AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯೇ ಭಾರತ- ಅಫ್ಘನ್ 2ನೇ ಟಿ20 ಪಂದ್ಯ; ಎಷ್ಟು ಗಂಟೆಗೆ ಆರಂಭ?

ಅಫ್ಘಾನಿಸ್ತಾನ ವಿರುದ್ಧದ ಮೊದಲ T20 ಪಂದ್ಯ ಗೆದ್ದಿರುವ ಭಾರತ, ಸರಣಿ ವಶಪಡಿಸಿಕೊಳ್ಳಲು 2ನೇ ಪಂದ್ಯಕ್ಕೆ ಸಿದ್ಧವಾಗಿದೆ. ಸೆಪ್ಟೆಂಬರ್ 15ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಸಂಜೆ 7 ಗಂಟೆಗೆ ಈ ಪಂದ್ಯ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ಮತ್ತು ಫ್ಯಾನ್‌ಕೋಡ್‌ನಲ್ಲಿ ನೇರ ಪ್ರಸಾರ ವೀಕ್ಷಿಸಬಹುದು. ಉಭಯ ತಂಡಗಳ ಸಂಪೂರ್ಣ ಮಾಹಿತಿ, ಪಂದ್ಯದ ಕುರಿತು ವಿವರ ಇಲ್ಲಿದೆ.

ನಾಳೆಯೇ ಭಾರತ- ಅಫ್ಘನ್ 2ನೇ ಟಿ20 ಪಂದ್ಯ; ಎಷ್ಟು ಗಂಟೆಗೆ ಆರಂಭ?
ಭಾರತ Vs ಅಫ್ಘಾನಿಸ್ತಾನ
ಪೃಥ್ವಿಶಂಕರ
|

Updated on: Sep 14, 2026 | 9:32 PM

Share

ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ಗೆಲುವಿನೊಂದಿಗೆ ಆರಂಭಿಸಿದೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಸುಲಭ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 156 ರನ್‌ ಕಲೆಹಾಕಿದರೆ, ಭಾರತ ಕೇವಲ 13.4 ಓವರ್‌ಗಳಲ್ಲಿ ಗುರಿ ಮುಟ್ಟಿತು. ಈ ಮೂಲಕ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿತು. ಇದೀಗ ಎರಡನೇ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಸರಣಿಯನ್ನು ತನ್ನ ಖಾತೆಗೆ ಹಾಕಿಕೊಳ್ಳಲು ಟೀಂ ಇಂಡಿಯಾ ಪ್ರಯತ್ನಿಸಲಿದೆ. ಇತ್ತ ಅಫ್ಘಾನಿಸ್ತಾನ ಈ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲಗೊಳಿಸುವ ಇರಾದೆಯಲ್ಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 2ನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 2ನೇ ಟಿ20 ಪಂದ್ಯ ಸೆಪ್ಟೆಂಬರ್ 15 ರ ಮಂಗಳವಾರ ನಡೆಯಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 2ನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 2ನೇ ಟಿ20 ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 2ನೇ ಟಿ20 ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 2ನೇ ಟಿ20 ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 2ನೇ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 2ನೇ ಟಿ20 ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಹಾಗೆಯೇ ಫ್ಯಾನ್‌ಕೋಡ್ ಅಪ್ಲಿಕೇಶನ್​ನಲ್ಲಿಯೂ ಪಂದ್ಯವನ್ನು ನೇರವಾಗಿ ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ತಿಲಕ್ ವರ್ಮಾ, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಯಶ್ ಠಾಕೂರ್.

