
ಲಿಂಕನ್ನ ಬರ್ಟ್ ಸಟ್ಕ್ಲಿಫ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ‘ಎ’ ವಿರುದ್ಧದ ಪಂದ್ಯದಲ್ಲಿ ಇಂಡಿಯಾ ಎ ತಂಡ ಭರ್ಜರಿ ಪ್ರದರ್ಶನ ನೀಡಿದೆ. ಮೊದಲ ಇನಿಂಗ್ಸ್ನಲ್ಲಿ ಕೇವಲ 113 ರನ್ಗಳಿಗೆ ಆಲೌಟ್ ಆಗಿದ್ದ ಭಾರತ ಎ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ ಬರೋಬ್ಬರಿ 516 ರನ್ ಕಲೆಹಾಕಿದೆ.
ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ಎ ತಂಡದ ನಾಯಕ ರೈಸ್ ಮಾರಿಯು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡ ಮೊದಲ ಇನಿಂಗ್ಸ್ನಲ್ಲಿ ಕೇವಲ 113 ರನ್ಗಳಿಗೆ ಆಲೌಟ್ ಆಗಿ ತೀವ್ರ ಹಿನ್ನಡೆ ಅನುಭವಿಸಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ನ್ಯೂಝಿಲೆಂಡ್ ಎ ತಂಡ 317 ರನ್ ಗಳಿಸಿ, 204 ರನ್ಗಳ ಬೃಹತ್ ಮುನ್ನಡೆ ಸಾಧಿಸಿತು.
204 ರನ್ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಭಾರತ ಎ ತಂಡದ ಆರಂಭ ಅತ್ಯಂತ ಕಳಪೆಯಾಗಿತ್ತು. ತಂಡದ ಮೊತ್ತ ಕೇವಲ 10 ರನ್ ಆಗುವಷ್ಟರಲ್ಲಿ ಇಬ್ಬರು ಸ್ಟಾರ್ ಓಪನರ್ಗಳಾದ ಯಶಸ್ವಿ ಜೈಸ್ವಾಲ್ ಮತ್ತು ಕೆ.ಎಲ್. ರಾಹುಲ್ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದ್ದರು.
ಮೊದಲ ಇನಿಂಗ್ಸ್ನಲ್ಲಿನ 204 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ನಲ್ಲಿ 313 ರನ್ಗಳ ಗುರಿ ಪಡೆದಿರುವ ನ್ಯೂಝಿಲೆಂಡ್ ತಂಡವು ಕೇವಲ 13 ರನ್ಗಳಿಗೆ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿದೆ. ಈ ಆಘಾತದ ನಡುವೆ ಉತ್ತಮ ಬ್ಯಾಟಿಂಗ್ ಮುಂದುವರೆಸಿರುವ ಕರ್ಟಿಸ್ ಹೀಫಿ (38) ಹಾಗೂ ಡೀನ್ ಫಾಕ್ಸ್ಕ್ರಾಫ್ಟ್ (42) ತಂಡದ ಮೊತ್ತವನ್ನು 100ರ ಗಡಿದಾಟಿಸಿದ್ದಾರೆ.
27 ಓವರ್ಗಳ ಮುಕ್ತಾಯದ ವೇಳೆಗೆ ನ್ಯೂಝಿಲೆಂಡ್ ತಂಡವು 4 ವಿಕೆಟ್ ಕಳೆದುಕೊಂಡು 101 ರನ್ ಕಲೆಹಾಕಿದ್ದು, ಗೆಲ್ಲಲು ಇನ್ನೂ 212 ರನ್ ಕಲೆಹಾಕಬೇಕಿದೆ.
ಭಾರತ ಎ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ಕೆಎಲ್ ರಾಹುಲ್ , ದೇವದತ್ ಪಡಿಕ್ಕಲ್ , ಸಾಯಿ ಸುದರ್ಶನ್ , ಧ್ರುವ್ ಜುರೆಲ್ (ನಾಯಕ) , ಯಶ್ ರಾಥೋಡ್ , ವಾಷಿಂಗ್ಟನ್ ಸುಂದರ್ , ಅನ್ಶುಲ್ ಕಾಂಬೋಜ್ , ಆಖಿಬ್ ನಬಿ , ಆಕಾಶ್ ದೀಪ್ , ಮುಖೇಶ್ ಚೌಧರಿ.
ಇದನ್ನೂ ಓದಿ: 10ನೇ ವಿಕೆಟ್ಗೆ ಹೊಸ ವಿಶ್ವ ದಾಖಲೆ: ಪಾಕ್ ಪಡೆಗೆ ರಣರೋಚಕ ಜಯ!
ನ್ಯೂಝಿಲೆಂಡ್ ಎ ಪ್ಲೇಯಿಂಗ್ 11: ರೈಸ್ ಮಾರಿಯು (ನಾಯಕ) , ಕರ್ಟಿಸ್ ಹೀಫಿ , ಟಿಮ್ ರಾಬಿನ್ಸನ್ , ಮ್ಯಾಥ್ಯೂ ಬಾಯ್ಲ್ , ಡೀನ್ ಫಾಕ್ಸ್ಕ್ರಾಫ್ಟ್ , ಮಿಚೆಲ್ ಹೇ (ವಿಕೆಟ್ ಕೀಪರ್), ಸೈಮನ್ ಕೀನ್ , ಕ್ರಿಶ್ಚಿಯನ್ ಕ್ಲಾರ್ಕ್ , ಫ್ರೇಸರ್ ಶೀಟ್ , ಜೇಡೆನ್ ಲೆನಾಕ್ಸ್ , ಝಾಕ್ ಗಿಬ್ಸನ್.