AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಅರ್ಷದೀಪ್ ಮಾತು ಕೇಳದೆ ಕೆಟ್ಟ ಗಿಲ್; 48 ಎಸೆತಗಳಲ್ಲಿ ಶತಕ ಬಾರಿಸಿದ ಗುರ್ಬಾಜ್

Rahmanullah Gurbaz century: ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ರಹಮಾನುಲ್ಲಾ ಗುರ್ಬಾಜ್ ಕೇವಲ 48 ಎಸೆತಗಳಲ್ಲಿ ಸ್ಫೋಟಕ ಶತಕ ಬಾರಿಸಿದರು. ಶುಭ್​ಮನ್ ಗಿಲ್ DRS ತೆಗೆದುಕೊಳ್ಳುವ ಅವಕಾಶ ಕಳೆದುಕೊಂಡಿದ್ದರಿಂದ 14 ರನ್​ಗಳಲ್ಲಿದ್ದ ಗುರ್ಬಾಜ್ ಜೀವದಾನ ಪಡೆದರು. ಈ ತಪ್ಪಿನಿಂದ ಭಾರತಕ್ಕೆ 91 ರನ್​ಗಳ ನಷ್ಟವಾಯಿತು. ಧರ್ಮಶಾಲಾದಲ್ಲಿ ಮಳೆಯಿಂದಾಗಿ 25 ಓವರ್​ಗಳಿಗೆ ಸೀಮಿತಗೊಂಡ ಪಂದ್ಯದಲ್ಲಿ ಇದು ನಿರ್ಣಾಯಕವಾಯಿತು. ಗಿಲ್ ನಿರ್ಧಾರವು ಪಂದ್ಯದ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

IND vs AFG: ಅರ್ಷದೀಪ್ ಮಾತು ಕೇಳದೆ ಕೆಟ್ಟ ಗಿಲ್; 48 ಎಸೆತಗಳಲ್ಲಿ ಶತಕ ಬಾರಿಸಿದ ಗುರ್ಬಾಜ್
Rahmanullah Gurbaz
ಪೃಥ್ವಿಶಂಕರ
|

Updated on:Jun 13, 2026 | 7:36 PM

Share

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ. ಮಳೆಯಿಂದ ತಡವಾಗಿ ಆರಂಭವಾದ ಪಂದ್ಯವನ್ನು ತಲಾ 25 ಓವರ್​ಗಳಿಗೆ ನಿಗದಿಪಡಿಸಲಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡದ ಪರ ಅನುಭವಿ ಆರಂಭಿಕ ರಹಮಾನುಲ್ಲಾ ಗುರ್ಬಾಜ್ (Rahmanullah Gurbaz) ಸ್ಫೋಟಕ ಬ್ಯಾಟಿಂಗ್‌ ಮೂಲಕ ಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 48 ಎಸೆತಗಳಲ್ಲಿ ಶತಕ ಬಾರಿಸಿದ ಗುರ್ಬಾಜ್ ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 8 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್‌ಗಳನ್ನು ಬಾರಿಸಿದರು. ಆದಾಗ್ಯೂ ರಹಮಾನುಲ್ಲಾ ಗುರ್ಬಾಜ್ ಅವರ ಈ ಶತಕದ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಮಾಡಿದ ಎಡವಟ್ಟು ಕೂಡ ಪ್ರಮುಖ ಪಾತ್ರವಹಿಸಿತು.

ಡಿಆರ್​ಎಸ್ ತೆಗೆದುಕೊಳ್ಳದ ಗಿಲ್

ವಾಸ್ತವವಾಗಿ ಟಾಸ್ ಸೋತು ಬ್ಯಾಟಿಂಗ್‌ ಆರಂಭಿಸಿದ ಅಫ್ಘಾನಿಸ್ತಾನ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡ ಕೇವಲ 16 ರನ್​ಗಳಿಗೆ 2 ವಿಕೆಟ್‌ಗಳನ್ನು ಕಳೆದುಕೊಂಡಿತು. ಟೀಂ ಇಂಡಿಯಾ ಪರ ಪಾದಾರ್ಪಣೆಯ ಪಂದ್ಯವನ್ನಾಡಿದ ಗುರ್ನೂರ್ ಬ್ರಾರ್ ತಾವು ಬೌಲ್ ಮಾಡಿದ ಮೊದಲ ಓವರ್​ನಲ್ಲೇ ಇಬ್ರಾಹಿಂ ಜದ್ರಾನ್ ಅವರ ವಿಕೆಟ್ ಉರುಳಿಸಿದರು. ಆ ನಂತರ ಮೂರನೇ ಓವರ್​ನಲ್ಲಿ ದಾಳಿಗಿಳಿದ ಅರ್ಷದೀಪ್ ಸಿಂಗ್ ಓವರ್​ನ ಮೂರನೇ ಎಸೆತದಲ್ಲಿ ಸೆದಿಕುಲ್ಲಾ ಅಟಲ್ ಅವರ ವಿಕೆಟ್ ಉರುಳಿಸಿದರು. ಅದೇ ಓವರ್​ನಲ್ಲಿ ಮತ್ತೊಂದು ವಿಕೆಟ್ ಪಡೆಯುವ ಅವಕಾಶ ಟೀಂ ಇಂಡಿಯಾಕ್ಕಿತ್ತು. ಆದರೆ ನಾಯಕ ಶುಭ್​ಮನ್ ಗಿಲ್ ಮಾಡಿದ ಎಡವಟ್ಟು ತಂಡಕ್ಕೆ ತುಂಬಾ ದುಬಾರಿಯಾಯಿತು.

