AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL Test: ಇಂದಿನಿಂದ ಭಾರತ-ಶ್ರೀಲಂಕಾ ಮೊದಲ ಟೆಸ್ಟ್: ಮೊಹಾಲಿ ಪಿಚ್ ಹೇಗಿದೆ?, ಯಾರಿಗೆ ಹೆಚ್ಚು ಸಹಕಾರಿ?

India vs Sri Lanka, 1st Test: ಶ್ರೀಲಂಕಾ ವಿರುದ್ಧದ ಟಿ20 ಸರಣಿ ವಶಪಡಿಸಿಕೊಂಡು ಸೋಲಿಲ್ಲದ ಸರದಾರನಾಗಿ ಮೆರೆಯುತ್ತಿರುವ ಟೀಮ್ ಇಂಡಿಯಾ ಇದೀಗ ಟೆಸ್ಟ್ ಸರಣಿಗೆ ಸಜ್ಜಾಗಿದೆ. ಇಲ್ಲೂ ತನ್ನ ಗೆಲುವಿನ ಓಟ ಮುಂದುವರೆಸುತ್ತಾ ಎಂಬ ಕುತೂಹಲ ಇದೆ.

IND vs SL Test: ಇಂದಿನಿಂದ ಭಾರತ-ಶ್ರೀಲಂಕಾ ಮೊದಲ ಟೆಸ್ಟ್: ಮೊಹಾಲಿ ಪಿಚ್ ಹೇಗಿದೆ?, ಯಾರಿಗೆ ಹೆಚ್ಚು ಸಹಕಾರಿ?
IND vs SL 1st Test
TV9 Web
| Edited By: |

Updated on:Mar 04, 2022 | 8:12 AM

Share

ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಕ್ಲೀಸ್​ಸ್ವೀಪ್ ಮಾಡಿ ಮೆರೆದಿರುವ ಭಾರತ (India vs Sri Lanka) ತಂಡ ಇದೀಗ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದಿನಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಮೊಹಾಲಿ ಟೆಸ್ಟ್ ಪ್ರಮುಖವಾಗಿ ಮೂರು ವಿಚಾರಗಳಿಗೆ ಸಾಕಷ್ಟು ಕುತೂಹಲ ಕೆರಳಿಸುವಂತೆ ಮಾಡಿದೆ. ಮೊದಲನೆಯದಾಗಿ ರೋಹಿತ್ ಶರ್ಮಾ (Rohit Sharma) ಪರಿಪೂರ್ಣ ನಾಯಕನಾಗಿ ಇದೇ ಮೊದಲ ಬಾರಿಗೆ ಭಾರತ ಟೆಸ್ಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಏಕದಿನ ಮತ್ತು ಟಿ20 ಯಲ್ಲಿ ಹಿಟ್​ಮ್ಯಾನ್ ನಾಯಕತ್ವದಡಿಯಲ್ಲಿ ಬೊಂಬಾಟ್ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ ಟೆಸ್ಟ್​ನಲ್ಲಿ ಹೇಗೆ ಆಟವಾಡುತ್ತೇ ಎಂಬುದು ನೋಡಬೇಕಿದೆ. ಎರಡನೇಯದಾಗಿ ಈ ಟೆಸ್ಟ್ ವಿರಾಟ್ ಕೊಹ್ಲಿಗೆ 100ನೇ ಟೆಸ್ಟ್ (Kohli 100th Test). ಶತಕದ ಟೆಸ್ಟ್ ಪಂದ್ಯದಲ್ಲಿ ಶತಕ ಬರಲಿದೆ ಎಂಬ ನಿರೀಕ್ಷೆಯಿದೆ. ಮೂರನೇಯದಾಗಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟಿ20 ಜೊತೆಗೆ ಶ್ರೀಲಂಕಾ ವಿರುದ್ಧದ ಟಿ20 ಸರಣಿ ವಶಪಡಿಸಿಕೊಂಡು ಸೋಲಿಲ್ಲದ ಸರದಾರನಾಗಿ ಮೆರೆಯುತ್ತಿರುವ ಟೀಮ್ ಇಂಡಿಯಾ ತನ್ನ ಗೆಲುವಿನ ಓಟ ಮುಂದುವರೆಸುತ್ತಾ ಎಂಬ ಕುತೂಹಲ ಕೂಡ ಇದೆ.

