AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಭಾರತ-ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿಯಲ್ಲಿ ಬದಲಾವಣೆ

India vs Afghanistan T20 Schedule: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಸೆಪ್ಟೆಂಬರ್ ಟಿ20 ಸರಣಿಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ. ಅಫ್ಘಾನಿಸ್ತಾನ ಭಾರತದಲ್ಲಿ ಆತಿಥ್ಯ ವಹಿಸುತ್ತಿರುವ ಈ ಸರಣಿಯ ಎರಡನೇ ಪಂದ್ಯವನ್ನು ಗಣೇಶ ಚತುರ್ಥಿ (ಸೆಪ್ಟೆಂಬರ್ 14) ರಜೆಯ ಕಾರಣ ಹೆಚ್ಚು ಪ್ರೇಕ್ಷಕರನ್ನು ಆಕರ್ಷಿಸಲು ಆಫ್ಘಾನ್ ಕ್ರಿಕೆಟ್ ಮಂಡಳಿ ಚಿಂತಿಸುತ್ತಿದೆ. ಇದು ಟಿಕೆಟ್ ಮಾರಾಟ ಮತ್ತು ಆದಾಯ ಹೆಚ್ಚಿಸಲು ಸಹಾಯ ಮಾಡಲಿದೆ. ಬಿಸಿಸಿಐ ಅನುಮೋದನೆ ಬಾಕಿಯಿದೆ.

IND vs AFG: ಭಾರತ-ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿಯಲ್ಲಿ ಬದಲಾವಣೆ
Ind Vs Afg
ಪೃಥ್ವಿಶಂಕರ
|

Updated on:Aug 13, 2026 | 8:19 PM

Share

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವೆ ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್ ತಿಂಗಳಲ್ಲಿ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಸರಣಿಯ ವಿಶೇಷತೆ ಏನೆಂದರೆ, ಟೀಂ ಇಂಡಿಯಾಕ್ಕೆ ಭಾರತದಲ್ಲಿ ಅಫ್ಘಾನಿಸ್ತಾನ ಆತಿಥ್ಯವಹಿಸುತ್ತಿದೆ. ಅಂದರೆ ಟೀಂ ಇಂಡಿಯಾ ತನ್ನ ತವರಿನಲ್ಲಿ ಪ್ರವಾಸಿ ತಂಡವಾಗಿ ಆಡಲಿದೆ. ಇತ್ತ ಅಫ್ಘಾನಿಸ್ತಾನ ಆತಿಥೇಯ ತಂಡವಾಗಿ ಆಡಲಿದೆ. ಈ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಇತ್ತೀಚೆಗಷ್ಟೇ ಬಿಡುಗಡೆ ಮಾಡಿತ್ತು. ಆದರೆ ಆ ವೇಳಾಪಟ್ಟಿಯಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳಿವೆ. ವರದಿಯ ಪ್ರಕಾರ, ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ACB) ಸೆಪ್ಟೆಂಬರ್ 14 ರಂದು ಸರಣಿಯ ಎರಡನೇ ಟಿ20 ಪಂದ್ಯವನ್ನು ನಡೆಸಲು ಪರಿಗಣಿಸುತ್ತಿದೆ.

2ನೇ ಪಂದ್ಯದ ದಿನಾಂಕ ಬದಲಾವಣೆ

ಈಗ ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ ಉಭಯ ತಂಡಗಳ ನಡುವಿನ ಮೊದಲ ಟಿ20 ಪಂದ್ಯ ಸೆಪ್ಟೆಂಬರ್ 13 ರಂದು ನಡೆಯಲಿದ್ದು, ಎರಡನೇ ಪಂದ್ಯ ಸೆಪ್ಟೆಂಬರ್ 15 ರಂದು ನಡೆಯಲಿದೆ. ಆದರೆ ಇದೀಗ ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಅಫ್ಘಾನ್ ಕ್ರಿಕೆಟ್ ಮಂಡಳಿಯು ಎರಡನೇ ಟಿ20 ಪಂದ್ಯವನ್ನು ಸೆಪ್ಟೆಂಬರ್ 14 ರಂದು ನಡೆಸಲು ಬಯಸಿದೆ. ಇದಕ್ಕೆ ಕಾರಣ, ಸೆಪ್ಟೆಂಬರ್ 14 ರಂದು ಭಾರತದಲ್ಲಿ ಗಣೇಶ ಚತುರ್ಥಿ ಹಬ್ಬವಿದೆ. ಈ ದಿನ ಸರ್ಕಾರಿ ರಜೆಯಾಗಿರುವ ಕಾರಣ ಪ್ರೇಕ್ಷಕರು ಪಂದ್ಯವನ್ನು ನೋಡಲು ಕ್ರೀಡಾಂಗಣಕ್ಕೆ ಬರುತ್ತಾರೆ ಎಂಬುದು.

