AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮೈದಾನದಲ್ಲಿ ಕಾಣಿಸಿಕೊಳ್ಳುವುದು ಯಾವಾಗ?

Rohit Sharma and Virat Kohli Practice: ಐಪಿಎಲ್ ನಂತರ ಟೀಂ ಇಂಡಿಯಾ ಅಫ್ಘಾನಿಸ್ತಾನ ವಿರುದ್ಧದ ಸರಣಿಯೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಜೂನ್ 9 ರಿಂದ ಮುಲ್ಲನ್‌ಪುರದಲ್ಲಿ ಅಭ್ಯಾಸ ನಡೆಸಲಿದ್ದು, ಜೂನ್ 13 ರಂದು ಧರ್ಮಶಾಲಾದಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ಈ ಸರಣಿಯು 2027ರ ವಿಶ್ವಕಪ್‌ಗೆ ಪ್ರಮುಖ ಸಿದ್ಧತೆಯಾಗಿದ್ದು, ಇಬ್ಬರೂ ಆಟಗಾರರ ಫಿಟ್‌ನೆಸ್ ಮತ್ತು ಫಾರ್ಮ್ ನಿರ್ಣಾಯಕವಾಗಿದೆ.

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮೈದಾನದಲ್ಲಿ ಕಾಣಿಸಿಕೊಳ್ಳುವುದು ಯಾವಾಗ?
Rohit, KohliImage Credit source: PTI
ಪೃಥ್ವಿಶಂಕರ
|

Updated on:Jun 03, 2026 | 7:13 PM

Share

ಐಪಿಎಲ್ (IPL) ಮುಗಿದ ಬಳಿಕ ಇದೀಗ ಟೀಂ ಇಂಡಿಯಾ ಮತ್ತೆ ಅಂತರರಾಷ್ಟ್ರೀಯ ಕ್ರಿಕೆಟ್​ನತ್ತ ಮುಖ ಮಾಡಿದೆ. ಅದರಂತೆ ಟೆಸ್ಟ್ ಮತ್ತು ಏಕದಿನ ಸರಣಿಗಾಗಿ ಅಫ್ಘಾನಿಸ್ತಾನ ತಂಡ ಭಾರತಕ್ಕೆ ಬರುತ್ತಿದ್ದು, ಮೊದಲಿಗೆ ಟೆಸ್ಟ್ ಪಂದ್ಯ ನಡೆಯಲಿದೆ. ಆ ಬಳಿಕ ಏಕದಿನ ಸರಣಿ ಶುರುವಾಗಲಿದೆ. ಈ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಆಡುವುದನ್ನು ಕಾಣಬಹುದಾಗಿದೆ. ಈ ಸರಣಿಗಹಾಗಿ ಇವರಿಬ್ಬರು ಜೂನ್ 9 ರಿಂದ ಮುಲ್ಲನ್‌ಪುರದಲ್ಲಿ ಅಭ್ಯಾಸವನ್ನು ಪ್ರಾರಂಭಿಸಲಿದ್ದಾರೆ. ಜೂನ್ 9 ರಿಂದ 11 ರವರೆಗೆ ಮೂರು ದಿನಗಳ ಕಾಲ ನೆಟ್ಸ್​ನಲ್ಲಿ ಇವರಿಬ್ಬರು ಬೆವರು ಸುರಿಸಲಿದ್ದು ಅದರ ನಂತರ, ಜೂನ್ 13 ರಂದು ಧರ್ಮಶಾಲಾದಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕಾಗಿ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.

