T20 World Cup 2024: ‘ಅಮೆರಿಕ ಅಧ್ಯಕ್ಷರಿಗಿಂತ ಹೆಚ್ಚು’; ಭಾರತ- ಪಾಕ್ ಪಂದ್ಯಕ್ಕೆ ಭದ್ರತೆ ಹೇಗಿದೆ ಗೊತ್ತಾ?

T20 World Cup 2024: ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಭಯೋತ್ಪಾದಕ ದಾಳಿಯ ಬೆದರಿಕೆಯ ಕುರಿತು ನಸ್ಸೌ ಕೌಂಟಿಯ ಕಾರ್ಯನಿರ್ವಾಹಕ ಬ್ರೂಸ್ ಬ್ಲೇಕ್‌ಮ್ಯಾನ್ ಮಾತನಾಡಿದ್ದು, ‘ಇದರಲ್ಲಿ ಅನಿರೀಕ್ಷಿತ ಏನೂ ಇಲ್ಲ. ಭಾರತ ಹಾಗೂ ಪಾಕಿಸ್ತಾನದ ನಡುವೆ ಪಂದ್ಯ ನಡೆದಾಗ ಈ ರೀತಿಯ ಬೆದರಿಕೆಗಳು ಬರುವುದು ಸಹಜ. ಹೀಗಾಗಿ ಎಲ್ಲರನ್ನೂ ಸುರಕ್ಷಿತವಾಗಿರಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದರು

T20 World Cup 2024: ‘ಅಮೆರಿಕ ಅಧ್ಯಕ್ಷರಿಗಿಂತ ಹೆಚ್ಚು’; ಭಾರತ- ಪಾಕ್ ಪಂದ್ಯಕ್ಕೆ ಭದ್ರತೆ ಹೇಗಿದೆ ಗೊತ್ತಾ?
ಭಾರತ- ಪಾಕಿಸ್ತಾನ
Follow us
|

Updated on: Jun 08, 2024 | 6:29 PM

2024 ರ ಟಿ20 ವಿಶ್ವಕಪ್​ನಲ್ಲಿ (T20 World Cup 2024) ಭಾರತ ಮತ್ತು ಪಾಕಿಸ್ತಾನದ ಕ್ರಿಕೆಟ್ ಪ್ರೇಮಿಗಳು ಇಷ್ಟು ದಿನ ಕಾದು ಕುಳಿತಿದ್ದ ಸಮಯ ಬಂದಿದೆ. ನಾಳೆ ಭಾರತ ಹಾಗೂ ಪಾಕಿಸ್ತಾನ (India and Pakistan) ನಡುವೆ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಉಭಯ ತಂಡಗಳ ಕಾಳಗ ನಡೆದಾಗ ಭಯೋತ್ಪಾದಕ ದಾಳಿ ನಡೆಯುವ ಬಗ್ಗೆ ಎಚ್ಚರಿಕೆಯ ಸಂದೇಶಗಳು ಬರುವುದು ಸಹಜ. ಅದರಂತೆ ಈ ಪಂದ್ಯಕ್ಕೂ ಅದೇ ರೀತಿಯ ಬೆದರಿಕೆ ಒಡ್ಡಲಾಗಿದೆ. ಹೀಗಾಗಿ ಈ ಪಂದ್ಯದಲ್ಲಿ ಎರಡು ತಂಡಗಳ ಕ್ರಿಕೆಟಿಗರಿಗೆ ಸಂಪೂರ್ಣ ಭದ್ರತೆ ನೀಡಲು ಅಮೆರಿಕ ಅಧಿಕಾರಿಗಳು ಪೂರ್ಣ ಸಜ್ಜಾಗಿದ್ದಾರೆ. ಅಲ್ಲದೆ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ (Nassau County International Cricket Stadium) ಭಾರತ-ಪಾಕ್ ಪಂದ್ಯವನ್ನು ಸುರಕ್ಷಿತವಾಗಿ ಆಯೋಜಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನಸ್ಸೌ ಕೌಂಟಿ ಅಧಿಕಾರಿಗಳು ತಿಳಿಸಿದ್ದಾರೆ.

