AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 2nd ODI: ಕ್ರಿಕೆಟ್ ಕಾಶಿಯಲ್ಲಿಂದು ದ್ವಿತೀಯ ಏಕದಿನ: ವಿರಾಟ್ ಕೊಹ್ಲಿ ಈ ಪಂದ್ಯಕ್ಕೂ ಅನುಮಾನ

England vs India, 2nd ODI: ಇಂದು ಕ್ರಿಕೆಟ್ ಕಾಶಿ ಲಾರ್ಡ್ಸ್​ ಮೈದಾನದಲ್ಲಿ ದ್ವಿತೀಯ ಪಂದ್ಯ ಆಯೋಜಿಸಲಾಗಿದ್ದು ಭಾರತ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಇತ್ತ ಇಂಗ್ಲೆಂಡ್​​ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ.

IND vs ENG 2nd ODI: ಕ್ರಿಕೆಟ್ ಕಾಶಿಯಲ್ಲಿಂದು ದ್ವಿತೀಯ ಏಕದಿನ: ವಿರಾಟ್ ಕೊಹ್ಲಿ ಈ ಪಂದ್ಯಕ್ಕೂ ಅನುಮಾನ
ENG vs IND 2nd ODI
TV9 Web
| Updated By: Vinay Bhat|

Updated on:Jul 14, 2022 | 7:49 AM

Share

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ವಶಪಡಿಸಿಕೊಂಡ ಬಳಿಕ ಭಾರತ (India vs England) ಇದೀಗ ಏಕದಿನ ಸರಣಿ ಮೇಲೂ ಕಣ್ಣಿಟ್ಟಿದೆ. ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಬರೋಬ್ಬರಿ 10 ವಿಕೆಟ್​​ಗಳ ಭರ್ಜರಿ ಗೆಲುವು ಕಂಡಿತ್ತು. ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ ಬೌಲಿಂಗ್ ದಾಳಿಗೆ ತತ್ತರಿಸಿದ್ದ ಇಂಗ್ಲೆಂಡ್ ಕೇವಲ 110 ರನ್​ಗಳಿಗೆ ಆಲೌಟ್ ಆಗಿತ್ತು. ಭಾರತ 18.4 ಓವರ್​​ನಲ್ಲೇ ಗುರಿ ಮುಟ್ಟಿತ್ತು. ರೋಹಿತ್ (Rohit Sharma)-ಧವನ್ ಜೋಡಿ ಅಜೇಯ ಆಟವಾಡಿದ್ದರು. ಇದೀಗ ರೋಹಿತ್ ಪಡೆ ಎರಡನೇ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ಇಂದು ಕ್ರಿಕೆಟ್ ಕಾಶಿ ಲಾರ್ಡ್ಸ್​ ಮೈದಾನದಲ್ಲಿ ದ್ವಿತೀಯ ಪಂದ್ಯ ಆಯೋಜಿಸಲಾಗಿದ್ದು ಭಾರತ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಇತ್ತ ಇಂಗ್ಲೆಂಡ್​​ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ತವರಿನಲ್ಲೇ ಹೀನಾಯ ಸೋಲು ಕಂಡಿರುವ ಬಟ್ಲರ್ ನಾಯಕತ್ವಕ್ಕೂ ಇದೊಂದು ಅಗ್ನಿಪರೀಕ್ಷೆಯಾಗಿದೆ. ಹೀಗಾಗಿ ಇಂದು ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.

ಇಂದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಆಡುವುದು ಅನುಮಾನ ಎನ್ನಲಾಗುತ್ತಿದೆ. ತೊಡೆಸಂದು ನೋವಿನಿಂದ ಬಳಲುತ್ತಿರುವ ಕಾರಣ ಕೊಹ್ಲಿ ಅಲಭ್ಯತೆ ಭಾರತಕ್ಕೆ ದೊಡ್ಡ ಆಘಾತವಾಗಿದೆ. ಕೊಹ್ಲಿ ಗಾಯದ ಬಗ್ಗೆ ಹೆಚ್ಚಿನ ವಿವರಗಳು ಖಚಿತವಾಗಿಲ್ಲ. ಗಾಯ ಎಷ್ಟು ಗಂಭೀರವಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ವಿರಾಟ್ ಆಡದಿರುವುದು ಕೇವಲ ಮ್ಯಾನೇಜ್ಮೆಂಟ್​ಗೆ ಮಾತ್ರವಲ್ಲದೆ ಸ್ವತಃ ಕೊಹ್ಲಿಗೆನೇ ಹಿನ್ನಡೆಯಾಗಿದೆ. ಯಾಕೆಂದರೆ ಸತತ ಕಳಪೆ ಫಾರ್ಮ್​ನಿಂದ ತತ್ತರಿಸಿರುವ ಕೊಹ್ಲಿಗೆ ಒಂದೊಳ್ಳೆ ಇನ್ನಿಂಗ್ಸ್​ನ ಅಗತ್ಯವಿದೆ. ಕೊಹ್ಲಿ ಹೊರಗುಳಿದರೆ ಮೂರನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್​ ಆಡುವುದು ಖಚಿತ.

ಇನ್ನು ಬಹಳ ಸಮಯದ ನಂತರ ಶಿಖರ್ ಧವನ್ ಟೀಮ್ ಇಂಡಿಯಾಕ್ಕೆ ಕಮ್​ಬ್ಯಾಕ್ ಮಾಡಿದ್ದು ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾಗೆ ಉತ್ತಮ ಸಾಥ್ ನೀಡಿ ಅಜೇಯ 31 ರನ್ ಗಳಿಸಿದ್ದರು. ಕಳೆದ ಕೆಲವು ಪಂದ್ಯಗಳಲ್ಲಿ ಲಯ ಕಳೆದುಕೊಂಡಿದ್ದ ರೋಹಿತ್, ಮೊದಲ ಹಣಾಹಣಿಯಲ್ಲಿ ಅಜೇಯ ಅರ್ಧಶತಕ ಗಳಿಸಿರುವುದು ಸಮಾಧಾನಕರ ಬೆಳವಣಿಗೆ. ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜ, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ ಕೂಡ ಕಣಕ್ಕಿಳಿಯಲಿದ್ದಾರೆ. ಇತ್ತ ಬೂಮ್ರಾ, ಶಮಿ ಮತ್ತು ಪ್ರಸಿದ್ಧ ಕೃಷ್ಣ, ಚಹಲ್ ಅವರು ಸ್ಥಾನ ಉಳಿಸಿಕೊಳ್ಳುವುದು ಖಚಿತ.

ಇದನ್ನೂ ಓದಿ
Image
IND vs WI: ವೆಸ್ಟ್ ಇಂಡೀಸ್‌ ವಿರುದ್ಧದ ಟಿ20 ಸರಣಿಯಿಂದಲೂ ಕೊಹ್ಲಿ ಔಟ್..! ರಾಹುಲ್ ಕಥೆ ಏನು?
Image
ICC T20 Rankings: 44 ಸ್ಥಾನ ಜಿಗಿದು ಟಾಪ್ 5ನೇ ಸ್ಥಾನಕ್ಕೆ ಸೂರ್ಯಕುಮಾರ್ ಎಂಟ್ರಿ; ಟಾಪ್ 20ರಲ್ಲೂ ಇಲ್ಲ ಕೊಹ್ಲಿ..!
Image
66 ನೇ ವಯಸ್ಸಿನಲ್ಲಿ ಮದುವೆ: ಈಗ ಕೋಚ್ ಹುದ್ದೆಗೆ ರಾಜೀನಾಮೆ ನೀಡಿ ಹನಿಮೂನ್‌ಗೆ ಹಾರಿದ ಭಾರತದ ಮಾಜಿ ಕ್ರಿಕೆಟಿಗ
Image
Asia Cup 2022: ಶ್ರೀಲಂಕಾದಲ್ಲಿ ಬಗೆಹರಿಯದ ಬಿಕ್ಕಟ್ಟು; ಏಷ್ಯಾ ಕಪ್ ಬೇರೆಡೆ ಆಯೋಜಿಸಲು ಎಸಿಸಿ ಚಿಂತನೆ

