AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್‌ ನೆಲದಲ್ಲಿ ಹ್ಯಾಟ್ರಿಕ್ ಅರ್ಧಶತಕ ಸಿಡಿಸಿದ ಧ್ರುವ್ ಜುರೆಲ್; ಪಂತ್ ಸ್ಥಾನ ಶೇಕಿಂಗ್

Dhruv Jurel's Hattrick of Half-Centuries: ಭಾರತ ಎ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಎರಡನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಸತತ ಮೂರನೇ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಜುರೆಲ್, ಇಂಗ್ಲೆಂಡ್ ನಲ್ಲಿಯೂ ತಮ್ಮ ಉತ್ತಮ ಫಾರ್ಮ್ ಮುಂದುವರಿಸಿದ್ದಾರೆ. ಈ ಅದ್ಭುತ ಪ್ರದರ್ಶನದಿಂದಾಗಿ ಭಾರತದ ಟೆಸ್ಟ್ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.

ಇಂಗ್ಲೆಂಡ್‌ ನೆಲದಲ್ಲಿ ಹ್ಯಾಟ್ರಿಕ್ ಅರ್ಧಶತಕ ಸಿಡಿಸಿದ ಧ್ರುವ್ ಜುರೆಲ್; ಪಂತ್ ಸ್ಥಾನ ಶೇಕಿಂಗ್
Dhruv Jurel
ಪೃಥ್ವಿಶಂಕರ
|

Updated on: Jun 07, 2025 | 4:25 PM

Share

ಭಾರತ-ಎ ಹಾಗೂ ಇಂಗ್ಲೆಂಡ್‌ ಲಯನ್ಸ್ (India A vs England Lions) ನಡುವೆ ನಾರ್ಥಾಂಪ್ಟನ್‌ನ ಕೌಂಟಿ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಭಾರತ ಎ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ (Dhruv Jurel) ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಇದು ಜುರೇಲ್ ಅವರ ಸತತ ಮೂರನೇ ಅರ್ಧಶತಕವಾಗಿದೆ. ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಜುರೇಲ್, ಇಂಗ್ಲಿಷ್ ನೆಲದಲ್ಲಿಯೂ ಸಾಕಷ್ಟು ರನ್ ಗಳಿಸುತ್ತಿದ್ದಾರೆ. ಮೊದಲ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಅರ್ಧಶತಕ ಬಾರಿಸಿದ್ದ ಜುರೇಲ್, ಇದೀಗ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲೂ ಅರ್ಧಶತಕ ಸಿಡಿಸಿ ಅರ್ಧಶತಕಗಳ ಹ್ಯಾಟ್ರಿಕ್ ಪೂರ್ಣಗೊಳಿಸಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ, ಜುರಲೇ ಕೇವಲ 6 ರನ್‌ಗಳಿಂದ ಶತಕ ವಂಚಿತರಾಗಿದ್ದರು.

ಸತತ ಮೂರನೇ ಅರ್ಧಶತಕ

ಇಂಗ್ಲೆಂಡ್ ಲಯನ್ಸ್ ವಿರುದ್ಧದ ಎರಡನೇ ಅನಧಿಕೃತ ಟೆಸ್ಟ್ ಪಂದ್ಯದ ಮೊದಲ ದಿನದಂದು ಧ್ರುವ್ ಜುರೆಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಅವರು 87 ಎಸೆತಗಳಲ್ಲಿ 7 ಬೌಂಡರಿಗಳ ಸಹಾಯದಿಂದ 52 ರನ್ ಗಳಿಸಿದರು. ಅಲ್ಲದೆ ಕೆಎಲ್ ರಾಹುಲ್ (116 ರನ್) ಅವರೊಂದಿಗೆ ಮೂರನೇ ವಿಕೆಟ್‌ಗೆ 121 ರನ್‌ಗಳ ಶತಕದ ಪಾಲುದಾರಿಕೆಯನ್ನು ಹಂಚಿಕೊಂಡರು. ಇದಕ್ಕೂ ಮೊದಲು, ಇಂಗ್ಲೆಂಡ್ ಲಯನ್ಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಜುರೆಲ್ 120 ಎಸೆತಗಳಲ್ಲಿ 11 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 94 ರನ್ ಗಳಿಸಿ ಕೇವಲ 6 ರನ್‌ಗಳಿಂದ ತಮ್ಮ ಶತಕವನ್ನು ತಪ್ಪಿಸಿಕೊಂಡರು. ಇದರ ನಂತರ, ಎರಡನೇ ಇನ್ನಿಂಗ್ಸ್‌ನಲ್ಲಿಯೂ 53 ಎಸೆತಗಳಲ್ಲಿ 4 ಬೌಂಡರಿಗಳ ಸಹಾಯದಿಂದ 53 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು.

