AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್‌; ಈ ಪಂದ್ಯದಲ್ಲೂ ವೈಭವ್​ಗೆ ಸಿಗಲಿಲ್ಲ ಅವಕಾಶ

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 3ನೇ ಹಾಗೂ ಅಂತಿಮ T20 ಪಂದ್ಯ ನವದೆಹಲಿಯಲ್ಲಿ ನಡೆಯುತ್ತಿದೆ. ಸರಣಿ ಈಗಾಗಲೇ ಗೆದ್ದಿರುವ ಭಾರತ, ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕ್ಲೀನ್ ಸ್ವೀಪ್ ಸಾಧಿಸುವ ಗುರಿ ಹೊಂದಿದೆ. ಟಾಸ್ ಗೆದ್ದ ಅಫ್ಘಾನಿಸ್ತಾನ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ. ಯಶ್ ಠಾಕೂರ್ ಆಡುವ ಹನ್ನೊಂದರ ಬಳಗ ಸೇರಿದ್ದು, ಪಂದ್ಯ ರೋಚಕವಾಗುವ ನಿರೀಕ್ಷೆಯಿದೆ.

ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್‌; ಈ ಪಂದ್ಯದಲ್ಲೂ ವೈಭವ್​ಗೆ ಸಿಗಲಿಲ್ಲ ಅವಕಾಶ
ವೈಭವ್ ಸೂರ್ಯವಂಶಿImage Credit source: BCCI X
ಪೃಥ್ವಿಶಂಕರ
|

Updated on:Sep 17, 2026 | 7:26 PM

Share

ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಟಿ20 ಸರಣಿಯಲ್ಲಿ ಕೊನೆಯ ಬಾರಿಗೆ ಮುಖಾಮುಖಿಯಾಗುತ್ತಿವೆ. ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯವು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ, ಭಾರತ ತಂಡವು ಮೊದಲ ಮತ್ತು ಎರಡನೇ ಪಂದ್ಯಗಳನ್ನು ಭರ್ಜರಿಯಾಗಿ ಗೆದ್ದು ಸರಣಿಯನ್ನು ವಶಪಡಿಸಿಕೊಂಡಿದೆ. ಈಗ, ತಂಡವು ಕ್ಲೀನ್ ಸ್ವೀಪ್ ಪೂರ್ಣಗೊಳಿಸುವ ಅವಕಾಶವನ್ನು ಹೊಂದಿದೆ. ಇತ್ತ ಆತಿಥೇಯ ಅಫ್ಘಾನಿಸ್ತಾನ ಕೊನೆಯ ಪಂದ್ಯವನ್ನಾದರೂ ಗೆದ್ದು ಸರಣಿಯನ್ನು ಕೊನೆಗೊಳಿಸಲು ನೋಡುತ್ತಿದೆ.

ಟಾಸ್ ಗೆದ್ದ ಅಫ್ಘಾನಿಸ್ತಾನ

ಮೂರನೇ ಟಿ20ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ. ಟೀಂ ಇಂಡಿಯಾ ಸರಣಿ ಗೆದ್ದಿರುವ ಕಾರಣ ಈ ಪಂದ್ಯದ ಆಡುವ ಹನ್ನೊಂದರ ಬಳಗದಲ್ಲಿ ಸಾಕಷ್ಟು ಬದಲಾವಣೆಗಳನ್ನು ನಿರೀಕ್ಷಿಸಲಾಗಿತ್ತು. ಮೊದಲೆರಡು ಪಂದ್ಯಗಳಲ್ಲಿ ಬೆಂಚ್ ಕಾದಿದ್ದ ಆಟಗಾರರಿಗೆ ಆಡುವ ಅವಕಾಶ ಸಿಗಬಹುದು ಎನ್ನಲಾಗುತ್ತಿತ್ತು. ಆದರೆ ತಂಡದಲ್ಲಿ ಏಕೈಕ ಬದಲಾವಣೆಯನ್ನು ಮಾಡಲಾಗಿದ್ದು, ವೇಗಿ ಅರ್ಷದೀಪ್ ಬದಲಿಗೆ ಯಶ್ ಠಾಕೂರ್​ಗೆ ತಂಡದಲ್ಲಿ ಆಡುವ ಅವಕಾಶ ನೀಡಲಾಗಿದೆ. ಇದರರ್ಥ ವೈಭವ್ ಸೂರ್ಯವಂಶಿಗೆ ಈ ಪಂದ್ಯದಲ್ಲೂ ಆಡುವ ಅವಕಾಶ ಸಿಗಲಿಲ್ಲ.

ಉಭಯ ತಂಡಗಳು

ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ರವಿ ಬಿಷ್ಣೋಯ್ (ವರುಣ್ ಚಕ್ರವರ್ತಿ ಬದಲಿಗೆ), ಜಸ್ಪ್ರೀತ್ ಬುಮ್ರಾ ಮತ್ತು ಯಶ್ ಠಾಕೂರ್.

ಅಫ್ಘಾನಿಸ್ತಾನ ತಂಡ: ಇಬ್ರಾಹಿಂ ಜದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಸೇದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ನೂರ್ ಉಲ್ ರಹಮಾನ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್, ಅಬ್ದುಲ್ಲಾ ಅಹ್ಮದ್‌ಜಾಯ್, ಮುಜೀಬ್ ಉರ್ ರಹಮಾನ್, ಫಜಲ್‌ಹಕ್ ಫಾರೂಕಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:22 pm, Thu, 17 September 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್