India A Vs Pakistan A: ನಾಳೆ ಭಾರತ-ಪಾಕ್ ಮುಖಾಮುಖಿ: ಯಾವ ಚಾನೆಲ್ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ
India A Vs Pakistan A: ಸಾಂಪ್ರದಾಯಿಕ ಎದುರಾಳಿಗಳ ಈ ಕದನದಲ್ಲಿ ಗೆಲ್ಲುವ ತಂಡ ಲೀಗ್ ಹಂತದಲ್ಲಿ ಗ್ರೂಪ್-ಬಿ ನಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ. ಇದಾಗ್ಯೂ ಉಭಯ ತಂಡಗಳು ಸೆಮಿಫೈನಲ್ಗೆ ಅರ್ಹತೆ ಪಡೆಯುವುದು ಖಚಿತ.
Emerging Asia Cup 2023: ACC ಪುರುಷರ ಉದಯೋನ್ಮುಖ ಏಷ್ಯಾಕಪ್ನ 12ನೇ ಪಂದ್ಯದಲ್ಲಿ ಭಾರತ ಎ ಹಾಗೂ ಪಾಕಿಸ್ತಾನ್ ಎ ತಂಡಗಳು ಮುಖಾಮುಖಿಯಾಗಲಿದೆ. ನಾಳೆ (ಜುಲೈ 19) ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಗ್ರೂಪ್-B ನಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ. ಹೀಗಾಗಿ ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ಉಭಯ ತಂಡಗಳಿಂದ ಹೈವೋಲ್ಟೇಜ್ ಪೈಪೋಟಿಯನ್ನು ನಿರೀಕ್ಷಿಸಬಹುದು.
ಗೆದ್ದರೂ ಸೋತರೂ ಸೆಮಿಫೈನಲ್ಗೆ:
ಸಾಂಪ್ರದಾಯಿಕ ಎದುರಾಳಿಗಳ ಈ ಕದನದಲ್ಲಿ ಗೆಲ್ಲುವ ತಂಡ ಲೀಗ್ ಹಂತದಲ್ಲಿ ಗ್ರೂಪ್-ಬಿ ನಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ. ಇದಾಗ್ಯೂ ಉಭಯ ತಂಡಗಳು ಸೆಮಿಫೈನಲ್ಗೆ ಅರ್ಹತೆ ಪಡೆಯುವುದು ಖಚಿತ. ಅಂದರೆ ಗ್ರೂಪ್-ಬಿನಲ್ಲಿರುವ ಯುಎಇ ಹಾಗೂ ನೇಪಾಳ ತಂಡಗಳು ಆಡಿರುವ 2 ಮ್ಯಾಚ್ನಲ್ಲೂ ಸೋಲನುಭವಿಸಿದೆ.
ಇತ್ತ ಭಾರತ ಹಾಗೂ ಪಾಕಿಸ್ತಾನ್ ತಂಡಗಳು ಎರಡೆರಡು ಪಂದ್ಯಗಳಲ್ಲಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಕ್ರಮವಾಗಿ ಮೊದಲ ಹಾಗೂ ದ್ವಿತೀಯ ಸ್ಥಾನ ಅಲಂಕರಿಸಿದೆ. ಹೀಗಾಗಿ ನಾಳಿನ ಪಂದ್ಯದಲ್ಲಿ ಗೆದ್ದರೂ ಸೋತರೂ ಭಾರತ-ಪಾಕಿಸ್ತಾನ್ ತಂಡಗಳು ಸೆಮಿಫೈನಲ್ಗೆ ಎಂಟ್ರಿ ಕೊಡಲಿದೆ. ಈ ಪಂದ್ಯದ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಭಾರತ A vs ಪಾಕಿಸ್ತಾನ A ಪಂದ್ಯ ಯಾವಾಗ ನಡೆಯಲಿದೆ?
ಭಾರತ-ಪಾಕಿಸ್ತಾನ್ ಕಿರಿಯರ ನಡುವಣ ಈ ಪಂದ್ಯವು ಬುಧವಾರ (ಜುಲೈ 19) ನಡೆಯಲಿದೆ.
ಯಾವ ಮೈದಾನದಲ್ಲಿ ಪಂದ್ಯವನ್ನು ಎಲ್ಲಿ ಆಡಲಾಗುತ್ತದೆ?
ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದಾರೆ.
ಎಷ್ಟು ಗಂಟೆಗೆ ಪಂದ್ಯ ಶುರು?
ಭಾರತ A vs ಪಾಕಿಸ್ತಾನ A ನಡುವಣ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 2:00 PM ಗಂಟೆಯಿಂದ ಆರಂಭವಾಗಲಿದೆ.
ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ಈ ಪಂದ್ಯದ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಚಾನೆಲ್ಗಳಲ್ಲಿ ಲಭ್ಯವಿರಲಿದೆ.
ಲೈವ್ ಸ್ಟ್ರೀಮಿಂಗ್ ವೀಕ್ಷಿಸುವುದು ಹೇಗೆ?
ಫ್ಯಾನ್‌ಕೋಡ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಈ ಪಂದ್ಯದ ನೇರ ಪ್ರಸಾರ ಲಭ್ಯವಿರುತ್ತದೆ.
ಭಾರತ ಎ ತಂಡ: ಸಾಯಿ ಸುದರ್ಶನ್, ಅಭಿಷೇಕ್ ಶರ್ಮಾ, ನಿಕಿನ್ ಜೋಸ್, ಪ್ರದೋಶ್ ರಂಜನ್ ಪಾಲ್, ಯಶ್ ಧುಲ್ (ನಾಯಕ), ರಿಯಾನ್ ಪರಾಗ್, ನಿಶಾಂತ್ ಸಿಂಧು, ಪ್ರಭ್‌ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಮಾನವ್ ಸುತಾರ್, ಯುವರಾಜ್‌ಸಿನ್ಹ್ ದೋಡಿಯಾ, ಹರ್ಷಿತ್ ರಾಣಾ, ಆಕಾಶ್ ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ರಾಜವರ್ಧನ್ ಹಂಗರ್ಗೇಕರ್.
ಇದನ್ನೂ ಓದಿ: Yuvraj Singh: ಟೀಮ್ ಇಂಡಿಯಾ ಏಕದಿನ ವಿಶ್ವಕಪ್ ಗೆಲ್ಲೋದು ಡೌಟ್..!
ಪಾಕಿಸ್ತಾನ್ ಎ ತಂಡ: ಮೊಹಮ್ಮದ್ ಹ್ಯಾರಿಸ್ (ನಾಯಕ), ಒಮೈರ್ ಬಿನ್ ಯೂಸುಫ್, ಅಮದ್ ಬಟ್, ಅರ್ಷದ್ ಇಕ್ಬಾಲ್, ಹಸೀಬುಲ್ಲಾ, ಕಮ್ರಾನ್ ಗುಲಾಮ್, ಮೆಹ್ರಾನ್ ಮುಮ್ತಾಜ್, ಮುಬಾಸಿರ್ ಖಾನ್, ಮೊಹಮ್ಮದ್ ವಾಸಿಂ ಜೂನಿಯರ್, ಖಾಸಿಮ್ ಅಕ್ರಮ್, ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್ , ಸುಫಿಯಾನ್ ಮುಖೀಮ್ ಮತ್ತು ತಯ್ಯಬ್ ತಾಹಿರ್.