ಇದರಲ್ಲಿ ಅನಿರೀಕ್ಷಿತ ಏನೂ ಇಲ್ಲ

ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಭಯೋತ್ಪಾದಕ ದಾಳಿಯ ಬೆದರಿಕೆಯ ಕುರಿತು ನಸ್ಸೌ ಕೌಂಟಿಯ ಕಾರ್ಯನಿರ್ವಾಹಕ ಬ್ರೂಸ್ ಬ್ಲೇಕ್‌ಮ್ಯಾನ್ ಮಾತನಾಡಿದ್ದು, ‘ಇದರಲ್ಲಿ ಅನಿರೀಕ್ಷಿತ ಏನೂ ಇಲ್ಲ. ಭಾರತ ಹಾಗೂ ಪಾಕಿಸ್ತಾನದ ನಡುವೆ ಪಂದ್ಯ ನಡೆದಾಗ ಈ ರೀತಿಯ ಬೆದರಿಕೆಗಳು ಬರುವುದು ಸಹಜ. ಹೀಗಾಗಿ ಎಲ್ಲರನ್ನೂ ಸುರಕ್ಷಿತವಾಗಿರಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ನಾವು ಪರಿಸ್ಥಿತಿಯನ್ನು ನಿಭಾಯಿಸುವ ವಿಶ್ವಾಸವಿದೆ.

ಭಾರತ- ಪಾಕ್ ಪಂದ್ಯಕ್ಕೂ ಮುನ್ನ ನ್ಯೂಯಾರ್ಕ್ ಪಿಚ್ ಬದಲಾವಣೆಗೆ ಮುಂದಾದ ಐಸಿಸಿ..!

ಕ್ರಿಕೆಟ್ ಆಡುವುದು ನಮಗೆ ಹೊಸದು

ವಾಸ್ತವವಾಗಿ ಯುಎಸ್‌ಗೆ ವಿಶ್ವಕಪ್ ಹೊಸದು, ಆದರೆ ಅಲ್ಲಿನ ಅಧಿಕಾರಿಗಳ ಪ್ರಕಾರ, ಅವರಿಗೆ ಕ್ರಿಕೆಟ್ ಈವೆಂಟ್‌ಗಳನ್ನು ಆಯೋಜಿಸುವಲ್ಲಿ ಅನುಭವವಿಲ್ಲದಿರಬಹುದು, ಆದರೆ ಅವರಿಗೆ ಭದ್ರತೆ ಒದಗಿಸುವಲ್ಲಿ ಅನುಭವವಿದೆ. ಅಮೆರಿಕದ ಮಾಜಿ ಅಧ್ಯಕ್ಷರಿಗಿಂತ ಭಾರತ-ಪಾಕಿಸ್ತಾನ ಪಂದ್ಯಕ್ಕೆ ಹೆಚ್ಚಿನ ಮಹತ್ವ ಸಿಗುತ್ತಿದೆ. ನಸ್ಸೌ ಕೌಂಟಿ ಪೊಲೀಸ್ ಕಮಿಷನರ್ ಪ್ಯಾಟ್ರಿಕ್ ರೈಡರ್ ಮಾಧ್ಯಮ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ‘ಕ್ರಿಕೆಟ್ ಆಡುವುದು ನಮಗೆ ಹೊಸದೇ ಆಗಿರಬಹುದು, ಆದರೆ ಭದ್ರತೆ ಒದಗಿಸುವುದು ಅಲ್ಲ. ಕೆಲವು ವರ್ಷಗಳ ಹಿಂದೆ ನಾವು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ಭದ್ರತೆ ಒದಗಿಸಿದ್ದೇವು. ಆದರೆ ಈಗ ನಡೆಯುತ್ತಿರುವ ಭಾರತ-ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಅದಕ್ಕಿಂತಲೂ ಹೆಚ್ಚಿನ ಮಟ್ಟದ ಭದ್ರತೆಯನ್ನು ಒದಗಿಸಲಾಗುತ್ತಿದೆ ಎಂದರು.

ಮೂಲೆ ಮೂಲೆಗಳಲ್ಲಿ ಕ್ಯಾಮೆರಾ

ನಸ್ಸೌ ಕೌಂಟಿ ಪೊಲೀಸ್ ಕಮಿಷನರ್ ಪ್ಯಾಟ್ರಿಕ್ ರೈಡರ್ ಮಾತನಾಡಿ, ನಗರದ ಸುತ್ತಲೂ ವಿಶೇಷ ಕಣ್ಗಾವಲು ಒದಗಿಸಲು ಗಸ್ತುಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಕ್ರೀಡಾಂಗಣಕ್ಕೆ ಹೋಗುವ ಎಲ್ಲಾ ರಸ್ತೆಗಳಲ್ಲಿ ಮತ್ತು ಕ್ರೀಡಾಂಗಣದ ಮೂಲೆ ಮೂಲೆಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರಿಂದ ಯಾವುದೇ ಅನುಮಾನಾಸ್ಪದ ಸನ್ನಿವೇಶ ಕಂಡುಬಂದಲ್ಲಿ ಪೊಲೀಸರು ಕ್ರಮ ಕೈಗೊಳ್ಳಲ್ಲಿದ್ದಾರೆ ಎಂದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!