ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಸೆಮಿಫೈನಲ್‌ಗೆ ಮುಹೂರ್ತ ಫಿಕ್ಸ್; ಭಾರತಕ್ಕೆ ಲಂಕಾ ಸವಾಲು

ಎಸಿಸಿ ಪುರುಷರ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಿಯಲ್ಲಿ ಭಾರತ ಎ ತಂಡ ಸೆಮಿಫೈನಲ್ ಪ್ರವೇಶಿಸಿದೆ. ವೈಭವ್ ಸೂರ್ಯವಂಶಿ ಯುಎಇ ವಿರುದ್ಧ 53 ಎಸೆತಗಳಲ್ಲಿ 204 ರನ್ ಸಿಡಿಸಿ ದಾಖಲೆ ಬರೆದರು. ಗ್ರೂಪ್ ಬಿ ಯಲ್ಲಿ ಎರಡನೇ ಸ್ಥಾನ ಪಡೆದಿರುವ ಭಾರತ ಎ, ಮೊದಲ ಸೆಮಿಫೈನಲ್‌ನಲ್ಲಿ ಶ್ರೀಲಂಕಾ ಎ ತಂಡವನ್ನು ನವೆಂಬರ್ 26 ರಂದು ಎದುರಿಸಲಿದೆ. ಈ ಭರ್ಜರಿ ಗೆಲುವು ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ.

ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಸೆಮಿಫೈನಲ್‌ಗೆ ಮುಹೂರ್ತ ಫಿಕ್ಸ್; ಭಾರತಕ್ಕೆ ಲಂಕಾ ಸವಾಲು
Asia Cup Rising Stars 2026

Updated on: Nov 25, 2026 | 3:19 PM

ಎಸಿಸಿ ಪುರುಷರ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಿಯಲ್ಲಿ ಭಾರತ ಎ ತಂಡ ಸೆಮಿಫೈನಲ್ ಪ್ರವೇಶಿಸಿದೆ. ಗ್ರೂಪ್ ಬಿ ಅಂಕಪಟ್ಟಿಯಲ್ಲಿ ಪಾಕಿಸ್ತಾನ ಎ ತಂಡದ ಬಳಿಕ ಎರಡನೇ ಸ್ಥಾನ ಪಡೆದಿರುವ ತಿಲಕ್ ವರ್ಮಾ ಪಡೆ, ಇದೀಗ ಮೊದಲ ಸೆಮಿಫೈನಲ್‌ನಲ್ಲಿ ಶ್ರೀಲಂಕಾ ಎ ತಂಡವನ್ನು ಎದುರಿಸಲಿದೆ. ಇತ್ತ ಇದೇ ಗುಂಪಿನಲ್ಲಿ ಅಗ್ರಸ್ಥಾನ ಪಡೆದುಕೊಂಡಿರುವ ಪಾಕಿಸ್ತಾನ ಎರಡನೇ ಸೆಮಿಫೈನಲ್​ನಲ್ಲಿ ಎ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ಬಾಂಗ್ಲಾದೇಶ ಎ ತಂಡವನ್ನು ಎದುರಿಸಲಿದೆ.

ಮಂಗಳವಾರ ನಡೆದ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಎ ತಂಡ ಯುಎಇ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಯುಎಇ ತಂಡ ಹರಪ್ರೀತ್ ಸಿಂಗ್ ಅವರ 144 ಎಸೆತಗಳಲ್ಲಿ 130 ರನ್‌ಗಳ ನೆರವಿನಿಂದ 8 ವಿಕೆಟ್ ನಷ್ಟಕ್ಕೆ 249 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಭಾರತ ಎ ತಂಡ ಕೇವಲ 14.2 ಓವರ್‌ಗಳಲ್ಲೇ ಜಯದ ನಗೆ ಬೀರಿತು. ಭಾರತದ ಪರ ಅಬ್ಬರಿಸಿದ ವೈಭವ್ ಸೂರ್ಯವಂಶಿ ಕೇವಲ 53 ಎಸೆತಗಳಲ್ಲಿ 204 ರನ್ ಸಿಡಿಸಿದರು. ಅವರ ಈ ಸ್ಫೋಟಕ ಇನ್ನಿಂಗ್ಸ್‌ನಲ್ಲಿ 7 ಬೌಂಡರಿ ಹಾಗೂ ಬರೋಬ್ಬರಿ 28 ಸಿಕ್ಸರ್‌ಗಳು ಸೇರಿದ್ದವು.

Loading...

