IND vs AFG: ಯಾವ ಐಪಿಎಲ್ ತಂಡದಿಂದ ಎಷ್ಟು ಆಟಗಾರರು ಟೀಂ ಇಂಡಿಯಾಕ್ಕೆ ಆಯ್ಕೆ?
India vs Afghanistan: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಜೂನ್ ಟೆಸ್ಟ್, ಏಕದಿನ ಸರಣಿಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹಲವು ಯುವ ಆಟಗಾರರಿಗೆ ಅವಕಾಶ ಸಿಕ್ಕಿದ್ದರೆ, ಕೆಲ ಹಿರಿಯರು ಹೊರಗುಳಿದಿದ್ದಾರೆ. ಐಪಿಎಲ್ ತಂಡಗಳ ಆಟಗಾರರ ಆಯ್ಕೆ ವಿಶ್ಲೇಷಿಸಲಾಗಿದ್ದು, ಗುಜರಾತ್ ಟೈಟಾನ್ಸ್‌ನಿಂದ ಅತಿ ಹೆಚ್ಚು ಆಟಗಾರರು ಆಯ್ಕೆಯಾಗಿದ್ದಾರೆ. ಸಿಎಸ್‌ಕೆ ಮತ್ತು ಕೆಕೆಆರ್ ತಂಡಗಳಿಂದ ಯಾರೂ ಆಯ್ಕೆಯಾಗಿಲ್ಲ. ಪಂದ್ಯಗಳ ವೇಳಾಪಟ್ಟಿ ಸಹ ಲಭ್ಯವಿದೆ.

ಭಾರತ ತಂಡವು ಜೂನ್ 6 ರಿಂದ ನ್ಯೂ ಚಂಡೀಗಢದಲ್ಲಿ ಅಫ್ಘಾನಿಸ್ತಾನ (IND vs AFG) ವಿರುದ್ಧ ಏಕೈಕ ಟೆಸ್ಟ್ ಪಂದ್ಯವನ್ನು ಆಡಲಿದೆ. ಅದರ ನಂತರ, ಭಾರತ ತಂಡವು ಜೂನ್ 14 ರಿಂದ ಇದೇ ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಎರಡೂ ಸರಣಿಗಳಿಗೆ ಮಂಗಳವಾರ, ಮೇ 19 ರಂದು ಭಾರತ ತಂಡಗಳನ್ನು ಸಹ ಬಿಸಿಸಿಐ (BCCI) ಘೋಷಿಸಿದೆ. ಈ ಎರಡೂ ಸರಣಿಗಳಿಗೆ ಅನೇಕ ಯುವ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಹಾಗೆಯೇ ಅನೇಕ ಅನುಭವಿ ಆಟಗಾರರನ್ನು ತಂಡದಿಂದ ಕೈಬಿಡಲಾಗಿದೆ.
ಐಪಿಎಲ್ ಪ್ರದರ್ಶನ ಗಣನೆಗೆ ಬಂದಿಲ್ಲ
ಪ್ರಸ್ತುತ ಭಾರತದಲ್ಲಿ ಐಪಿಎಲ್ ನಡೆಯುತ್ತಿದ್ದು, ಐಪಿಎಲ್ನಲ್ಲಿ ಆಡುತ್ತಿರುವ ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಕ್ಕಿದೆ. ಆದಾಗ್ಯೂ ಆಟಗಾರರ ಆಯ್ಕೆಯಲ್ಲಿ ಐಪಿಎಲ್ ಪ್ರದರ್ಶನವನ್ನು ಪರಿಗಣಿಸಿರುವ ಸಾಧ್ಯತೆಗಳು ಕಡಿಮೆ ಇವೆ. ಏಕೆಂದರೆ ಟೀಂ ಇಂಡಿಯಾ, ಅಫ್ಘಾನಿಸ್ತಾನದ ವಿರುದ್ಧ ಟೆಸ್ಟ್ ಮತ್ತು ಏಕದಿನ ಸರಣಿಗಳನ್ನು ಆಡಲಿದೆ. ಹೀಗಾಗಿ ಈ ಎರಡೂ ಮಾದರಿಗಳು ಟಿ20 ಮಾದರಿಯಿಂದ ಭಿನ್ನವಾಗಿರುವ ಕಾರಣ, ಐಪಿಎಲ್ ಪ್ರದರ್ಶನದ ಮೇಲೆ ಆಟಗಾರರನ್ನು ಆಯ್ಕೆ ಮಾಡಲಾಗಿಲ್ಲ ಎನ್ನಬಹುದು. ಆದರೂ ಯಾವ ಐಪಿಎಲ್ ತಂಡದಿಂದ ಎಷ್ಟು ಆಟಗಾರರು ಟೀಂ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ ಎಂಬು ಕುತೂಹಲ ಎಲ್ಲರಲ್ಲೂ ಮೂಡುವುದು ಸಹಜ. ಅದಕ್ಕೆ ಉತ್ತರ ಇಲ್ಲಿದೆ.