2027 ರ ಏಕದಿನ ವಿಶ್ವಕಪ್‌ಗೆ ತಯಾರಿ

ಈ ಏಕದಿನ ಸರಣಿಯು ಕೇವಲ ದ್ವಿಪಕ್ಷೀಯ ಸರಣಿಯಲ್ಲ, 2027 ರ ಏಕದಿನ ವಿಶ್ವಕಪ್‌ಗೆ ತಯಾರಿಯೂ ಆಗಿದೆ. 2023 ರ ವಿಶ್ವಕಪ್ ಫೈನಲ್‌ನಲ್ಲಿ ಎಡವಿದ್ದ ಟೀಂ ಇಂಡಿಯಾ ಮುಂಬರುವ ಏಕದಿನ ವಿಶ್ವಕಪ್​ನ ಗೆಲ್ಲಲೇಬೇಕೆಂದು ಪಣತೊಟ್ಟಿದೆ. ಇದು ಸಾಧ್ಯವಾಗಬೇಕಾದರೆ ರೋಹಿತ್ ಮತ್ತು ಕೊಹ್ಲಿ ಅದ್ಭುತ ಫಾರ್ಮ್​ನಲ್ಲಿರಬೇಕಾಗುತ್ತದೆ. ಅಲ್ಲದೆ ಇವರಿಬ್ಬರು ತಮ್ಮ ವೃತ್ತಿಜೀವನದ ಅಂತಿಮ ಹಂತದಲ್ಲಿರುವ ಕಾರಣ ತಮ್ಮ ಫಿಟ್‌ನೆಸ್ ಮತ್ತು ಫಾರ್ಮ್ ಅನ್ನು ಕಾಪಾಡಿಕೊಳ್ಳಲು ಈ ಸರಣಿಯನ್ನು ನಿರ್ಣಾಯಕವಾಗಿದೆ. ಇವರಿಬ್ಬರ ಅಭ್ಯಾಸಕ್ಕಾಗಿ ಬಿಸಿಸಿಐ, ಆರು ನೆಟ್ ಬೌಲರ್‌ಗಳನ್ನು ಆಯ್ಕೆ ಮಾಡಿದೆ. ಅವರಲ್ಲಿ ಮಯಾಂಕ್ ಯಾದವ್ ಕೂಡ ಒಬ್ಬರು. ಈಗಾಗಲೇ ಏಕದಿನ ತಂಡದಲ್ಲಿ ಆಯ್ಕೆಯಾಗಿರುವ ಪ್ರಿನ್ಸ್ ಯಾದವ್ ಕೂಡ ರೋಹಿತ್ ಮತ್ತು ಕೊಹ್ಲಿ ಜೊತೆಗೆ ಧರ್ಮಶಾಲಾಗೆ ಹೋಗಲಿದ್ದಾರೆ.

ಇಬ್ಬರ ಪ್ರಸ್ತುತ ಫಾರ್ಮ್​ ಹೇಗಿದೆ?

ವಿರಾಟ್ ಕೊಹ್ಲಿ ಪ್ರಸ್ತುತ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆಲ್ಲುವಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇಡೀ ಪಂದ್ಯಾವಳಿಯಲ್ಲಿ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ಕೊಹ್ಲಿ 675 ರನ್ ಕಲೆಹಾಕಿದ್ದರು. ಮತ್ತೊಂದೆಡೆ, ರೋಹಿತ್ ಶರ್ಮಾಗೆ ಈ ಬಾರಿ ಐಪಿಎಲ್ ನಿರೀಕ್ಷೆಯಂತೆ ನಡೆಯಲಿಲ್ಲ. ರೋಹಿತ್ ಆಡಿದ 9 ಇನ್ನಿಂಗ್ಸ್‌ಗಳಲ್ಲಿ ಕೇವಲ 283 ರನ್ ಗಳಿಸಲಷ್ಟೇ ಶಕ್ತರಾದರು. ಕೆಕೆಆರ್ ಮತ್ತು ಲಕ್ನೋ ವಿರುದ್ಧ ಆಡಿದ ಎರಡು ಇನ್ನಿಂಗ್ಸ್‌ಗಳನ್ನು ಹೊರತುಪಡಿಸಿ, ಇತರ ಪಂದ್ಯಗಳಲ್ಲಿ ಅವರ ಪ್ರದರ್ಶನ ನಿರಾಶಾದಾಯಕವಾಗಿತ್ತು. ಹೀಗಾಗಿ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:11 pm, Wed, 3 June 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​