AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ; ದೇವದತ್ ಪಡಿಕ್ಕಲ್​ಗೆ ನಾಯಕತ್ವ

ಭಾರತ ಎ ಮತ್ತು ಆಸ್ಟ್ರೇಲಿಯಾ ಎ ನಡುವಿನ ಏಕದಿನ ಹಾಗೂ 4 ದಿನಗಳ ಸರಣಿ ಸೆಪ್ಟೆಂಬರ್ 22 ರಿಂದ ಪುದುಚೇರಿಯಲ್ಲಿ ಆರಂಭವಾಗಲಿದೆ. 4 ದಿನಗಳ ಪಂದ್ಯಗಳಿಗೆ ದೇವದತ್ ಪಡಿಕ್ಕಲ್ ನಾಯಕತ್ವ ವಹಿಸಿದರೆ, ರುತುರಾಜ್ ಗಾಯಕ್ವಾಡ್ ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ. ಗಾಯದಿಂದ ಚೇತರಿಸಿಕೊಂಡ ಹಾರ್ದಿಕ್ ಪಾಂಡ್ಯ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಸರಣಿ ಯುವ ಆಟಗಾರರಿಗೆ ಉತ್ತಮ ಅವಕಾಶವಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ; ದೇವದತ್ ಪಡಿಕ್ಕಲ್​ಗೆ ನಾಯಕತ್ವ
ದೇವದತ್ ಪಡಿಕ್ಕಲ್, ಕೆಎಲ್ ರಾಹುಲ್
ಪೃಥ್ವಿಶಂಕರ
|

Updated on:Sep 09, 2026 | 3:54 PM

Share

ಭಾರತ ಎ ಹಾಗೂ ಆಸ್ಟ್ರೇಲಿಯಾ ಎ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ 4 ದಿನಗಳ 2 ಟೆಸ್ಟ್ ಪಂದ್ಯಗಳ ಸರಣಿ ಇದೇ ಸೆಪ್ಟೆಂಬರ್ 22 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಆಸ್ಟ್ರೇಲಿಯಾ ಎ ತಂಡ ಭಾರತಕ್ಕೆ ಬರಲಿದೆ. ಇದೀಗ ಈ ಎರಡು ಸರಣಿಗಳಿಗೆ ಭಾರತ ಎ ತಂಡಗಳನ್ನು ಪ್ರಕಟಿಸಲಾಗಿದೆ. ಅದರಂತೆ 2 ಬಹುದಿನಗಳ ಸರಣಿಯಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ ಭಾರತ ಎ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ಏಕದಿನ ಸರಣಿಯಲ್ಲಿ ರುತುರಾಜ್ ಗಾಯಕ್ವಾಡ್ ತಂಡದ ನಾಯಕತ್ವವಹಿಸಿದ್ದರೆ, ದೇವದತ್ ಪಡಿಕ್ಕಲ್​ಗೆ ಉಪನಾಯಕತ್ವದ ಜವಾಬ್ದಾರಿ ನೀಡಲಾಗಿದೆ.

ದೇವದತ್ ಪಡಿಕ್ಕಲ್ ನಾಯಕ

ಪುದುಚೇರಿಯಲ್ಲಿ ನಡೆಯಲಿರುವ ಈ ಹೈ ಪ್ರೊಫೈಲ್ ತವರು ಸರಣಿಯು ಎರಡು ಬಹು-ದಿನದ ಪಂದ್ಯಗಳು ಮತ್ತು ಮೂರು ಲಿಸ್ಟ್ ಎ ಪಂದ್ಯಗಳನ್ನು ಒಳಗೊಂಡಿರುತ್ತದೆ. ಮೇಲೆ ಹೇಳಿದಂತೆ ಆಯ್ಕೆದಾರರು ಎರಡೂ ಸ್ವರೂಪಗಳಿಗೆ ವಿಭಿನ್ನ ನಾಯಕರನ್ನು ಆಯ್ಕೆ ಮಾಡಿದ್ದಾರೆ. ಎಡಗೈ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಬಹು-ದಿನದ ತಂಡವನ್ನು ಮುನ್ನಡೆಸಲಿದರೆ, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ರುತುರಾಜ್ ಗಾಯಕ್ವಾಡ್ ಭಾರತ ಎ ತಂಡವನ್ನು ಮುನ್ನಡೆಸಲಿದ್ದಾರೆ. ಈ ಪ್ರವಾಸವು ಸೆಪ್ಟೆಂಬರ್ 22 ರಂದು ಪ್ರಾರಂಭವಾಗುತ್ತದೆ.