ಸೆಮಿಫೈನಲ್ ಕದನದ ವಿವರ

ಈ ಭರ್ಜರಿ ಗೆಲುವಿನೊಂದಿಗೆ ಭಾರತ ಎ ತಂಡದ ನೆಟ್ ರನ್‌ರೇಟ್ 3.523ಕ್ಕೆ ಏರಿಕೆಯಾಯಿತು. ಟೂರ್ನಿಯಲ್ಲಿ ಆಡಿರುವ ತಂಡಗಳ ಪೈಕಿ ಇದು ಅತ್ಯಧಿಕ ನೆಟ್ ರನ್‌ರೇಟ್ ಆಗಿದೆ. ಆದರೂ ಅಂಕಪಟ್ಟಿಯಲ್ಲಿ ಪಾಕಿಸ್ತಾನ ಎ ತಂಡವನ್ನು ಹಿಂದಿಕ್ಕಲು ಭಾರತಕ್ಕೆ ಸಾಧ್ಯವಾಗಲಿಲ್ಲ. ಪಾಕಿಸ್ತಾನ ಆಡಿದ ಮೂರೂ ಪಂದ್ಯಗಳನ್ನು ಗೆದ್ದು ಗ್ರೂಪ್ ಬಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಭಾನುವಾರ ನಡೆದ ಪಂದ್ಯದಲ್ಲಿ ಭಾರತ ಎ ತಂಡದ ವಿರುದ್ಧ 48 ರನ್‌ಗಳ ಜಯ ಸಾಧಿಸಿದ್ದು ಇದೇ ಪಾಕಿಸ್ತಾನ. ಇನ್ನು ಗ್ರೂಪ್ ಎನಲ್ಲಿ ಶ್ರೀಲಂಕಾ ಎ ತಂಡ ಆಡಿದ ಮೂರೂ ಪಂದ್ಯಗಳನ್ನು ಗೆದ್ದು 6 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದಿದೆ. ಬಾಂಗ್ಲಾದೇಶ ಎ ತಂಡ 4 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಹೀಗಾಗಿ ಮೊದಲ ಸೆಮಿಫೈನಲ್‌ನಲ್ಲಿ ಗ್ರೂಪ್ ಎ ಚಾಂಪಿಯನ್ ಶ್ರೀಲಂಕಾ ಎ ಮತ್ತು ಗ್ರೂಪ್ ಬಿ ರನ್ನರ್ ಅಪ್ ಭಾರತ ಎ ಮುಖಾಮುಖಿಯಾಗಲಿವೆ.

ಮೈದಾನದ ಮೂಲೆ ಮೂಲೆಗೂ ಚೆಂಡಿನ ದರ್ಶನ; ವೈಭವ್ ಬಾರಿಸಿದ 28 ಸಿಕ್ಸರ್‌ಗಳ ವಿಡಿಯೋ ರಿಲೀಸ್

ಭಾರತ ಎ vs ಶ್ರೀಲಂಕಾ ಎ ಸೆಮಿಫೈನಲ್ ಯಾವಾಗ? ಎಲ್ಲಿ?

ಭಾರತ ಎ ಮತ್ತು ಶ್ರೀಲಂಕಾ ಎ ನಡುವಿನ ಮೊದಲ ಸೆಮಿಫೈನಲ್ ಪಂದ್ಯ ನವೆಂಬರ್ 26ರ ಗುರುವಾರ ನಡೆಯಲಿದೆ. ದೋಹಾದ ವೆಸ್ಟ್ ಎಂಡ್ ಪಾರ್ಕ್ ಇಂಟರ್‌ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ಆಯೋಜನೆಯಾಗಿದ್ದು, ಭಾರತೀಯ ಕಾಲಮಾನ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.

ಎರಡನೇ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶ ಎ ಮತ್ತು ಪಾಕಿಸ್ತಾನ ಎ ತಂಡಗಳು ನವೆಂಬರ್ 27ರಂದು ಮುಖಾಮುಖಿಯಾಗಲಿವೆ. ಈ ಎರಡೂ ಪಂದ್ಯಗಳಲ್ಲಿ ಗೆಲ್ಲುವ ತಂಡಗಳು ನವೆಂಬರ್ 29ರಂದು ನಡೆಯಲಿರುವ ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಸೆಣಸಾಡಲಿವೆ.

ಭಾರತ ಎ ತಂಡದ ಪರ ವೈಭವ್ ಸೂರ್ಯವಂಶಿ ದಾಖಲೆಯ ದ್ವಿಶತಕ ಸಿಡಿಸಿರುವುದು ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ಇದೀಗ ಶ್ರೀಲಂಕಾ ಎ ವಿರುದ್ಧವೂ ಇದೇ ರೀತಿಯ ಪ್ರದರ್ಶನ ನೀಡುವ ಮೂಲಕ ಫೈನಲ್ ಪ್ರವೇಶಿಸುವ ಗುರಿಯನ್ನು ಭಾರತ ಹೊಂದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೃಥ್ವಿಶಂಕರ

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.

Read More
Loading...
Unable to load recommendations.
Follow Us