ಭಾರತ vs ಪಾಕಿಸ್ತಾನ್ ಪಂದ್ಯ: ಯಾವಾಗ? ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

ಎಸಿಸಿ ಪುರುಷರ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026 ಟೂರ್ನಿಯಲ್ಲಿ ಭಾರತ ಎ ಮತ್ತು ಪಾಕಿಸ್ತಾನ ಎ ತಂಡಗಳು ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಪಂದ್ಯ ಯಾವಾಗ, ಎಷ್ಟು ಗಂಟೆಗೆ ಶುರುವಾಗಲಿದೆ ಮತ್ತು ಯಾವ ಚಾನೆಲ್‌ನಲ್ಲಿ ನೇರ ಪ್ರಸಾರವಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತ vs ಪಾಕಿಸ್ತಾನ್ ಪಂದ್ಯ: ಯಾವಾಗ? ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ
Ind Vs Pak
Image Credit source: x.com

Updated on: Nov 19, 2026 | 2:23 PM

ಎಸಿಸಿ ಪುರುಷರ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026 ಟೂರ್ನಿಯು ಇಂದಿನಿಂದ (ನ.19) ಶುರುವಾಗಲಿದೆ. ಕತಾರ್‌ನ ದೋಹಾದಲ್ಲಿ ನಡೆಯಲಿರುವ ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಬಾಂಗ್ಲಾದೇಶ್ ‘ಎ’ ಮತ್ತು ಹಾಂಗ್ ಕಾಂಗ್ ತಂಡಗಳು ಮುಖಾಮುಖಿಯಾಗಲಿವೆ. ಇನ್ನು ಭಾರತ ‘ಎ’ ತಂಡವು ನಾಳೆ (ನ.20) ನೇಪಾಳ ವಿರುದ್ಧ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಪಂದ್ಯದ ಬಳಿಕ ಟೀಮ್ ಇಂಡಿಯಾ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ ಎಂಬುದು ವಿಶೇಷ.

ಭಾರತ ಎ vs ಪಾಕಿಸ್ತಾನ್ ಎ ಪಂದ್ಯ ಯಾವಾಗ?

ಭಾರತ ಎ vs ಪಾಕಿಸ್ತಾನ್ ಎ ನಡುವಣ ಹೈವೋಲ್ಟೇಜ್ ಪಂದ್ಯವು ಭಾನುವಾರ ನಡೆಯಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3.30 ಕ್ಕೆ ಶುರುವಾಗಲಿದೆ.

Loading...
  •  ಪಂದ್ಯ: ಭಾರತ ‘ಎ’ vs ಪಾಕಿಸ್ತಾನ ‘ಎ’ (8ನೇ ಪಂದ್ಯ, ಬಿ ಗುಂಪು)
  •  ದಿನಾಂಕ: ಭಾನುವಾರ, ನವೆಂಬರ್ 22, 2026
  • ಸಮಯ: ಭಾರತೀಯ ಕಾಲಮಾನ ಮಧ್ಯಾಹ್ನ 3:30ಕ್ಕೆ ಪಂದ್ಯ ಆರಂಭವಾಗಲಿದೆ
  • ಸ್ಥಳ: ವೆಸ್ಟ್ ಎಂಡ್ ಪಾರ್ಕ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ಕತಾರ್.
  •  ಮಾದರಿ: 50 ಓವರ್‌ಗಳ ಏಕದಿನ ಪಂದ್ಯ.

ಯಾವ ಚಾನೆಲ್‌ನಲ್ಲಿ ನೇರ ಪ್ರಸಾರ?

ಭಾರತದಲ್ಲಿರುವ ಕ್ರಿಕೆಟ್ ಪ್ರೇಮಿಗಳು ಈ ಪಂದ್ಯವನ್ನು ಟಿವಿ ಮತ್ತು ಮೊಬೈಲ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.

  • ಟಿವಿ ನೇರ ಪ್ರಸಾರ: ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ಚಾ ಚಾನೆಲ್‌ಗಳಲ್ಲಿ ಪಂದ್ಯದ ನೇರ ಪ್ರಸಾರವಿರಲಿದೆ.
  • ಲೈವ್ ಸ್ಟ್ರೀಮಿಂಗ್: ಮೊಬೈಲ್ ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ಸೋನಿ ಲಿವ್ ಆ್ಯಪ್ ಮತ್ತು ವೆಬ್‌ಸೈಟ್ ಮೂಲಕ ಲೈವ್ ವೀಕ್ಷಿಸಬಹುದು.

ಭಾರತ ‘ಎ’ ತಂಡ: ತಿಲಕ್ ವರ್ಮಾ (ನಾಯಕ), ಆಯುಷ್ ಬದೋನಿ, ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಪ್ರಭ್‌ಸಿಮ್ರನ್ ಸಿಂಗ್ (ವಿಕೆಟ್ ಕೀಪರ್), ರಿಂಕು ಸಿಂಗ್, ಕುಮಾರ್ ಕುಶಾಗ್ರ (ವಿಕೆಟ್ ಕೀಪರ್), ಸೂರ್ಯಾಂಶ್ ಶೆಡ್ಗೆ, ಶಹಬಾಝ್ ಅಹ್ಮದ್, ವಿಪ್ರಜ್ ನಿಗಮ್, ಹರ್ಷ್ ದುಬೆ, ತನುಷ್ ಕೋಟ್ಯಾನ್, ಹರ್ಷಿತ್ ರಾಣಾ, ಪ್ರಿನ್ಸ್ ಯಾದವ್ ಮತ್ತು ಅರ್ಷದ್ ಖಾನ್.

ಇದನ್ನೂ ಓದಿ: ಸ್ನಿಕೋಮೀಟರ್‌ ಎಡವಟ್ಟು; ಅಂಪೈರ್ ವಿರುದ್ಧ ಶುಭ್‌ಮನ್ ಗಿಲ್ ಕೆಂಡಾಮಂಡಲ!

ಪಾಕಿಸ್ತಾನ ‘ಎ’ ತಂಡ: ಅಬ್ದುಲ್ ಸಮದ್ (ನಾಯಕ), ಅಹ್ಮದ್ ದಾನಿಯಾಲ್, ಆಕಿಫ್ ಜಾವೇದ್, ಡ್ಯಾನಿಶ್ ಅಝೀಝ್, ಫರ್ಹಾನ್ ಯೂಸುಫ್, ಹೈದರ್ ಅಲಿ, ಹಸನ್ ನವಾಝ್, ಮಾಝ್ ಸದಾಕತ್, ಮೊಹಮ್ಮದ್ ಹಸ್ನೈನ್, ಮೊಹಮ್ಮದ್ ಇಮ್ರಾನ್ ರಾಂಧವಾ, ರೋಹೈಲ್ ನಝೀರ್ (ವಿಕೆಟ್ ಕೀಪರ್), ಸಾದ್ ಮಸೂದ್, ಶಹಝೈಬ್ ಖಾನ್, ಶಮಿಲ್ ಹುಸೇನ್ ಮತ್ತು ಸುಫ್ಯಾನ್ ಮೊಕಿಮ್.

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us