ಭಾರತ ಟೆಸ್ಟ್ ತಂಡದಲ್ಲಿ ಜುರೇಲ್​ಗೆ ಸ್ಥಾನ

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಗೆ ಧ್ರುವ್ ಜುರೆಲ್ ಅವರನ್ನು ಟೀಂ ಇಂಡಿಯಾದಲ್ಲಿ ಎರಡನೇ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಆಯ್ಕೆ ಮಾಡಲಾಗಿದೆ. ಪ್ರಸ್ತುತ ಅವರು ರನ್ ಗಳಿಸುತ್ತಿರುವ ರೀತಿಯನ್ನು ನೋಡಿದರೆ ಅವರಿಗೆ ಭಾರತ ತಂಡದಲ್ಲಿ ಸ್ಥಾನ ಸಿಗುವ ಎಲ್ಲಾ ಸಾಧ್ಯತೆಗಳಿವೆ. ಒಂದು ವೇಳೆ ಜುರೇಲ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದರೆ ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್​ ಪಂತ್​ಗೆ ಬೆಂಚ್ ಮೇಲೆ ಕುಳಿತುಕೊಳ್ಳಬೇಕಾಗುತ್ತದೆ.

IND vs ENG Test: ಭಾರತವನ್ನು ಗೆಲ್ಲಿಸಿ ಮೊದಲ ಬಾರಿ ಮನೆಗೆ ಬಂದ ಧ್ರುವ್ ಜುರೆಲ್: ತಂದೆ-ತಾಯಿಗೆ ಕೊಟ್ಟ ಗಿಫ್ಟ್ ಏನು?

ಐಪಿಎಲ್​ನಲ್ಲಿಯೂ ಉತ್ತಮ ಪ್ರದರ್ಶನ

ಧ್ರುವ್ ಜುರೆಲ್ ಈ ಬಾರಿಯ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದರು. ರಾಜಸ್ಥಾನ್ ರಾಯಲ್ಸ್ ತಂಡವು ಮೊದಲ ಸುತ್ತಿನಲ್ಲಿಯೇ ಹೊರಬಿದ್ದಿತ್ತಾದರೂ ಜುರೆಲ್ ತಂಡದ ಪರ ಅದ್ಭುತ ಬ್ಯಾಟಿಂಗ್ ಮಾಡಿದರು. ಅವರು ಆಡಿದ 14 ಪಂದ್ಯಗಳ 13 ಇನ್ನಿಂಗ್ಸ್‌ಗಳಲ್ಲಿ 37.00 ಸರಾಸರಿಯಲ್ಲಿ 333 ರನ್ ಗಳಿಸಿದರು. ಇದರಲ್ಲಿ ಎರಡು ಅರ್ಧಶತಕಗಳು ಸೇರಿದ್ದವು. ಈಗ ಅವರು ಇಂಗ್ಲೆಂಡ್‌ನಲ್ಲಿ ಅದೇ ಫಾರ್ಮ್ ಅನ್ನು ಕಾಯ್ದುಕೊಂಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