IND vs AFG: ಭಾರತದಲ್ಲಿ ಟೀಂ ಇಂಡಿಯಾಕ್ಕೆ ಆತಿಥ್ಯವಹಿಸಲಿದೆ ಅಫ್ಘಾನಿಸ್ತಾನ

India vs Afghanistan T20 Series: ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಸೆಪ್ಟೆಂಬರ್‌ನಲ್ಲಿ ಮೂರು ಪಂದ್ಯಗಳ ಟಿ20 ಸರಣಿ ಭಾರತದಲ್ಲೇ ನಡೆಯಲಿದೆ. ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ಎಸಿಬಿ) ಈ ಸರಣಿಯನ್ನು ಆಯೋಜಿಸುತ್ತಿದ್ದು, ಟೀಂ ಇಂಡಿಯಾ ಪ್ರವಾಸಿ ತಂಡವಾಗಿ ಆಡಲಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣವು ಆತಿಥ್ಯ ವಹಿಸಲಿದ್ದು, ಸೆಪ್ಟೆಂಬರ್ 13, 15, 17 ರಂದು ಪಂದ್ಯಗಳು ನಡೆಯಲಿವೆ. ಇದು ಭಾರತದ ಬ್ಯುಸಿ ವೇಳಾಪಟ್ಟಿಯ ಭಾಗವಾಗಿದೆ.

IND vs AFG: ಭಾರತದಲ್ಲಿ ಟೀಂ ಇಂಡಿಯಾಕ್ಕೆ ಆತಿಥ್ಯವಹಿಸಲಿದೆ ಅಫ್ಘಾನಿಸ್ತಾನ
Ind Vs Afg

Updated on: Jul 23, 2026 | 9:24 PM

ಭಾರತ ಹಾಗೂ ಜಿಂಬಾಬ್ವೆ ನಡುವೆ ಇಂದಿನಿಂದ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಿದೆ. ಇದಾದ ಬಳಿಕ ಟೀಂ ಇಂಡಿಯಾ 2026 ರ ಏಷ್ಯನ್ ಕ್ರೀಡಾಕೂಟದಲ್ಲಿಯೂ ಭಾಗವಹಿಸಲಿದೆ. ಇದೆಲ್ಲದರ ನಡುವೆ ಟೀಂ ಇಂಡಿಯಾ ತನ್ನ ತಾಯ್ನಾಡಿನಲ್ಲೇ ಪ್ರವಾಸಿ ತಂಡವಾಗಿ ಟಿ20 ಸರಣಿಯನ್ನು ಆಡಲಿದೆ. ಹೌದು, ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವೆ ಮೂರು ಪಂದ್ಯಗಳ ಟಿ20 ಸರಣಿ ಸೆಪ್ಟೆಂಬರ್‌ನಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಈ ಸರಣಿಗೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ( Arun Jaitley Stadium) ಆತಿಥ್ಯವಹಿಸುತ್ತಿದೆ. ಇಲ್ಲಿ ಗಮನಿಸಬೇಕಾದ ಸಂಗತಿಯೆಂದರೆ ಅಫ್ಘಾನಿಸ್ತಾನ ಈ ಸರಣಿಯನ್ನು ಆಯೋಜಿಸುತ್ತಿದ್ದು, ಟೀಂ ಇಂಡಿಯಾ ಪ್ರವಾಸಿ ತಂಡವಾಗಿ ಆಡಲಿದೆ.