ಯುವ ಆಟಗಾರರಿಗೆ ಅವಕಾಶ

ಬಹುದಿನಗಳ ಸರಣಿಗೆ ಆಯ್ಕೆ ಮಾಡಲಾದ 15 ಸದಸ್ಯರ ತಂಡದಲ್ಲಿ ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರವಾಗಿ ಉತ್ತಮ ಪ್ರದರ್ಶನ ನೀಡಿದ ಆಟಗಾರರು ಇದ್ದಾರೆ. ಅಮನ್ ಮೊಖಡೆ, ಆಯುಷ್ ಪಾಂಡೆ, ದೇವದತ್ ಪಡಿಕ್ಕಲ್, ಸಾಯಿ ಸುದರ್ಶನ್, ಯಶ್ ರಾಥೋಡ್ ಮತ್ತು ಶೇಖ್ ರಶೀದ್​ರಂತಹ ಆಟಗಾರರು ಬ್ಯಾಟಿಂಗ್ ವಿಭಾಗದಲ್ಲಿ ಕಾಣಿಸಿಕೊಂಡರೆ, ಕುಮಾರ್ ಕುಶಾಗ್ರ ಮತ್ತು ಎನ್. ಜಗದೀಶನ್ ವಿಕೆಟ್ ಕೀಪರ್‌ಗಳಾಗಿ ತಂಡದಲ್ಲಿದ್ದಾರೆ. ಹಾಗೆಯೇ ಆಲ್‌ರೌಂಡರ್‌ಗಳಾದ ಶಮ್ಸ್ ಮುಲಾನಿ ಮತ್ತು ತನುಷ್ ಕೋಟ್ಯಾನ್ ಸ್ಪಿನ್ ವಿಭಾಗವನ್ನು ನಿರ್ವಹಿಸಲಿದ್ದಾರೆ. ತುಷಾರ್ ದೇಶಪಾಂಡೆ, ಅನ್ಶುಲ್ ಕಾಂಬೋಜ್, ಪ್ರಫುಲ್ ಹಿಂಗೆ, ನಚಿಕೇತ್ ಭೂತೆ ಮತ್ತು ವಿ. ವೈಶಾಕ್ ಅವರನ್ನು ವೇಗದ ಬೌಲರ್​​ಗಳಾಗಿ ಆಯ್ಕೆ ಮಾಡಲಾಗಿದೆ.

IND vs SL: ಸತತ 2ನೇ ಪಂದ್ಯದಲ್ಲಿ ಸ್ಮರಣೀಯ ಶತಕ ಬಾರಿಸಿದ ದೇವದತ್ ಪಡಿಕ್ಕಲ್

ರಜತ್ ಪಾಟಿದರ್​ಗೆ ಸ್ಥಾನ

ಇನ್ನು ಏಕದಿನ ಸರಣಿಗೆ ಘೋಷಿಸಲಾದ ತಂಡದಲ್ಲಿ ಅನುಭವಿ ಮತ್ತು ಸ್ಫೋಟಕ ಆಟಗಾರರು ಸ್ಥಾನ ಪಡೆದಿದ್ದಾರೆ. ರುತುರಾಜ್ ಗಾಯಕ್ವಾಡ್ ನಾಯಕತ್ವದ ಈ ತಂಡದಲ್ಲಿ ದೇವದತ್ ಪಡಿಕ್ಕಲ್, ಪ್ರಿಯಾಂಶ್ ಆರ್ಯ, ರಜತ್ ಪಾಟಿದಾರ್ ಮತ್ತು ನಮನ್ ಧೀರ್ ಅವರಂತಹ ಬ್ಯಾಟ್ಸ್‌ಮನ್‌ಗಳು ಇದ್ದಾರೆ. ಗಾಯದಿಂದಾಗಿ ಕೆಲವು ಸಮಯದಿಂದ ಭಾರತೀಯ ಸೀನಿಯರ್ ತಂಡದಿಂದ ಹೊರಗುಳಿದಿರುವ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ತಂಡದಲ್ಲಿ ಆಯ್ಕೆ ಮಾಡಲಾಗಿದೆ. ಕುಮಾರ್ ಕುಶಾಗ್ರ ಮತ್ತು ಪ್ರಭ್ಸಿಮ್ರಾನ್ ಸಿಂಗ್ ಅವರನ್ನು ವಿಕೆಟ್ ಕೀಪರ್-ಬ್ಯಾಟ್ಸ್‌ಮನ್‌ಗಳಾಗಿ ಆಯ್ಕೆ ಮಾಡಲಾಗಿದೆ.

ಭಾರತ ಎ ಬಹುದಿನ ಸರಣಿ ತಂಡ: ಅಮನ್ ಮೊಖಾಡೆ, ಆಯುಷ್ ಪಾಂಡೆ, ದೇವದತ್ತ್ ಪಡಿಕ್ಕಲ್ (ನಾಯಕ), ಸಾಯಿ ಸುದರ್ಶನ್ (ಉಪನಾಯಕ), ಯಶ್ ರಾಥೋಡ್, ಶೇಕ್ ರಶೀದ್, ಕುಮಾರ್ ಕುಶಾಗ್ರಾ (ವಿಕೆಟ್ ಕೀಪರ್), ಶಮ್ಸ್ ಮುಲಾನಿ, ತನುಷ್ ಕೋಟ್ಯಾನ್, ತುಷಾರ್ ದೇಶಪಾಂಡೆ, ಅಂಶುಲ್ ಕಾಂಬೋಜ್, ಪ್ರಫುಲ್ ಹಿಂಗೆ, ಎನ್ ಜಗದೀಸನ್ (ವಿಕೆಟ್ ಕೀಪರ್), ನಚಿಕೇತ್ ಭೂತೆ, ವಿ ವೈಶಾಕ್*

ಭಾರತ ಎ ಏಕದಿನ ತಂಡ: ಪ್ರಿಯಾಂಶ್ ಆರ್ಯ, ಸಾಯಿ ಸುದರ್ಶನ್, ದೇವದತ್ತ್ ಪಡಿಕ್ಕಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್ (ನಾಯಕ), ರಜತ್ ಪಾಟಿದಾರ್, ಕುಮಾರ್ ಕುಶಾಗ್ರಾ (ವಿಕೆಟ್ ಕೀಪರ್), ನಿಶಾಂತ್ ಸಿಂಧು, ವಿಪ್ರಜ್ ನಿಗಮ್, ಅರ್ಶಿನ್ ಕುಲಕರ್ಣಿ, ಅರ್ಷದ್ ಖಾನ್, ನಮನ್ ಧೀರ್, ಹಾರ್ದಿಕ್ ಪಾಂಡ್ಯ*, ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಗುರ್ಜಪ್ನೀತ್ ಸಿಂಗ್, ಯಶ್ ಠಾಕೂರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:48 pm, Wed, 9 September 26

Follow Us
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?