ಅಫ್ಘಾನಿಸ್ತಾನ ತಂಡ: ಇಬ್ರಾಹಿಂ ಝದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ನೂರ್ ರಹಮಾನ್, ಸೇದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ಅಜ್ಮತುಲ್ಲಾ ಒಮರ್ಜಾಯ್, ಗುಲ್ಬದಿನ್ ನೈಬ್, ಮೊಹಮ್ಮದ್ ನಬಿ, ರಶೀದ್ ಖಾನ್, ನಂಗ್ಯಾಲ್ ಖರೋಟಿ, ನೂರ್ ಅಹ್ಮದ್, ಮುಜೀಬ್ ಉರ್ ರೆಹಮಾನ್, ಫಜಲ್ಹಕ್ ಫಾರೂಕಿ, ಅಬ್ದುಲ್ಲಾ ಅಹ್ಮದ್ಜಾಯ್, ನವೀನ್-ಉಲ್-ಹಕ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಷ್ಯಾದ ತೈಲ ಸಂಸ್ಕರಣಾಗಾದ ಮೇಲೆ ಉಕ್ರೇನ್​ನ ಡ್ರೋನ್ ದಾಳಿ
ರಷ್ಯಾದ ತೈಲ ಸಂಸ್ಕರಣಾಗಾದ ಮೇಲೆ ಉಕ್ರೇನ್​ನ ಡ್ರೋನ್ ದಾಳಿ
ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಯಾರು
ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಯಾರು
ದೇವೇಗೌಡರ ಭೇಟಿಯಾದ ಯಡಿಯೂರಪ್ಪ: ಕುತೂಹಲ ಮೂಡಿಸಿದ ಮಾಜಿ CM ನಡೆ
ದೇವೇಗೌಡರ ಭೇಟಿಯಾದ ಯಡಿಯೂರಪ್ಪ: ಕುತೂಹಲ ಮೂಡಿಸಿದ ಮಾಜಿ CM ನಡೆ
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ?
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ?
‘ಪ್ರೇಮದ ಊರಲಿ ಪಾರ್ಟ್ 2’ ಬರುತ್ತ? ನೇರವಾಗಿ ಉತ್ತರ ನೀಡಿದ ನಿರ್ದೇಶಕ ಮನೋಜ್
‘ಪ್ರೇಮದ ಊರಲಿ ಪಾರ್ಟ್ 2’ ಬರುತ್ತ? ನೇರವಾಗಿ ಉತ್ತರ ನೀಡಿದ ನಿರ್ದೇಶಕ ಮನೋಜ್
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಶೋಕ್​​ ಸವಾಲು
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಶೋಕ್​​ ಸವಾಲು
‘ಕೆಲಸ ಮಾಡಲ್ಲ ಅಂದ್ರೆ ಮಾಡಲ್ಲ’: ಸೌಂದರ್ಯಾ ಜೊತೆ ಗಗನ್ ಜಗಳ
‘ಕೆಲಸ ಮಾಡಲ್ಲ ಅಂದ್ರೆ ಮಾಡಲ್ಲ’: ಸೌಂದರ್ಯಾ ಜೊತೆ ಗಗನ್ ಜಗಳ
ಬಿಗ್ ಬಾಸ್ ಮನೆಯಲ್ಲಿ ಸೋನಿಕಾ, ತಾಂಡವ್, ಗಗನ್ ಮದುವೆ ಮಾತುಕತೆ
ಬಿಗ್ ಬಾಸ್ ಮನೆಯಲ್ಲಿ ಸೋನಿಕಾ, ತಾಂಡವ್, ಗಗನ್ ಮದುವೆ ಮಾತುಕತೆ
ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರ: ಪೊಲೀಸರ ಜೊತೆಗೆ ಫೀಲ್ಡಿಗಿಳಿದ ಸಚಿವ
ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರ: ಪೊಲೀಸರ ಜೊತೆಗೆ ಫೀಲ್ಡಿಗಿಳಿದ ಸಚಿವ
​​ಸ್ಟಿಂಗ್ ಆಪರೇಷನ್​ ಕೇಸಿಗೆ ಸ್ಫೋಟಕ ತಿರುವು:ಕುತೂಹಲ ಮೂಡಿಸಿದ ಸಿಸಿಬಿ ನಡೆ
​​ಸ್ಟಿಂಗ್ ಆಪರೇಷನ್​ ಕೇಸಿಗೆ ಸ್ಫೋಟಕ ತಿರುವು:ಕುತೂಹಲ ಮೂಡಿಸಿದ ಸಿಸಿಬಿ ನಡೆ