ಭಾರತ ಕ್ರಿಕೆಟ್ ತಂಡದ ಬಾಂಗ್ಲಾದೇಶ ಪ್ರವಾಸ ಏಕದಿನ ಸರಣಿಯಲ್ಲಿ ಅಂದುಕೊಂಡಂತೆ ಸಾಗಲಿಲ್ಲ. ಮೊದಲ ಎರಡು ಪಂದ್ಯಗಳಲ್ಲಿ ಸೋತು ಸರಣಿ ಕಳೆದುಕೊಂಡ ಟೀಮ್ ಇಂಡಿಯಾ (Team India) ಕೊನೆಯ ಪಂದ್ಯದಲ್ಲಿ ಗೆದ್ದು ಬೀಗಿತಷ್ಟೆ. ಇದೀಗ ವೈಟ್-ಬಾಲ್ ಸರಣಿಯ ನಂತರ ಟೆಸ್ಟ್ ಸರಣಿಗೆ ಭಾರತ ಸಜ್ಜಾಗುತ್ತಿದೆ. ಇಂದಿನಿಂದ ಭಾರತ ಹಾಗೂ ಬಾಂಗ್ಲಾದೇಶ (India vs Bangladesh) ನಡುವಣ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಇದು ಚಿತ್ತಗಾಂಗ್ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಆಯೋಜಿಸಲಾಗಿದೆ. ಎರಡನೇ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ನಾಯಕ ರೋಹಿತ್ ಶರ್ಮಾ ಗುಣಮುಖರಾಗದ ಕಾರಣ ಮೊದಲ ಟೆಸ್ಟ್ನಿಂದ ಹೊರುಗುಳಿದಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ಗೆ (KL Rahul) ನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ಚೇತೇಶ್ವರ್ ಪೂಜಾರ ಉಪ ನಾಯಕನಾಗಿದ್ದಾರೆ.
ಮೊದಲ ಟೆಸ್ಟ್ ಪಂದ್ಯಕ್ಕೆ ರೋಹಿತ್ ಬದಲು ಅಭಿಮನ್ಯು ಈಶ್ವರನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಜೊತೆಗೆ ಮೊಹಮ್ಮದ್ ಶಮಿ ಮತ್ತು ಆಲ್ ರೌಂಡರ್ ರವೀಂದ್ರ ಜಡೇಜಾ ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಇವರಿಬ್ಬರ ಬದಲಿಗೆ ನವದೀಪ್ ಸೈನಿ ಮತ್ತು ಸೌರಭ್ ಕುಮಾರ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ರೋಹಿತ್ ಅಲಭ್ಯತೆಯಲ್ಲಿ ಶುಭ್ಮನ್ ಗಿಲ್ ಅವರು ನಾಯಕ ಕೆಎಲ್ ರಾಹುಲ್ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಒತ್ತಡದಲ್ಲಿರುವ ಗಿಲ್ ಕಳೆದ 11 ಪಂದ್ಯಗಳಲ್ಲಿ 4 ಅರ್ಧಶತಕ ಸಿಡಿಸಿದ್ದಾರಷ್ಟೆ. ಆಸ್ಟ್ರೇಲಿಯಾ ವಿರುದ್ಧ ಗಳಿಸಿದ 91 ರನ್ ಗರಿಷ್ಠ ಸ್ಕೋರ್ ಆಗಿದೆ. ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲು ಗಿಲ್ಗೆ ಇದೊಂದು ಉತ್ತಮ ಅವಕಾಶ.
PAK vs ENG: ತವರಿನಲ್ಲೇ ಬಾಬರ್ ತಂಡಕ್ಕೆ ಮುಖಭಂಗ; ಪಾಕ್ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದ ಆಂಗ್ಲರು..!
ಮೂರನೇ ಕ್ರಮಾಂಕದಲ್ಲಿ ಉಪ ನಾಯಕ ಚೇತೇಶ್ವರ್ ಪೂಜಾರ ಆಡಿದರೆ, ನಾಲ್ಕನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಅಂತೆಯೆ ಐದನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಆಡುವುದು ಖಚಿತ. ರವಿಚಂದ್ರನ್ ಅಶ್ವಿನ್ ಕೂಡ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳಬಹುದು. ಟೀಮ್ ಇಂಡಿಯಾಕ್ಕೆ ಮತ್ತೊಬ್ಬ ಆಲ್ರೌಂಡರ್ನ ಅಗತ್ಯವಿರುವ ಕಾರಣ ರವೀಂದ್ರ ಜಡೇಜಾ ಸ್ಥಾನಕ್ಕೆ ಆಯ್ಕೆ ಆಗಿರುವ ಸೌರಭ್ ಕುಮಾರ್ ಈ ಪಂದ್ಯದ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡುವ ನಿರೀಕ್ಷೆಯಿದೆ. ವೇಗಿಗಳಾಗಿ ಮೊಹಮ್ಮದ್ ಸಿರಾಜ್ಗೆ ಸ್ಥಾನ ಸಿಗುವುದು ಬಹುತೇಕ ಖಚಿತ. ಉಮೇಶ್ ಯಾದವ್ ಹಾಗೂ ಜಯದೇವ್ ಉನಾದ್ಕಟ್ ಕೂಡ ಸ್ಥಾನ ಪಡೆಯಬಹುದು. ಕುಲ್ದೀಪ್ ಯಾದವ್ ಕೂಡ ಸ್ಪಿನ್ ಕೋಟಾದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ.
ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಬೆಳಗ್ಗೆ 9 ಗಂಟೆಗೆ ಶುರುವಾಗಲಿದೆ. 8:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರಪ್ರಸಾರ ಕಾಣಲಿದೆ. ಸೋನಿ ಲಿವ್ ಓಟಿಟಿಯಲ್ಲಿ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.
ಭಾರತ ತಂಡ: ಕೆಎಲ್ ರಾಹುಲ್(ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ನವದೀಪ್ ಸೈನಿ, ಸೌರಬ್ ಕುಮಾರ್, ಜಯದೇವ್ ಉನಾದ್ಕಟ್.
ಬಾಂಗ್ಲಾದೇಶ ತಂಡ: ಮಹ್ಮುದುಲ್ ಹಸನ್ ಜಾಯ್, ನಜ್ಮುಲ್ ಹಸನ್ ಶಾಂಟೊ, ಮೊಮಿನುಲ್ ಹಕ್, ಯಾಸಿರ್ ಅಲಿ ಚೌಧರಿ, ಮುಷ್ಫೀಕರ್ ರಹಿಮ್, ಶಕಿಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ನೂರುಲ್ ಹಸನ್, ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ತಸ್ಕಿನ್ ಅಹ್ಮದ್, ಸೈಯದ್ ಖಲೀದ್ ಅಹ್ಮದ್, ಇಬಾ ಇಸ್ಲಾಮ್ ಇಸ್ಲಾಮ್ , ಝಾಕಿರ್ ಹಸನ್, ರೆಜೌರ್ ರೆಹಮಾನ್ ರಾಜಾ, ಅನಾಮುಲ್ ಹಕ್ ಬಿಜೋಯ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