ಅಫ್ಘಾನಿಸ್ತಾನ ವಿರುದ್ಧ ಟಿ20 ಸರಣಿ

ವರದಿಯ ಪ್ರಕಾರ, ಸೆಪ್ಟೆಂಬರ್‌ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಟಿ20 ಸರಣಿ ನಡೆಯಲಿದೆ. ಮೇಲೆ ಹೇಳಿದಂತೆ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ಎಸಿಬಿ) ಈ ಸರಣಿಯನ್ನು ಆಯೋಜಿಸುತ್ತಿದೆ. ಭದ್ರತಾ ಕಾಳಜಿಯಿಂದಾಗಿ ಅಫ್ಘಾನಿಸ್ತಾನವು ಭಾರತದಲ್ಲಿ ತನ್ನ ತವರು ಅಂತರರಾಷ್ಟ್ರೀಯ ಪಂದ್ಯಗಳನ್ನು ದೀರ್ಘಕಾಲದಿಂದ ಆಡುತ್ತಿದೆ. ಈ ಹಿಂದೆ, ತಂಡವು ಲಕ್ನೋ, ಡೆಹ್ರಾಡೂನ್ ಮತ್ತು ಗ್ರೇಟರ್ ನೋಯ್ಡಾವನ್ನು ತನ್ನ ತವರು ಸ್ಥಳಗಳನ್ನಾಗಿ ಮಾಡಿಕೊಂಡಿತ್ತು. ಈ ಮೈದಾನಗಳಲ್ಲಿ ವೆಸ್ಟ್ ಇಂಡೀಸ್, ಜಿಂಬಾಬ್ವೆ ಮತ್ತು ನ್ಯೂಜಿಲೆಂಡ್‌ನಂತಹ ತಂಡಗಳ ವಿರುದ್ಧ ಅಫ್ಘಾನಿಸ್ತಾನ ಪಂದ್ಯಗಳನ್ನಾಡಿತ್ತು. ಆದರೆ ಭಾರತದ ವಿರುದ್ಧ ಯಾವುದೇ ತವರು ಸರಣಿಯನ್ನು ಭಾರತದಲ್ಲಿ ಆಡಿರಲಿಲ್ಲ. ಆದರೀಗ ಭಾರತದ ವಿರುದ್ಧ ಭಾರತದಲ್ಲೇ ಅಫ್ಘಾನಿಸ್ತಾನ ಟಿ20 ಸರಣಿಯನ್ನು ಆಯೋಜಿಸುತ್ತಿದೆ.

ಸೆಪ್ಟೆಂಬರ್​ನಲ್ಲಿ ಟಿ20 ಸರಣಿ

ಕ್ರಿಕ್ಇನ್ಫೋ ವರದಿ ಪ್ರಕಾರ, ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯಗಳು ಸೆಪ್ಟೆಂಬರ್ 13, 15 ಮತ್ತು 17 ರಂದು ನಡೆಯಬಹುದು. ಎರಡೂ ಮಂಡಳಿಗಳು ಇನ್ನೂ ಸ್ಥಳ ಮತ್ತು ದಿನಾಂಕಗಳನ್ನು ಅಧಿಕೃತವಾಗಿ ಘೋಷಿಸದಿದ್ದರೂ, ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಮತ್ತು ದೆಹಲಿ ಮೂರು ಪಂದ್ಯಗಳನ್ನು ಆಯೋಜಿಸಬಹುದು ಎಂದು ವರದಿಯಾಗಿದೆ. ಈ ಸರಣಿಯು 2026 ರ ಏಷ್ಯನ್ ಕ್ರೀಡಾಕೂಟಕ್ಕೆ ಸ್ವಲ್ಪ ಮೊದಲು ನಡೆಯಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಈ ಪ್ರಸ್ತಾವಿತ ಸರಣಿಯು ಭಾರತೀಯ ತಂಡದ ಬಿಡುವಿಲ್ಲದ ಅಂತರರಾಷ್ಟ್ರೀಯ ವೇಳಾಪಟ್ಟಿಯ ನಡುವೆ ನಡೆಯಲಿದೆ. ಶ್ರೀಲಂಕಾ ಪ್ರವಾಸದ ಎರಡನೇ ಟೆಸ್ಟ್ ಪಂದ್ಯ ಆಗಸ್ಟ್ 27 ರಂದು ಕೊನೆಗೊಳ್ಳಲಿದ್ದು, 2026 ರ ಏಷ್ಯನ್ ಗೇಮ್ಸ್ ಸೆಪ್ಟೆಂಬರ್ 24 ರಂದು ಜಪಾನ್‌ನಲ್ಲಿ ಪ್ರಾರಂಭವಾಗಲಿದೆ. ಪರಿಣಾಮವಾಗಿ, ಈ ಟಿ20 ಸರಣಿಯನ್ನು ಸೆಪ್ಟೆಂಬರ್ ಮಧ್ಯದಲ್ಲಿ ನಿಗದಿಪಡಿಸಲಾಗಿದೆ.

IND vs ZIM: ವೈಭವ್ ಆರ್ಭಟ; ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ

ಉಭಯ ತಂಡಗಳು ಕೊನೆಯದಾಗಿ 2026 ರ ಜೂನ್‌ನಲ್ಲಿ ಮುಖಾಮುಖಿಯಾಗಿದ್ದವು. ಆ ಪ್ರವಾಸದ ಸಮಯದಲ್ಲಿ, ಭಾರತವು ನ್ಯೂ ಚಂಡೀಗಢದಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು ಇನ್ನಿಂಗ್ಸ್ ಮತ್ತು 300 ರನ್‌ಗಳಿಂದ ಸೋಲಿಸಿತು. ನಂತರ ಭಾರತ ತಂಡವು ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us