AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan, ICC World Cup: ಎರಡು ಬದಲಾವಣೆ: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI ಪ್ರಕಟ

India vs Pakistan Playing XI, ICC World Cup 2023: ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಸಿಸಿ ಏಕದಿನ ವಿಶ್ವಕಪ್​ನ 12ನೇ ಪಂದ್ಯ ಭಾರತ ಹಾಗೂ ಪಾಕಿಸ್ತಾನ ನಡುವೆ ನಡೆಯುತ್ತಿದೆ. ಈಗಾಗಲೇ ಟಾಸ್ ಪ್ರಕ್ರಿಯೆ ಕೂಡ ನಡೆದಿದೆ. ಇಂದಿನ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡದ ಪ್ಲೇಯಿಂಗ್ ಇಲೆವೆನ್ ಹೇಗಿದೆ ಎಂಬುದನ್ನು ನೋಡೋಣ.

India vs Pakistan, ICC World Cup: ಎರಡು ಬದಲಾವಣೆ: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI ಪ್ರಕಟ
India Playing XI vs Pakistan
Vinay Bhat
|

Updated on:Oct 14, 2023 | 5:07 PM

Share

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ (ICC ODI World Cup) ಇಂದು ನಡೆಯುತ್ತಿರುವ 12ನೇ ಪಂದ್ಯದಲ್ಲಿ ಕ್ರಿಕೆಟ್ ಲೋಕದ ಬದ್ಧವೈರಿಗಳಾದ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಬಾಬರ್ ಅಝಂ ನೇತೃತ್ವದ ಪಾಕಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಪಂದ್ಯ ಶುರುವಾಗಲಿದೆ. ಸದ್ಯ ಟಾಸ್ ಪ್ರಕ್ರಿಯೆ ನಡೆದಿದ್ದು, ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳು ಕೂಡ ಬಲಿಷ್ಠ ಆಟಗಾರರನ್ನೇ ಕಣಕ್ಕಿಳಿಸಿದೆ. ಇಲ್ಲಿದೆ ನೋಡಿ ಭಾರತ-ಪಾಕಿಸ್ತಾನ ತಂಡದ ಪ್ಲೇಯಿಂಗ್ ಇಲೆವೆನ್.

ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಡೆಂಗ್ಯೂಯಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಶುಭ್​ಮನ್ ಗಿಲ್ ಆಡುವ ಬಳಗಕ್ಕೆ ಮರಳಿದ್ದಾರೆ. ಹೀಗಾಗಿ ಇಶಾನ್ ಕಿಶನ್ ಹೊರಬಿದ್ದಿದ್ದಾರೆ. ಅಂತೆಯೆ ಆರ್. ಅಶ್ವಿನ್ ಬದಲು ಶಾರ್ದೂಲ್ ಠಾಕೂರ್ ಸ್ಥಾನ ಪಡೆದುಕೊಂಡಿದ್ದಾರೆ.

Ind vs Pak ICC World Cup LIVE Score:

ಇದನ್ನೂ ಓದಿ
Image
ಭಾರತ-ಪಾಕ್ ಕದನದಲ್ಲಿ ಸೃಷ್ಟಿಯಾಗಬಹುದಾದ ಪ್ರಮುಖ ದಾಖಲೆಗಳಿವು
Image
ಭಾರತದ ಈ ಐದು ದಾಖಲೆಗಳನ್ನು ಮುರಿಯುವುದು ಪಾಕ್ ತಂಡಕ್ಕೆ ಅಸಾಧ್ಯ
Image
ಭಾರತ- ಪಾಕ್ ಪಂದ್ಯದಿಂದ ಡಿಸ್ನಿ-ಸ್ಟಾರ್​ಗೆ ಎಷ್ಟು ಕೋಟಿ ಆದಾಯ ಗೊತ್ತಾ?
Image
ಭಾರತ- ಪಾಕ್ ಪಂದ್ಯ; ಮೋದಿ ಮೈದಾನದ ಸುತ್ತ ಪೊಲೀಸ್ ಸರ್ಪಗಾವಲು

ಉಳಿದಂತೆ ಭರ್ಜರಿ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಈ ಪಂದ್ಯದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. 8 ಸ್ಲಾಟ್​ನಲ್ಲಿ ಶಾರ್ದೂಲ್ ಠಾಕೂರ್ ಇದ್ದಾರೆ. ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಪ್ರಮುಖ ಬೌಲರ್​ಗಳಾಗಿದ್ದಾರೆ.

ಇತ್ತ ಪಾಕ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕಳೆದ ಪಂದ್ಯದಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದ ಅಬ್ದುಲ್ಲಾ ಶಫೀಕ್ ಓಪನರ್ ಆಗಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ. ಇಮಾಮ್-ಉಲ್-ಹಕ್ ಇಂದಿನ ಪಂದ್ಯದಲ್ಲಿ ಮಿಂಚಬೇಕಿದೆ. ನಾಯಕ ಬಾಬರ್ ಅಝಂ ಫಾರ್ಮ್​ಗೆ ಮರಳಬೇಕಾದ ಅನಿವಾರ್ಯತೆ ಇದೆ. ಮೊಹಮ್ಮದ್ ರಿಜ್ವಾನ್ ಕಳೆದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ಲಯಕಂಡುಕೊಂಡಿದ್ದರು. ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್ ನಂತರದ ಸ್ಥಾನದಲ್ಲಿದ್ದರೆ, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.

ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಪಾಕಿಸ್ತಾನ ಪ್ಲೇಯಿಂಗ್ ಇಲೆವೆನ್: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಅಝಂ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:35 pm, Sat, 14 October 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