ಅರ್ಷದೀಪ್ ಸಿಂಗ್ ಎಸೆದ ಮೂರನೇ ಓವರ್​ನ 5ನೇ ಎಸೆತದಲ್ಲಿ ರಹಮಾನುಲ್ಲಾ ಗುರ್ಬಾಜ್ ಅವರ ವಿಕೆಟ್ ಪಡೆಯುವ ಅವಕಾಶವಿತ್ತು. ಅರ್ಷದೀಪ್ ಎಸೆದ 5ನೇ ಎಸೆತ ಗುರ್ಬಾಜ್ ಅವರ ಪ್ಯಾಡ್​ಗೆ ತಗುಲಿತು. ಕೂಡಲೇ ಅರ್ಷದೀಪ್ ವಿಕೆಟ್​ಗಾಗಿ ಅಂಪೈರ್ ಬಳಿ ಮನವಿ ಮಾಡಿದರು. ಆದರೆ ಅಂಪೈರ್ ಔಟ್ ನೀಡಲಿಲ್ಲ. ಇತ್ತ ಅರ್ಷದೀಪ್ ಡಿಆರ್​ಎಸ್ ತೆಗೆದುಕೊಳ್ಳುವಂತೆ ನಾಯಕ ಗಿಲ್ ಬಳಿ ಮನವಿ ಮಾಡಿದರು. ಆದರೆ ಶುಭ್​ಮನ್ ಗಿಲ್ ಅರ್ಷದೀಪ್ ಸಿಂಗ್ ಮಾತು ಕೇಳದೆ ವಿಕೆಟ್ ಕೀಪರ್ ಇಶಾನ್ ಕಿಶನ್ ಹಾಗೂ ಅನುಭವಿ ರೋಹಿತ್ ಶರ್ಮಾ ಅವರ ಮಾತು ಕೇಳಿ ಡಿಆರ್​ಎಸ್ ತೆಗೆದುಕೊಳ್ಳಲಿಲ್ಲ. ಕಿಶನ್ ಹಾಗೂ ರೋಹಿತ್, ಚೆಂಡು ಬ್ಯಾಟ್​ಗೆ ತಾಗಿದೆ ಎಂದು ಸನ್ನೆ ಮಾಡಿದರು. ಇದರಿಂದ ಗಿಲ್ ಡಿಆರ್​ಎಸ್ ತೆಗೆದುಕೊಳ್ಳಲಿಲ್ಲ.

IND vs AFG: ಮೊದಲ ಏಕದಿನ ಪಂದ್ಯದ ನಡುವೆ ಟೀಂ ಇಂಡಿಯಾಕ್ಕೆ ಸಿಹಿ ಸುದ್ದಿ

11 ರನ್​ಗೆ ಸಿಕ್ಕಿತು ಜೀವದಾನ

ಆದರೆ ಆ ನಂತರ ತೋರಿಸಿದ ರಿಪ್ಲೆಯಲ್ಲಿ ಚೆಂಡು ಪ್ಯಾಡ್​ಗೆ ತಾಗಿರುವುದು ಸ್ಪಷ್ಟವಾಗಿ ಗೋಚರಿಸಿತು. ಇದನ್ನು ನೋಡಿದ ಅರ್ಷದೀಪ್ ಅಸಮಾಧಾನ ಹೊರಹಾಕಿದರು. ಆ ಸಮಯದಲ್ಲಿ ಗುರ್ಬಾಜ್ ಕೇವಲ 11 ರನ್ ಬಾರಿಸ ಆಡುತ್ತಿದ್ದರು. ಟೀಂ ಇಂಡಿಯಾ ಮಾಡಿದ ಎಡವಟ್ಟಿನಿಂದ ಜೀವದಾನ ಪಡೆದ ಗುರ್ಬಾಜ್ ಕೇವಲ 48 ಎಸೆತಗಳಲ್ಲಿ ಸ್ಫೋಟಕ ಶತಕ ಬಾರಿಸಿದರು. ಅಂದರೆ ಭಾರತ ತಂಡದ ಒಂದು ತಪ್ಪು ನಿರ್ಧಾರದಿಂದ 91 ರನ್​ಗಳ ದಂಡ ತೆರಬೇಕಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:26 pm, Sat, 13 June 26

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!