ಮೊಹಾಲಿ ಪಿಚ್ ಹೇಗಿದೆ?:

ದೇಶದ ಇತರ ನಗರಗಳ ಮೈದಾನಗಳಿಗೆ ಹೋಲಿಸಿದರೆ ಪಂಜಾಬ್ ಕ್ರಿಕೆಟ್ ಅಸೋಸಿಯೇಶನ್‌ನ ಈ ಪಿಚ್ ಹೆಚ್ಚು ಹಸಿರಿನಿಂದ ಕೂಡಿದೆ. ಹೀಗಾಗಿ ವೇಗದ ಬೌಲರ್‌ಗಳು ಈ ಪಿಚ್‌ನಿಂದ ಹೆಚ್ಚಿನ ನೆರವನ್ನು ನಿರೀಕ್ಷಿಸಬಹುದು. ಅಲ್ಲದೆ ಬೌನ್ಸ್ ಕೂಡ ವೇಗಿಗಳಿಗೆ ನೆರವಾಗುವ ಸಾಧ್ಯತೆಯಿದೆ. ಆದರೆ ಪಿಚ್‌ನಲ್ಲಿ ಬಿರುಕುಂಟಾಗುವ ಕಾರಣ ಪಂದ್ಯದ ಅಂತಿಮ ಎರಡು ದಿನಗಳಲ್ಲಿ ಸ್ಪಿನ್ನರ್‌ಗಳು ಮಹತ್ವದ ಪಾತ್ರವಹಿಸುವ ಸಾಧ್ಯತೆಯಿದೆ. ಎರಡು ತಂಡಗಳು ಕೂಡ ಪ್ರತಿಭಾವಂತ ಸ್ಪಿನ್ನರ್‌ಗಳನ್ನು ಹೊಂದಿರುವ ಕಾರಣ ಸಾಕಷ್ಟು ಕುತೂಹಲ ಮೂಡಿಸಿದೆ.

ಭಾರತದ ಪ್ಲೇಯಿಂಗ್ XI ಹೇಗಿರಲಿದೆ?:

ನಾಯಕ ರೋಹಿತ್ ಶರ್ಮಾ ಜೊತೆ ಓಪನರ್ ಆಗಿ ಕಣಕ್ಕಿಳಿಯುವ ಮಯಾಂಕ್ ಅಗರ್ವಾಲ್ ಮತ್ತು ಶುಭ್ಮನ್ ಗಿಲ್ ಇಬ್ಬರು ಬ್ಯಾಟ್ಸ್​ಮನ್​ಗಳು ತಯಾರಿದ್ದಾರೆ. ಆದರೆ, ಚೇತೇಶ್ವರ್ ಪೂಜಾರ ಇಲ್ಲದಿರುವ ಕಾರಣ ರೋಹಿತ್ ಜೊತೆ ಮಯಾಂಕ್ ಅಗರ್ವಾನ್ ಇನ್ನಿಂಗ್ಸ್ ಆರಂಭಿಸಲಿದ್ದು, ಮೂರನೇ ಕ್ರಮಾಂಕದಲ್ಲಿ ಶುಭ್ಮನ್ ಗಿಲ್ ಆಡಲಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ 100ನೇ ಟೆಸ್ಟ್ ಪಂದ್ಯವನ್ನಾಡಲು 4ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಬರಲಿದ್ದಾರೆ. ಶ್ರೇಯಸ್ ಅಯ್ಯರ್ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಮತ್ತು ಅರ್ಧಶತಕ ಸಿಡಿಸಿ ಅಬ್ಬರಿಸಿದ್ದರು. ಹೀಗಾಗಿ ರಹಾನೆ ಆಡುತ್ತಿದ್ದ ಐದನೇ ಕ್ರಮಾಂಕದಲ್ಲಿ ಅಯ್ಯರ್ ಕಣಕ್ಕಿಳಿಯಬಹುದು. ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಭ್ ಪಂತ್ ನಂತರದ ಸ್ಥಾನದಲ್ಲಿ ಆಡಲಿದ್ದಾರೆ. ಹನುಮಾ ವಿಹಾರಿ ಕೂಡ ಸ್ಥಾನ ಪಡೆಯುವ ಸಂಭವವಿದ್ದು ಫಾರ್ಮ್​ನಲ್ಲಿದ್ದಾರೆ.

