರನ್‌ಗಳಿಂದ ಮಣಿಸಿದ ದೇವದತ್ ಪಡಿಕ್ಕಲ್ ಪಡೆ
ಭಾರತ ಎ Vs ಆಸ್ಟ್ರೇಲಿಯಾ ಎ
ಪೃಥ್ವಿಶಂಕರ
|

Updated on: Sep 25, 2026 | 8:41 PM

Share

ಕನ್ನಡಿಗ ದೇವದತ್ ಪಡಿಕ್ಕಲ್ ನೇತೃತ್ವದ ಭಾರತ ಎ ತಂಡವು ಎರಡು ಪಂದ್ಯಗಳ ಅನಧಿಕೃತ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಎ ತಂಡವನ್ನು 162 ರನ್‌ಗಳಿಂದ ಸೋಲಿಸುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಗೆಲುವಿಗೆ 362 ರನ್​ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್​ನಲ್ಲಿ 200 ರನ್​ಗಳಿಗೆ ಆಲೌಟ್ ಆಯಿತು. ಭಾರತ ಪರ ಕುಮಾರ್ ಕುಶಾಗ್ರ ಅದ್ಭುತ ಬ್ಯಾಟಿಂಗ್ ಮಾಡಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಅನ್ಶುಲ್ ಕಾಂಬೋಜ್, ತುಷಾರ್ ದೇಶಪಾಂಡೆ, ಶಮ್ಸ್ ಮುಲಾನಿ ಮತ್ತು ತನುಷ್ ಕೋಟ್ಯಾನ್ ಅದ್ಭುತ ಬೌಲಿಂಗ್ ಮಾಡಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಎ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 334 ರನ್‌ ಕಲೆಹಾಕಿತು. ಇತ್ತ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 171 ರನ್‌ಗಳಿಗೆ ಆಲೌಟ್ ಆಯಿತು. ಹೀಗಾಗಿ 163 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಭಾರತ 199 ರನ್‌ಗಳಿಗೆ ಆಲೌಟ್ ಆಯಿತು. ಗೆಲ್ಲಲು 363 ರನ್‌ಗಳ ಗುರಿ ಪಡೆದ ಆಸ್ಟ್ರೇಲಿಯಾ ಇದಕ್ಕೆ ಪ್ರತಿಯಾಗಿ ಎರಡನೇ ಇನ್ನಿಂಗ್ಸ್‌ನಲ್ಲಿ 200 ರನ್‌ಗಳಿಗೆ ಆಲೌಟ್ ಆಯಿತು, ಪರಿಣಾಮವಾಗಿ ಸೋಲು ಅನುಭವಿಸಿತು.

ಭಾರತದ ಅತ್ಯುತ್ತಮ ಬೌಲಿಂಗ್

ಭಾರತದ ಪರ ಅನ್ಶುಲ್ ಕಾಂಬೋಜ್ ಮತ್ತು ತನುಷ್ ಕೋಟ್ಯಾನ್ ಎರಡನೇ ಇನ್ನಿಂಗ್ಸ್‌ನಲ್ಲಿ ತಲಾ ಎರಡು ವಿಕೆಟ್‌ಗಳನ್ನು ಪಡೆದರೆ, ತುಷಾರ್ ದೇಶಪಾಂಡೆ ಮತ್ತು ಶಮ್ಸ್ ಮುಲಾನಿ ತಲಾ ಮೂರು ವಿಕೆಟ್‌ಗಳನ್ನು ಪಡೆದರು. ಶಮ್ಸ್ ಮುಲಾನಿ ಮೊದಲ ಇನ್ನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದ್ದರು, ಈ ಪಂದ್ಯದಲ್ಲಿ ಅವರು ಒಟ್ಟು ಏಳು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು. ತುಷಾರ್ ದೇಶಪಾಂಡೆ ಮತ್ತು ತನುಷ್ ಕೋಟ್ಯಾನ್ ಮೊದಲ ಇನ್ನಿಂಗ್ಸ್‌ನಲ್ಲಿ ತಲಾ ಎರಡು ವಿಕೆಟ್‌ಗಳನ್ನು ಪಡೆದರೆ, ಅನ್ಶುಲ್ ಕಾಂಬೋಜ್ ಮತ್ತು ಪ್ರಫುಲ್ ಹಿಂಗೆ ತಲಾ ಒಂದು ವಿಕೆಟ್ ಪಡೆದಿದ್ದರು.

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ; ದೇವದತ್ ಪಡಿಕ್ಕಲ್​ಗೆ ನಾಯಕತ್ವ

ಬ್ಯಾಟಿಂಗ್​ನಲ್ಲೂ ಮಿಂಚಿದ ಟೀಂ ಇಂಡಿಯಾ

ಈ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಕೂಡ ಅತ್ಯುತ್ತಮವಾಗಿತ್ತು, ಕುಮಾರ್ ಕುಶಾಗ್ರ ಮೊದಲ ಇನ್ನಿಂಗ್ಸ್‌ನಲ್ಲಿ 113 ರನ್ ಗಳಿಸಿದರೆ, ಸಾಯಿ ಸುದರ್ಶನ್ 57 ರನ್ ಮತ್ತು ತನುಷ್ ಕೋಟ್ಯಾನ್ ಕೂಡ 69 ರನ್​ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಮಿಂಚಿದ ನಾಯಕ ದೇವದತ್ ಪಡಿಕ್ಕಲ್ 59 ರನ್ ಗಳಿಸಿದರೆ, ಕುಮಾರ್ ಕುಶಾಗ್ರ 46 ರನ್ ಗಳಿಸಿ ಅಜೇಯರಾಗಿ ಉಳಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಪರ ಜೇಸನ್ ಸಂಘ 46 ರನ್ ಗಳಿಸಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಫರ್ಗಸ್ ಓ’ನೀಲ್ 47 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಇತ್ತ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಪರ ಕೋರಿ ರೊಚ್ಚಿಯೋಲಿ ನಾಲ್ಕು ವಿಕೆಟ್‌ಗಳನ್ನು ಪಡೆದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಟಾಡ್ ಮರ್ಫಿ ಕೂಡ ನಾಲ್ಕು ವಿಕೆಟ್‌ ಕಬಳಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More