ಭಾರತ- ಆಸೀಸ್ ಅನಧಿಕೃತ ಟೆಸ್ಟ್; ಕಾಂಗರೂಗಳಿಗೆ ಟೀಂ ಇಂಡಿಯಾ ತಕ್ಕ ತಿರುಗೇಟು
India A vs Australia A: ಭಾರತ ಮತ್ತು ಆಸ್ಟ್ರೇಲಿಯಾ ಎ ತಂಡಗಳ ನಡುವಿನ ಮೊದಲ ಅನಧಿಕೃತ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತು. ಎರಡೂ ತಂಡಗಳು 500 ಕ್ಕೂ ಹೆಚ್ಚು ರನ್ ಗಳಿಸಿದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಭಾರತ ತಂಡದ ಪರ ದೇವದತ್ ಪಡಿಕ್ಕಲ್ ಮತ್ತು ಧ್ರುವ್ ಜುರೆಲ್ ಶತಕ ಗಳಿಸಿದರು.

ಭಾರತ ಎ ಹಾಗೂ ಆಸ್ಟ್ರೇಲಿಯಾ ಎ (India A vs Australia A) ತಂಡಗಳ ನಡುವೆ ನಡೆದ ಮೊದಲ ಅನಧಿಕೃತ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಈ ಟೆಸ್ಟ್ನಲ್ಲಿ ಉಭಯ ತಂಡಗಳು ತಲಾ 500 ಕ್ಕೂ ಅಧಿಕ ರನ್ ಕಲೆಹಾಕಿದವಾದರೂ ಪಂದ್ಯವನ್ನು ಗೆದ್ದುಕೊಳ್ಳಲು ಸಾಧ್ಯವಾಗಲಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ 532 ರನ್ ಕಲೆಹಾಕಿದರೆ, ಇತ್ತ ಆತಿಥೇಯ ಭಾರತ ಕೂಡ ಉತ್ತಮ ಪ್ರದರ್ಶನ ನೀಡುವ ಮೂಲಕ ಇನ್ನೂ 3 ವಿಕೆಟ್ಗಳಿದ್ದರೂ ಸಹ ಆಸ್ಟ್ರೇಲಿಯಾಕ್ಕಿಂತ 1 ರನ್ಗೆ ಅಂದರೆ 531 ರನ್ಗೆ ತನ್ನ ಇನ್ನಿಂಗ್ಸ್ ಡಿಕ್ಲೇರ್ ಮಾಡಿತು. ಆ ಬಳಿಕ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ 56 ರನ್ ಕಲೆಹಾಕಿದ್ದ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು.
ಎಲ್ಲರನ್ನೂ ಅಚ್ಚರಿಗೊಳಿಸಿದ ಶ್ರೇಯಸ್
ಪಂದ್ಯ ಡ್ರಾದಲ್ಲಿ ಅಂತ್ಯಗೊಂಡರೆ, ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ತಮ್ಮ ನಿರ್ಧಾರದಿಂದ ಎಲ್ಲರನ್ನೂ ಅಚ್ಚರಿಗೊಳಿಸಿದರು. ಲಕ್ನೋದಲ್ಲಿ ನಡೆದ ಮೊದಲ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಎ ತಂಡವು ತನ್ನ ಮೊದಲ ಇನ್ನಿಂಗ್ಸ್ ಅನ್ನು 6 ವಿಕೆಟ್‌ಗೆ 532 ರನ್‌ಗಳಿಗೆ ಡಿಕ್ಲೇರ್ ಮಾಡಿತು. ನಂತರ ಭಾರತ ಎ ತಂಡದ ಬ್ಯಾಟ್ಸ್‌ಮನ್‌ಗಳು ತಮ್ಮ ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ದೇವದತ್ ಪಡಿಕ್ಕಲ್ (150) ಮತ್ತು ಧ್ರುವ್ ಜುರೆಲ್ (140) ತಂಡದ ಪರ ಶತಕಗಳನ್ನು ಬಾರಿಸಿದರು. ಪಂದ್ಯದ ಕೊನೆಯ ದಿನದ ಒಂದು ಹಂತದಲ್ಲಿ, ಭಾರತ ಎ ತಂಡವು ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 7 ವಿಕೆಟ್‌ಗೆ 531 ರನ್ ಗಳಿಸಿತ್ತು.