ಆಲ್ರೌಂಡರ್ ರವೀಂದ್ರ ಜಡೇಜಾ ಕೂಡ ಹಲವು ತಿಂಗಳುಗಳ ಬಳಿಕ ಟೆಸ್ಟ್​ ಕ್ರಿಕೆಟ್​ನಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಇವರಿಗೆ ಜೊತೆಯಾಗಿ ರವಿಚಂದ್ರನ್ ಅಶ್ವಿನ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸುವುದು ಖಚಿತ. ವೇಗಿಗಳಾಗಿ ಮೂವರು ಬೆಂಕಿಯ ಚೆಂಡು ಉಗುಳಲು ಕಾತುರರಾಗಿದ್ದಾರೆ. ಉಪ ನಾಯಕ ಜಸ್​ಪ್ರೀತ್ ಬುಮ್ರಾ ಮುಂದಾಳತ್ವದಲ್ಲಿ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಸ್ಥಾನ ಪಡೆದುಕೊಳ್ಳಬಹುದು.

ಶ್ರೀಲಂಕಾ ಮಾಸ್ಟರ್ ಪ್ಲಾನ್:

ಟೆಸ್ಟ್ ಮಾದರಿಯಲ್ಲಿ ಅತ್ಯಂತ ಬಲಿಷ್ಠವಾಗಿರುವ ಭಾರತ ತಂಡವನ್ನು ದಿಟ್ಟವಾಗಿ ಎದುರಿಸಲು ಶ್ರೀಲಂಕಾ ಪಡೆ ರಣತಂತ್ರಗಳನ್ನು ಹೆಣೆಯುತ್ತಿದ್ದು ಅದಕ್ಕಾಗಿ ಮಹತ್ವದ ನಿರ್ಧಾರವೊಂದ ಲಂಕಾ ಪಡೆ ಮುಂದಾಗಿದೆ ಎನ್ನಲಾಗಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ನಾಯಕ ದಿಮುತ್ ಕರುಣರತ್ನೆ, ಏಂಜೆಲೊ ಮ್ಯಾಥ್ಯೂಸ್, ದಿನೇಶ್ ಚಾಂಡಿಮಲ್ ಅವರಂಥ ಅನುಭವಿಗಳ ಬಲ ಹೊಂದಿದೆ. ಬೌಲಿಂಗ್‌ನಲ್ಲೂ ಲಸಿತ್ ಎಂಬುಲ್ಡೆನಿಯಾ, ಸುರಂಗ ಲಕ್ಮಲ್, ಆಲ್ರೌಂಡರ್ ಧನಂಜಯ ಡಿಸಿಲ್ವ ಭಾರತಕ್ಕೆ ಹೊಸ ಸವಾಲಾಗಲಿದ್ದಾರೆ. ಆದರೆ ಅಂಥ ಅಜುನ್ ರಣತುಂಗ, ಸನತ್ ಜಯಸೂರ್ಯ, ಅರವಿಂದ ಡಿಸಿಲ್ವ ಕಾಲದಲ್ಲೇ ಲಂಕಾ ತಂಡಕ್ಕೆ ಭಾರತದಲ್ಲಿ ಒಂದೂ ಟೆಸ್ಟ್ ಗೆಲ್ಲಲು ಸಾಧ್ಯವಾಗಿರಲಿಲ್ಲ ಎಂಬುದು ಗಮನಾರ್ಹ.

ಪಂದ್ಯ ಎಷ್ಟು ಗಂಟೆಗೆ ಆರಂಭ?:

ಭಾರತ ಹಾಗೂ ಶ್ರೀಲಂಕಾ ನಡುವಣ ಮೊದಲ ಟೆಸ್ಟ್ ಪಂದ್ಯ ಮೊಹಾಲಿಯ ಪಂಜಾಬ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊದಲ ಟೆಸ್ಟ್ ಆಯೋಜನೆ ಮಾಡಲಾಗಿದೆ. ಬೆಳಗ್ಗೆ 9:30ಕ್ಕೆ ಮ್ಯಾಚ್ ಶುರುವಾಗಲಿದ್ದು, ಸರಿಯಾಗಿ 9 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಟಾರ್ ಸ್ಫೋರ್ಟ್ಸ್​ ನೆಟ್​ವರ್ಕ್​ನಲ್ಲಿ ನೇರಪ್ರಸಾರ ಕಾಣಲಿದೆ. ಆನ್​ಲೈನ್​ನಲ್ಲಾದರೆ ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ನಲ್ಲಿ ಲೈವ್ ವೀಕ್ಷಿಸಬಹುದು.

IND vs SL: ಮೊಹಾಲಿ ಟೆಸ್ಟ್​ ಮೂಲಕ ಭಾರತ ಟೆಸ್ಟ್ ಕ್ರಿಕೆಟ್​ಗೆ ಹೊಸ ಅಧ್ಯಾಯ ಬರೆಯಲಿದೆ ರೋಹಿತ್ ಪಡೆ

Published On - 7:22 am, Fri, 4 March 22

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!