ವೇಳಾಪಟ್ಟಿ ಬದಲಾಗಲು ಕಾರಣ

ಇದೇ ಕಾರಣಕ್ಕಾಗಿ ಅಫ್ಘಾನ್ ಮಂಡಳಿಯು ಸೆಪ್ಟೆಂಬರ್ 14 ರಂದು ಟಿ20 ಪಂದ್ಯವನ್ನು ಆಯೋಜಿಸುವ ಬಗ್ಗೆ ಯೋಚಿಸುತ್ತಿದೆ. ಸೆಪ್ಟೆಂಬರ್ 13 ಭಾನುವಾರವಾಗಿರುವ ಕಾರಣ ಪ್ರೇಕ್ಷಕರು ಖಚಿತವಾಗಿ ಕ್ರೀಡಾಂಗಣಕ್ಕೆ ಬರುತ್ತಾರೆ. ಸೆಪ್ಟೆಂಬರ್ 14 ಸೋಮವಾರವಾದರೂ, ಅಂದು ಗಣೇಶ ಚತುರ್ಥಿ ಇರುವ ಕಾರಣ ಅಂದು ಕೂಡ ಸರ್ಕಾರಿ ರಜೆ ಇರಲಿದೆ. ಹೀಗಾಗಿ ಹೆಚ್ಚಿನ ಪ್ರೇಕ್ಷಕರು ಮೈದಾನಕ್ಕೆ ಬರಲಿದ್ದಾರೆ. ಇದರಿಂದ ಟಿಕೆಟ್ ಮಾರಾಟ ಹೆಚ್ಚಳವಾಗುವುದರಿಂದ ಅಫ್ಘಾನ್ ಕ್ರಿಕೆಟ್ ಮಂಡಳಿಗೆ ಹೆಚ್ಚಿನ ಆದಾಯವನ್ನು ತಂದುಕೊಡುತ್ತದೆ. ಅದಕ್ಕಾಗಿಯೇ ಎಸಿಬಿ ಈ ನಿರ್ಧಾರಕ್ಕೆ ಬಂದಿದೆ. ಆದಾಗ್ಯೂ, ಇದಕ್ಕೆ ಬಿಸಿಸಿಐ ಅನುಮೋದನೆಯೂ ಅಗತ್ಯವಾಗಿರುತ್ತದೆ.

ICC Rankings: ಏಕದಿನ, ಟೆಸ್ಟ್, ಟಿ20 ಮಾದರಿಯಲ್ಲೂ ಭಾರತೀಯರದ್ದೇ ಪಾರುಪತ್ಯ

ಪ್ರಸ್ತುತ ವೇಳಾಪಟ್ಟಿ

ಈ ಸರಣಿ ಸೆಪ್ಟೆಂಬರ್ 13 ರಿಂದ 17 ರವರೆಗೆ ನಡೆಯಲಿದೆ. ಮೂರೂ ಪಂದ್ಯಗಳು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಅಫ್ಘಾನಿಸ್ತಾನವು ಭಾರತದ ನೆಲದಲ್ಲಿ ಟೀಂ ಇಂಡಿಯಾಕ್ಕೆ ಆತಿಥ್ಯ ವಹಿಸುತ್ತಿರುವುದು ಇದೇ ಮೊದಲು. ಈ ಹಿಂದೆ ಅಫ್ಘಾನಿಸ್ತಾನ, ವೆಸ್ಟ್ ಇಂಡೀಸ್, ಜಿಂಬಾಬ್ವೆ ಮತ್ತು ನ್ಯೂಜಿಲೆಂಡ್‌ನಂತಹ ತಂಡಗಳಿಗೆ ಭಾರತದಲ್ಲಿ ಆತಿಥ್ಯ ನೀಡಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:17 pm, Thu, 13 August 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ
ಹಬ್ಬ ಹಿನ್ನೆಲೆ ಕೆ. ಆರ್ ಮಾರ್ಕೆಟ್​ನಲ್ಲಿ ಖರೀದಿ ಭರಾಟೆ ಜೋರು!
ಹಬ್ಬ ಹಿನ್ನೆಲೆ ಕೆ. ಆರ್ ಮಾರ್ಕೆಟ್​ನಲ್ಲಿ ಖರೀದಿ ಭರಾಟೆ ಜೋರು!