ಟೆಸ್ಟ್ ಶತಕವನ್ನು ಪ್ರಭು ಶ್ರೀರಾಮನಿಗೆ ಅರ್ಪಿಸಿದ ಟೀಂ ಇಂಡಿಯಾ ಕ್ರಿಕೆಟಿಗ; ವಿಡಿಯೋ ನೋಡಿ

India A vs England Lions: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕೆಎಸ್ ಭರತ್ ಭರ್ಜರಿ ಬ್ಯಾಟಿಂಗ್ ನಡೆಸಿ ಶತಕ ಸಿಡಿಸಿ ಮಿಂಚಿದರು. ಶತಕ ಬಾರಿಸಿದ ಕೂಡಲೇ ಕೆಎಸ್ ಭರತ್ ಮೈದಾನದ ಮಧ್ಯದಲ್ಲಿ ಸಂಭ್ರಮಾಚರಣೆ ಮಾಡಿದರು.

ಟೆಸ್ಟ್ ಶತಕವನ್ನು ಪ್ರಭು ಶ್ರೀರಾಮನಿಗೆ ಅರ್ಪಿಸಿದ ಟೀಂ ಇಂಡಿಯಾ ಕ್ರಿಕೆಟಿಗ; ವಿಡಿಯೋ ನೋಡಿ
ಕೆಎಸ್ ಭರತ್
Follow us
ಪೃಥ್ವಿಶಂಕರ
|

Updated on: Jan 21, 2024 | 4:22 PM

ಭಾರತ ಮತ್ತು ಇಂಗ್ಲೆಂಡ್ (India vs England) ನಡುವೆ ಜನವರಿ 25 ರಿಂದ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಎ ಮತ್ತು ಇಂಗ್ಲೆಂಡ್ ಲಯನ್ಸ್ (India A vs England Lions) ತಂಡಗಳ ನಡುವೆ ಅಭ್ಯಾಸ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಕೆಎಸ್ ಭರತ್ (KS Bharat) ಭರ್ಜರಿ ಶತಕ ಸಿಡಿಸಿದ್ದಾರೆ. ಶತಕ ಬಾರಿಸಿದ ನಂತರ ಕೆಎಸ್ ಭರತ್ ಸಂಭ್ರಮಿಸಿದ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ.

ಭಗವಾನ್ ರಾಮನಿಗೆ ಟೆಸ್ಟ್ ಶತಕ ಸಮರ್ಪಣೆ

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕೆಎಸ್ ಭರತ್ ಭರ್ಜರಿ ಬ್ಯಾಟಿಂಗ್ ನಡೆಸಿ ಶತಕ ಸಿಡಿಸಿ ಮಿಂಚಿದರು. ಶತಕ ಬಾರಿಸಿದ ಕೂಡಲೇ ಕೆಎಸ್ ಭರತ್ ಮೈದಾನದ ಮಧ್ಯದಲ್ಲಿ ಸಂಭ್ರಮಾಚರಣೆ ಮಾಡಿದರು. ಬೌಂಡರಿ ಸಿಡಿಸುವ ಮೂಲಕ ಶತಕ ಪೂರೈಸಿದ ಭರತ್, ಬಿಲ್ಲನ್ನು ಹಿಡಿದು ಬಾಣ ಬಿಡುವ ಭಂಗಿಯನ್ನು ಪ್ರದರ್ಶಿಸಿ, ಭಗವಾನ್ ರಾಮನಿಗೆ ತಮ್ಮ ಶತಕವನ್ನು ಅರ್ಪಿಸಿದ್ದಾರೆ.

IND vs ENG: ‘ಟೆಸ್ಟ್ ಸರಣಿ ಗೆಲ್ಲುವ ಫೇವರೇಟ್ ತಂಡ ಭಾರತ’; ಭವಿಷ್ಯ ನುಡಿದ ಇಂಗ್ಲೆಂಡ್ ಮಾಜಿ ನಾಯಕ!

ವಾಸ್ತವವಾಗಿ, ಜನವರಿ 22 ರಂದು ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರದಲ್ಲಿ ಭಗವಾನ್ ರಾಮನ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮ ನಡೆಯಲ್ಲಿದೆ. ಹೀಗಾಗಿ ತಮ್ಮ ಶತಕದ ಸಂಭ್ರಮಾಚರಣೆಯ ವಿಡಿಯೋವನ್ನು ಕೆಎಸ್ ಭರತ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ನೆನಪ್ಪಿನಲ್ಲಿಟ್ಟುಕೊಳ್ಳುವಂತಹದ್ದು, ಜೈ ಶ್ರೀ ರಾಮ್ ಎಂದು ಬರೆದುಕೊಂಡಿದ್ದಾರೆ.

View this post on Instagram

A post shared by K S Bharat (@konasbharat)

ಇಂಗ್ಲೆಂಡ್ ಸರಣಿಗೆ ತಂಡದಲ್ಲಿ ಸ್ಥಾನ

ಇನ್ನು ಈ ಅಭ್ಯಾಸ ಪಂದ್ಯದಲ್ಲಿ ಭರತ್, 165 ಎಸೆತಗಳನ್ನು ಎದುರಿಸಿ 15 ಬೌಂಡರಿಗಳ ನೆರವಿನಿಂದ 116 ರನ್ ಗಳಿಸಿದರು. ಅವರ ಶತಕದ ಆಧಾರದ ಮೇಲೆ ಇಂಗ್ಲೆಂಡ್ ಲಯನ್ಸ್ ಮತ್ತು ಭಾರತ ಎ ನಡುವಿನ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತು. ಇದೀಗ ಅಭ್ಯಾಸ ಪಂದ್ಯದಲ್ಲಿ ಶತಕದ ಪ್ರದರ್ಶನ ನೀಡಿರುವ ಭರತ್, ಜನವರಿ 25ರಿಂದ ನಡೆಯಲಿರುವ ಟೆಸ್ಟ್ ಸರಣಿಗೆ ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಸ್ಥಾನ ಪಡೆದಿದ್ದಾರೆ. ಟೆಸ್ಟ್ ಸರಣಿಗೂ ಮುನ್ನ ಕೆಎಸ್ ಭರತ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಅವರ ಅಮೋಘ ಫಾರ್ಮ್ ನೋಡಿದರೆ ಈಗ ನಾಯಕ ರೋಹಿತ್ ಶರ್ಮಾ ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ನೀಡಬಹುದು ಎನಿಸುತ್ತಿದೆ.

ಕೆಎಸ್ ಭರತ್ ಇದುವರೆಗೆ ಟೀಂ ಇಂಡಿಯಾ ಪರ ಕೇವಲ 5 ಟೆಸ್ಟ್ ಪಂದ್ಯಗಳನ್ನಾಡಿದ್ದು 129 ರನ್ ಗಳಿಸಿದ್ದಾರೆ. ಕೆಎಸ್ ಭರತ್ ಅಲ್ಲದೆ ಇನ್ನಿಬ್ಬರು ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್‌ಗಳಾದ ಕೆಎಲ್ ರಾಹುಲ್ ಮತ್ತು ಧ್ರುವ್ ಜುರೆಲ್ ಕೂಡ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