ಏತನ್ಮಧ್ಯೆ, ಮಳೆ ಆರಂಭವಾದ ಕಾರಣ ಚಹಾ ವಿರಾಮ ಘೋಷಿಸಲಾಯಿತು. ಏತನ್ಮಧ್ಯೆ, ನಾಯಕ ಶ್ರೇಯಸ್ ಅಯ್ಯರ್ ಭಾರತ ಎ ತಂಡದ ಮೊದಲ ಇನ್ನಿಂಗ್ಸ್ 531 ರನ್‌ಗಳಿಗೆ ಡಿಕ್ಲೇರ್ ಮಾಡಿದರು. ವಾಸ್ತವವಾಗಿ ಈ ಪಂದ್ಯದಲ್ಲಿ ಭಾರತ ಎ ತಂಡ ಮುನ್ನಡೆ ಸಾಧಿಸುವ ಅವಕಾಶ ಇತ್ತು. ಆದಾಗ್ಯೂ, ನಾಯಕ ಶ್ರೇಯಸ್, ಆಸ್ಟ್ರೇಲಿಯಾ ಎ ತಂಡಕ್ಕೆ 2ನೇ ಇನ್ನಿಂಗ್ಸ್ ಆಡುವ ಅವಕಾಶ ನೀಡಿದರು. ಆದಾಗ್ಯೂ, ಇದು ಭಾರತ ಎ ತಂಡಕ್ಕೆ ಯಾವುದೇ ಪ್ರಯೋಜನ ನೀಡಲಿಲ್ಲ.
IND vs AUS: ಆಸ್ಟ್ರೇಲಿಯಾ ವಿರುದ್ಧ 150 ರನ್ ಚಚ್ಚಿದ ಕನ್ನಡಿಗ ದೇವದತ್ ಪಡಿಕ್ಕಲ್
ಮೊದಲ ಟೆಸ್ಟ್ ಡ್ರಾದಲ್ಲಿ ಅಂತ್ಯ
ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೆ 56 ರನ್ ಗಳಿಸಿತು. ನಂತರ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು. ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತ ಶತಕ ಗಳಿಸಿದ ಆರಂಭಿಕ ಬ್ಯಾಟ್ಸ್‌ಮನ್ ಸ್ಯಾಮ್ ಕಾನ್‌ಸ್ಟಾಸ್ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಉತ್ತಮವಾಗಿ ಬ್ಯಾಟಿಂಗ್ ಮಾಡಿ 49 ಎಸೆತಗಳಲ್ಲಿ ಅಜೇಯ 27 ರನ್ ಗಳಿಸಿದರು. ಮತ್ತೊಬ್ಬ ಆರಂಭಿಕ ಬ್ಯಾಟ್ಸ್‌ಮನ್ ಕ್ಯಾಂಪ್‌ಬೆಲ್ ಕೆಲ್ಲಾವೆ 47 ಎಸೆತಗಳಲ್ಲಿ ಅಜೇಯ 24 ರನ್ ಗಳಿಸಿದರು.
ಮೊದಲ ಇನ್ನಿಂಗ್ಸ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಸ್ಯಾಮ್ ಕಾನ್ಸ್ಟಸ್ 109 ರನ್ ಬಾರಿಸಿದರೆ, ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಜೋಶ್ ಫಿಲಿಪ್ ಕೂಡ ಅಜೇಯ 123 ರನ್ ಕಲೆಹಾಕಿದರು. ಮತ್ತೊಂದೆಡೆ, ಭಾರತ ಎ ತಂಡದ ಪರ ದೇವದತ್ ಪಡಿಕ್ಕಲ್ ಮತ್ತು ಧ್ರುವ್ ಜುರೆಲ್ ಶತಕಗಳನ್ನು ಬಾರಿಸಿದರೆ, ನಾರಾಯಣ್ ಜಗದೀಸನ್ ಮತ್ತು ಸಾಯಿ ಸುದರ್ಶನ್ ಕೂಡ ಅರ್ಧಶತಕಗಳ ಕಾಣಿಕೆ ನೀಡಿದರು. ಭಾರತ ಎ ಮತ್ತು ಆಸ್ಟ್ರೇಲಿಯಾ ಎ ನಡುವಿನ ಎರಡನೇ ಮತ್ತು ಅಂತಿಮ ಅನಧಿಕೃತ ಟೆಸ್ಟ್ ಪಂದ್ಯ ಸೆಪ್ಟೆಂಬರ್ 23 ರಿಂದ ಲಕ್ನೋದಲ್ಲಿ ನಡೆಯಲಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
