ಉದಯೋನ್ಮುಖ ತಂಡಗಳ ಏಷ್ಯಾಕಪ್ ಟಿ20 ಟೂರ್ನಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ತಿಲಕ್ ವರ್ಮಾ ಮುನ್ನಡೆಸಲಿದ್ದಾರೆ. ಆದರೆ ಈ ತಂಡದಲ್ಲಿ ಕರ್ನಾಟಕದ ಯಾವುದೇ ಆಟಗಾರನಿಗೆ ಸ್ಥಾನ ಲಭಿಸಿಲ್ಲ ಎಂಬುದೇ ಅಚ್ಚರಿ. ಇನ್ನು ಈ ತಂಡದಲ್ಲಿ ಸ್ಟಾರ್ ಆಟಗಾರರಾಗಿ ಅಭಿಷೇಕ್ ಶರ್ಮಾ, ರಾಹುಲ್ ಚಹರ್, ಅನೂಜ್ ರಾವತ್, ಆಯುಷ್ ಬದೋನಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಎಮರ್ಜಿಂಗ್ ಏಷ್ಯಾಕಪ್ಗೆ ಭಾರತ ಎ ತಂಡ ಈ ಕೆಳಗಿನಂತಿದೆ…
ಭಾರತ ಎ ತಂಡ: ತಿಲಕ್ ವರ್ಮಾ (ನಾಯಕ), ಅಭಿಷೇಕ್ ಶರ್ಮಾ, ರಮಣ್ದೀಪ್ ಸಿಂಗ್, ಆಯುಷ್ ಬದೋನಿ, ನಿಶಾಂತ್ ಸಿಂಧು, ಅನೂಜ್ ರಾವತ್, ಪ್ರಭ್ ಸಿಮ್ರಾನ್ ಸಿಂಗ್, ನೆಹಾಲ್ ವಧೇರಾ, ಅನ್ಶುಲ್ ಕಾಂಬೋಜ್, ಹೃತಿಕ್ ಶೋಕೀನ್, ಆಕಿಬ್ ಖಾನ್, ವೈಭವ್ ಅರೋರಾ, ರಾಸಿಖ್ ಸಲಾಂ, ಸಾಯಿ ಕಿಶೋರ್, ರಾಹುಲ್ ಚಹರ್.
ಇದನ್ನೂ ಓದಿ: ಬೌಂಡರಿಗಳೊಂದಿಗೆ ಹೊಸ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ ಭಾರತ
ಎಮರ್ಜಿಂಗ್ ಏಷ್ಯಾಕಪ್ ಟೂರ್ನಿಯ ಗ್ರೂಪ್ ಬಿ ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಕಾಣಿಸಿಕೊಂಡಿವೆ. ಹೀಗಾಗಿ ಮೊದಲ ಸುತ್ತಿನಲ್ಲೇ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದಾರೆ. ಅದರಂತೆ ಅಕ್ಟೋಬರ್ 19 ರಂದು ನಡೆಯಲಿರುವ 4ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಎದುರು ಬದುರಾಗಲಿದೆ.