India A Squad: ಭಾರತ ಎ ತಂಡ ಪ್ರಕಟ: ಕನ್ನಡಿಗ ಆಯ್ಕೆ
India A Squad: ಡಿಸೆಂಬರ್ 26 ರಿಂದ ಶುರುವಾಗಲಿರುವ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಟೀಮ್ ಇಂಡಿಯಾ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಹೊರಗುಳಿದಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಕ್ಯಾಚ್ ಹಿಡಿಯುವ ಯತ್ನದಲ್ಲಿ ಅವರ ಬಲಗೈ ಬೆರಳಿಗೆ ಗಾಯವಾಗಿತ್ತು. ಈ ಗಾಯದಿಂದ ರುತುರಾಜ್ ಗಾಯಕ್ವಾಡ್ ಇನ್ನೂ ಕೂಡ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ.
ಸೌತ್ ಆಫ್ರಿಕಾ ಎ ತಂಡದ ವಿರುದ್ಧದ ಪಂದ್ಯಕ್ಕಾಗಿ ಭಾರತ ಎ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡವನ್ನು ಅಭಿಮನ್ಯು ಈಶ್ವರನ್ ಮುನ್ನಡೆಸಲಿದ್ದಾರೆ. ವಿಶೇಷ ಎಂದರೆ ಅಭಿಮನ್ಯು ಪ್ರಸ್ತುತ ಟೀಮ್ ಇಂಡಿಯಾದ ಭಾಗವಾಗಿದ್ದಾರೆ. ಇದಾಗ್ಯೂ ಈ ಪಂದ್ಯ ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವುದರಿಂದ ಅವರಿಗೆ ನಾಯಕತ್ವ ವಹಿಸಲಾಗಿದೆ. ಹಾಗೆಯೇ 14 ಸದಸ್ಯರ ಈ ಬಳಗದಲ್ಲಿ ಕರ್ನಾಟಕದ ವೇಗದ ಬೌಲರ್ ವಿಧ್ವತ್ ಕಾವೇರಪ್ಪ ಕೂಡ ಸ್ಥಾನ ಪಡೆದಿರುವುದು ವಿಶೇಷ.
ಇನ್ನು ಈ ತಂಡದಲ್ಲಿ ಇತ್ತೀಚೆಗಷ್ಟೇ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ ರಜತ್ ಪಾಟಿದಾರ್ ಹಾಗೂ ಸಾಯಿ ಸುದರ್ಶನ್ಗೆ ಅವಕಾಶ ನೀಡಲಾಗಿದೆ. ಹಾಗೆಯೇ ಸೌತ್ ಆಫ್ರಿಕಾ ವಿರುದ್ಧದ ಸೀಮಿತ ಓವರ್ಗಳ ಸರಣಿಯಲ್ಲಿ ಕಾಣಿಸಿಕೊಂಡಿದ್ದ ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್, ಅವೇಶ್ ಖಾನ್ ಹಾಗೂ ರಿಂಕು ಸಿಂಗ್ ಕೂಡ ಭಾರತ ಎ ತಂಡಕ್ಕೆ ಆಯ್ಕೆಯಾಗಿದ್ದಾರೆ. ಭಾರತ ಎ ಹಾಗೂ ಸೌತ್ ಆಫ್ರಿಕಾ ಎ ತಂಡಗಳ ನಡುವಣ 4 ದಿನಗಳ ಟೆಸ್ಟ್ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ.
ಭಾರತ ಎ ತಂಡ: ಅಭಿಮನ್ಯು ಈಶ್ವರನ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ತಿಲಕ್ ವರ್ಮಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಅವೇಶ್ ಖಾನ್, ನವದೀಪ್ ಸೈನಿ, ಆಕಾಶ್ ದೀಪ್, ವಿಧ್ವತ್ ಕಾವೇರಪ್ಪ, ಮಾನವ್ ಸುತಾರ್, ರಿಂಕು ಸಿಂಗ್.
ರುತುರಾಜ್ ಬದಲಿಗೆ ಅಭಿಮನ್ಯು:
ಡಿಸೆಂಬರ್ 26 ರಿಂದ ಶುರುವಾಗಲಿರುವ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಟೀಮ್ ಇಂಡಿಯಾ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಹೊರಗುಳಿದಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಕ್ಯಾಚ್ ಹಿಡಿಯುವ ಯತ್ನದಲ್ಲಿ ಅವರ ಬಲಗೈ ಬೆರಳಿಗೆ ಗಾಯವಾಗಿತ್ತು. ಈ ಗಾಯದಿಂದ ರುತುರಾಜ್ ಗಾಯಕ್ವಾಡ್ ಇನ್ನೂ ಕೂಡ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ.
ಇದೀಗ ಅವರ ಬದಲಿಗೆ ಭಾರತ ಎ ತಂಡದ ನಾಯಕ ಅಭಿಮನ್ಯು ಈಶ್ವರನ್ಗೆ ಅವಕಾಶ ನೀಡಲಾಗಿದೆ. ಅದರಂತೆ ಭಾರತ ಎ-ಸೌತ್ ಆಫ್ರಿಕಾ ಎ ನಡುವಿನ ಪಂದ್ಯದ ಮುಕ್ತಾಯದ ಬಳಿಕ ಅಭಿಮನ್ಯು ಟೀಮ್ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ, ಅಭಿಮನ್ಯು ಈಶ್ವರನ್.
ಇದನ್ನೂ ಓದಿ: IPL 2024: ಬಲಿಷ್ಠ ಪಡೆ…RCB ತಂಡದ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ
ಭಾರತ-ಸೌತ್ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ:
- ಡಿಸೆಂಬರ್ 26 ರಿಂದ- ಮೊದಲ ಟೆಸ್ಟ್ ಪಂದ್ಯ (ಸೆಂಚುರಿಯನ್)
- ಜನವರಿ 3 ರಿಂದ- ಎರಡನೇ ಟೆಸ್ಟ್ ಪಂದ್ಯ (ಕೇಪ್ಟೌನ್).
Published On - 7:21 am, Sun, 24 December 23