ಇತ್ತ ಜೋಸ್ ಬಟ್ಲರ್​ಗೆ ಇದು ಮತ್ತೊಂದು ಅಗ್ನಿಪರೀಕ್ಷೆ. ಇಂಗ್ಲೆಂಡ್ ತಂಡದ ನಾಯಕನಾಗಿದ್ದ ಇಯಾನ್ ಮಾರ್ಗನ್ ನಾಯಕತ್ವ ತೊರೆದ ಬಳಿಕ ಕ್ಯಾಪ್ಟನ್ ಆಗಿರುವ ಬಟ್ಲರ್​ ಟಿ20 ಸರಣಿ ಕಳೆದುಕೊಂಡಿದ್ದರು. ಈಗ ಏಕದಿನ ಸರಣಿ ವಶಪಡಿಸಿಕೊಳ್ಳಬೇಕಾದರೆ ಇಂದು ಗೆಲ್ಲಲೇ ಬೇಕಿದೆ. ಆಂಗ್ಲರ ತಂಡದಲ್ಲಿ ಬೆನ್​ ಸ್ಟೋಕ್ಸ್​, ಜೋ ರೂಟ್​, ಬೈರ್​ಸ್ಟೋರಂತಹ ಬಲಿಷ್ಠ ಆಟಗಾರರಿದ್ದರು ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವುತ್ತಿದೆ. ಬ್ಯಾಟಿಂಗ್ ವೈಫಲ್ಯವನ್ನು ಸರಿಪಡಿಸಿಕೊಂಡರೆ, ಈ ಪಂದ್ಯದಲ್ಲಿ ಜಯಿಸುವ ಆಸೆ ಈಡೇರಬಹುದು.

ಲಾರ್ಡ್ಸ್‌ ಕ್ರೀಡಾಂಗಣದ ಪಿಚ್ ಮೊದಲಿನಿಂದಲೂ ಸ್ವಿಂಗ್ ಎಸೆತಗಳಿಗೆ ಹೆಚ್ಚು ನೆರವು ನೀಡುವ ಗುಣ ಹೊಂದಿದೆ. ಇಲ್ಲಿ 70 ಏಕದಿನ ಪಂದ್ಯಗಳು ನಡೆದಿವೆ. ಅದರಲ್ಲಿ ಇಲ್ಲಿ ದಾಖಲಾದ ಗರಿಷ್ಠ ಮೊತ್ತ 238 ರನ್. ಎರಡೂ ಇನಿಂಗ್ಸ್‌ಗಳಲ್ಲಿಯೂ ಬೌಲರ್‌ಗಳು ಹೆಚ್ಚು ಯಶಸ್ಸು ಕಂಡಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ಸಂಜೆ 5:30 ಕ್ಕೆ ಪ್ರಾರಂಭವಾಗಲಿದೆ. ಪಂದ್ಯದ ನೇರ ಪ್ರಸಾರವನ್ನು ಸೋನಿ ನೆಟ್‌ವರ್ಕ್‌ನ ಚಾನೆಲ್‌ನಲ್ಲಿ ನೋಡಬಹುದು. ಜೊತೆಗೆ ಹಿಂದಿಯಲ್ಲಿ ಸೋನಿ ಟೆನ್ 3 ನಲ್ಲಿ ವೀಕ್ಷಿಸಬಹುದು.

Published On - 7:49 am, Thu, 14 July 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?