ಯಾವ ತಂಡದಿಂದ ಎಷ್ಟು ಆಟಗಾರರು
ಟೆಸ್ಟ್ ಹಾಗೂ ಏಕದಿನ ಸರಣಿಗೆ ಬಿಸಿಸಿಐ ತಲಾ 15 ಆಟಗಾರರನ್ನು ಆಯ್ಕೆ ಮಾಡಿದೆ. ಇದರಲ್ಲಿ ಕೆಲವು ಆಟಗಾರರು ಉಭಯ ತಂಡಗಳಲ್ಲೂ ಸ್ಥಾನ ಪಡೆದಿದ್ದಾರೆ. ಉಳಿದಂತೆ ಐಪಿಎಲ್ನ 10 ತಂಡಗಳಲ್ಲಿ 8 ತಂಡಗಳ ಆಟಗಾರರು ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಸಿಎಸ್‌ಕೆ ಹಾಗೂ ಕೆಕೆಆರ್ ತಂಡದಿಂದ ಯಾವೊಬ್ಬ ಆಟಗಾರನೂ ಈ ಸರಣಿಗೆ ಆಯ್ಕೆಯಾಗಿಲ್ಲ. ಗುಜರಾತ್ ಟೈಟಾನ್ಸ್ ತಂಡದಿಂದ ಅತ್ಯಧಿಕ 7 ಆಟಗಾರರು ತಂಡಕ್ಕೆ ಆಯ್ಕೆಯಾಗಿದ್ದರೆ, ಸನ್‌ರೈಸರ್ಸ್ ತಂಡದಿಂದ ಮೂವರು ಆಟಗಾರರಿಗೆ ಅವಕಾಶ ಸಿಕ್ಕಿದೆ. ಉಳಿದಂತೆ 6 ತಂಡಗಳಿಂದ ತಲಾ ಇಬ್ಬರು ಆಟಗಾರರು ಆಯ್ಕೆಯಾಗಿದ್ದಾರೆ.
IND vs AFG: 7+4.. ಟೀಂ ಇಂಡಿಯಾದಲ್ಲಿ ಗುಜರಾತ್ ಟೈಟಾನ್ಸ್ ಆಟಗಾರರದ್ದೇ ಪಾರುಪತ್ಯ
-
- ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್ ಮತ್ತು ಗುರ್ನೂರ್ ಬ್ರಾರ್.
- ಸನ್‌ರೈಸರ್ಸ್ ಹೈದರಾಬಾದ್: ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ,
- ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಧ್ರುವ್ ಜುರೇಲ್,
- ಆರ್ಸಿಬಿ: ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ
- ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ,
- ಲಕ್ನೋ ಸೂಪರ್ಜೈಂಟ್ಸ್: ಪ್ರಿನ್ಸ್ ಯಾದವ್, ರಿಷಭ್ ಪಂತ್,
- ಡೆಲ್ಲಿ ಕ್ಯಾಪಿಟಲ್ಸ್: ಕೆಎಲ್ ರಾಹುಲ್, ಕುಲ್ದೀಪ್ ಯಾದವ್
- ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್, ಅರ್ಷದೀಪ್ ಸಿಂಗ್
🚨 News 🚨
Presenting #TeamIndia‘s squads for the @IDFCFIRSTBank Test match and the 3️⃣-match ODI series against Afghanistan in June 🙌#INDvAFG pic.twitter.com/hFiABALLld
— BCCI (@BCCI) May 19, 2026
ಟೆಸ್ಟ್ ಮತ್ತು ಏಕದಿನ ಸರಣಿ ವೇಳಾಪಟ್ಟಿ
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟೆಸ್ಟ್ ಪಂದ್ಯವು ನ್ಯೂ ಚಂಡೀಗಢದ ಮಹಾರಾಜ ಯುಧ್ವೀರ್ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯವು ಜೂನ್ 6 ರಂದು ಪ್ರಾರಂಭವಾಗಲಿದೆ.
ಜೂನ್ 14 ರಂದು ಏಕದಿನ ಸರಣಿ ಆರಂಭವಾಗಲಿದ್ದು, ಕೊನೆಯ ಪಂದ್ಯ ಜೂನ್ 20 ರಂದು ನಡೆಯಲಿದೆ. ಮೊದಲ ಪಂದ್ಯ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡನೇ ಏಕದಿನ ಪಂದ್ಯ ಜೂನ್ 17 ರಂದು ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯ ಮೂರನೇ ಮತ್ತು ಅಂತಿಮ 50 ಓವರ್‌ಗಳ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





