
ಭಾರತ ತಂಡವು ಜೂನ್ 6 ರಿಂದ ನ್ಯೂ ಚಂಡೀಗಢದಲ್ಲಿ ಅಫ್ಘಾನಿಸ್ತಾನ (IND vs AFG) ವಿರುದ್ಧ ಏಕೈಕ ಟೆಸ್ಟ್ ಪಂದ್ಯವನ್ನು ಆಡಲಿದೆ. ಅದರ ನಂತರ, ಭಾರತ ತಂಡವು ಜೂನ್ 14 ರಿಂದ ಇದೇ ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಎರಡೂ ಸರಣಿಗಳಿಗೆ ಮಂಗಳವಾರ, ಮೇ 19 ರಂದು ಭಾರತ ತಂಡಗಳನ್ನು ಸಹ ಬಿಸಿಸಿಐ (BCCI) ಘೋಷಿಸಿದೆ. ಈ ಎರಡೂ ಸರಣಿಗಳಿಗೆ ಅನೇಕ ಯುವ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಹಾಗೆಯೇ ಅನೇಕ ಅನುಭವಿ ಆಟಗಾರರನ್ನು ತಂಡದಿಂದ ಕೈಬಿಡಲಾಗಿದೆ.
ಪ್ರಸ್ತುತ ಭಾರತದಲ್ಲಿ ಐಪಿಎಲ್ ನಡೆಯುತ್ತಿದ್ದು, ಐಪಿಎಲ್ನಲ್ಲಿ ಆಡುತ್ತಿರುವ ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಕ್ಕಿದೆ. ಆದಾಗ್ಯೂ ಆಟಗಾರರ ಆಯ್ಕೆಯಲ್ಲಿ ಐಪಿಎಲ್ ಪ್ರದರ್ಶನವನ್ನು ಪರಿಗಣಿಸಿರುವ ಸಾಧ್ಯತೆಗಳು ಕಡಿಮೆ ಇವೆ. ಏಕೆಂದರೆ ಟೀಂ ಇಂಡಿಯಾ, ಅಫ್ಘಾನಿಸ್ತಾನದ ವಿರುದ್ಧ ಟೆಸ್ಟ್ ಮತ್ತು ಏಕದಿನ ಸರಣಿಗಳನ್ನು ಆಡಲಿದೆ. ಹೀಗಾಗಿ ಈ ಎರಡೂ ಮಾದರಿಗಳು ಟಿ20 ಮಾದರಿಯಿಂದ ಭಿನ್ನವಾಗಿರುವ ಕಾರಣ, ಐಪಿಎಲ್ ಪ್ರದರ್ಶನದ ಮೇಲೆ ಆಟಗಾರರನ್ನು ಆಯ್ಕೆ ಮಾಡಲಾಗಿಲ್ಲ ಎನ್ನಬಹುದು. ಆದರೂ ಯಾವ ಐಪಿಎಲ್ ತಂಡದಿಂದ ಎಷ್ಟು ಆಟಗಾರರು ಟೀಂ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ ಎಂಬು ಕುತೂಹಲ ಎಲ್ಲರಲ್ಲೂ ಮೂಡುವುದು ಸಹಜ. ಅದಕ್ಕೆ ಉತ್ತರ ಇಲ್ಲಿದೆ.
ಟೆಸ್ಟ್ ಹಾಗೂ ಏಕದಿನ ಸರಣಿಗೆ ಬಿಸಿಸಿಐ ತಲಾ 15 ಆಟಗಾರರನ್ನು ಆಯ್ಕೆ ಮಾಡಿದೆ. ಇದರಲ್ಲಿ ಕೆಲವು ಆಟಗಾರರು ಉಭಯ ತಂಡಗಳಲ್ಲೂ ಸ್ಥಾನ ಪಡೆದಿದ್ದಾರೆ. ಉಳಿದಂತೆ ಐಪಿಎಲ್ನ 10 ತಂಡಗಳಲ್ಲಿ 8 ತಂಡಗಳ ಆಟಗಾರರು ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಸಿಎಸ್‌ಕೆ ಹಾಗೂ ಕೆಕೆಆರ್ ತಂಡದಿಂದ ಯಾವೊಬ್ಬ ಆಟಗಾರನೂ ಈ ಸರಣಿಗೆ ಆಯ್ಕೆಯಾಗಿಲ್ಲ. ಗುಜರಾತ್ ಟೈಟಾನ್ಸ್ ತಂಡದಿಂದ ಅತ್ಯಧಿಕ 7 ಆಟಗಾರರು ತಂಡಕ್ಕೆ ಆಯ್ಕೆಯಾಗಿದ್ದರೆ, ಸನ್‌ರೈಸರ್ಸ್ ತಂಡದಿಂದ ಮೂವರು ಆಟಗಾರರಿಗೆ ಅವಕಾಶ ಸಿಕ್ಕಿದೆ. ಉಳಿದಂತೆ 6 ತಂಡಗಳಿಂದ ತಲಾ ಇಬ್ಬರು ಆಟಗಾರರು ಆಯ್ಕೆಯಾಗಿದ್ದಾರೆ.
IND vs AFG: 7+4.. ಟೀಂ ಇಂಡಿಯಾದಲ್ಲಿ ಗುಜರಾತ್ ಟೈಟಾನ್ಸ್ ಆಟಗಾರರದ್ದೇ ಪಾರುಪತ್ಯ
🚨 News 🚨
Presenting #TeamIndia‘s squads for the @IDFCFIRSTBank Test match and the 3️⃣-match ODI series against Afghanistan in June 🙌#INDvAFG pic.twitter.com/hFiABALLld
— BCCI (@BCCI) May 19, 2026
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟೆಸ್ಟ್ ಪಂದ್ಯವು ನ್ಯೂ ಚಂಡೀಗಢದ ಮಹಾರಾಜ ಯುಧ್ವೀರ್ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯವು ಜೂನ್ 6 ರಂದು ಪ್ರಾರಂಭವಾಗಲಿದೆ.
ಜೂನ್ 14 ರಂದು ಏಕದಿನ ಸರಣಿ ಆರಂಭವಾಗಲಿದ್ದು, ಕೊನೆಯ ಪಂದ್ಯ ಜೂನ್ 20 ರಂದು ನಡೆಯಲಿದೆ. ಮೊದಲ ಪಂದ್ಯ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡನೇ ಏಕದಿನ ಪಂದ್ಯ ಜೂನ್ 17 ರಂದು ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯ ಮೂರನೇ ಮತ್ತು ಅಂತಿಮ 50 ಓವರ್‌ಗಳ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